Best Smartphones Under Rs 20,000: ಪ್ರಸ್ತುತ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಭಾರೀ ಸ್ಪರ್ಧೆ ನಡೆಯುತ್ತಿದ್ದು, ಪ್ರಮುಖ ಮೊಬೈಲ್ ಕಂಪನಿಗಳು ಹೊಸ ಹೊಸ ಫೋನ್‌ಗಳನ್ನು ಪರಿಚಯಿಸುವ ಮೂಲಕ ಗ್ರಾಹಕರ ಗಮನ ಸೆಳೆಯುತ್ತಿವೆ. ವಿಶೇಷವಾಗಿ 20,000 ರೂ.ಗಳ ಒಳಗಿನ ಬಜೆಟ್ ವಿಭಾಗದಲ್ಲಿ ಪೈಪೋಟಿ ಇನ್ನಷ್ಟು ಹೆಚ್ಚಾಗಿದೆ. ಬಜೆಟ್ ಬೆಲೆಯಲ್ಲೇ ಉತ್ತಮ ಕ್ಯಾಮೆರಾ, ಬಿಗ್ ಬ್ಯಾಟರಿ, ವೇಗವಾದ ಪ್ರೊಸೆಸರ್ ಹಾಗೂ 5G ಸೌಲಭ್ಯ ನೀಡುವ ಫೋನ್‌ಗಳಿಗೆ ಇದೀಗ ಬೇಡಿಕೆ ಹೆಚ್ಚಾಗಿದೆ. ಇತ್ತೀಚೆಗೆ Redmi, Motorola, Vivo ಹಾಗೂ POCO ಕಂಪನಿಗಳು ಹೊಸ ಬಜೆಟ್ 5G ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿವೆ. ಇನ್ನು ನೀವೇನಾದರೂ ಸುಮಾರು 20,000 ರೂ.ಗಳ ಬೆಲೆಯಲ್ಲಿ ಹೊಸ 5G ಮೊಬೈಲ್ ಖರೀದಿಸುವ ಯೋಚನೆ ಹೊಂದಿದ್ದರೆ, ಈ ಲೇಖನ ನಿಮಗೆ ಉಪಯುಕ್ತವಾಗಬಹುದು.
Also Read : ಟ್ರಿಪಲ್ ಕ್ಯಾಮೆರಾ ಇರುವ Motorola Edge 60 Pro ಮೊಬೈಲ್‌ಗೆ ಈಗ ಭಾರೀ ಡಿಸ್ಕೌಂಟ್!
ಒನ್‌ಪ್ಲಸ್ ಕಂಪನಿಯ ಈ ಸ್ಮಾರ್ಟ್‌ಫೋನ್ 6.72 ಇಂಚಿನ ಡಿಸ್‌ಪ್ಲೇ ಪಡೆದಿದೆ. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಪೆಕ್ಸ್ ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದ್ದು, 6GB RAM + 128GB ಸ್ಟೋರೇಜ್ ಆಯ್ಕೆ ಪಡೆದಿದೆ. ಇದರೊಂದಿಗೆ ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಪಡೆದಿದ್ದು, 45W ಸೂಪರ್‌ವೂಕ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
ಮೊಟೊ ಕಂಪನಿಯ ಈ ಸ್ಮಾರ್ಟ್‌ಫೋನ್ 6.72 ಇಂಚಿನ ಡಿಸ್‌ಪ್ಲೇ ಪಡೆದಿದೆ. ಅಲ್ಲದೇ ಇದು ಸ್ನಾಪ್‌ಡ್ರಾಗನ್ 6s ಜನ್ 4 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದ್ದು, ಹಾಗೆಯೇ 8GB RAM + 128 GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಇದರೊಂದಿಗೆ ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಪಡೆದಿದ್ದು, 30W Turbo ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
ಐಕ್ಯೂ ಸಂಸ್ಥೆಯ ಈ ಸ್ಮಾರ್ಟ್‌ಫೋನ್ 6.76 ಇಂಚಿನ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಇದು ಮೀಡಿಯಾಟೆಕ್ ಡೈಮೆನ್ಸಿಟಿ 7400 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ 6GB RAM + 128GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7200 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಪಡೆದಿದ್ದು, 44W ಚಾರ್ಜಿಂಗ್ ಸಪೋರ್ಟ್ ಪಡೆದಿದೆ.