Airtel vs Jio vs Vi: ರೀಚಾರ್ಜ್‌ ಮಾಡಲು ಯಾವ ವಾರ್ಷಿಕ ವ್ಯಾಲಿಡಿಟಿ ಪ್ಲಾನ್ ಅತ್ಯುತ್ತಮ?

HIGHLIGHTS

ಜಿಯೋ, ವಿ, ಏರ್‌ಟೆಲ್‌ ಸಂಸ್ಥೆಗಳು ವಾರ್ಷಿಕ ಪ್ಲಾನ್‌ಗಳ ಆಯ್ಕೆ ಹೊಂದಿವೆ

ಈ ವಾರ್ಷಿಕ ಯೋಜನೆಗಳು ಆಕರ್ಷಕ ಪ್ರತಿದಿನ ಡೇಟಾ ಪ್ರಯೋಜನ ಪಡೆದಿವೆ

ಈ ಮೂರು ಟೆಲಿಕಾಂಗಳ ವಾರ್ಷಿಕ ಪ್ಲಾನ್‌ಗಳಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಸೌಲಭ್ಯ

ಮೊಬೈಲ್ ಬಳಕೆದಾರರು ಸಾಮಾನ್ಯವಾಗಿ ದೀರ್ಘಾವಧಿಯ ಯೋಜನೆಗಳನ್ನು ರೀಚಾರ್ಜ್ ಮಾಡಲು ಮುಂದಾಗುತ್ತಾರೆ. ಅದರಲ್ಲೂ ಪ್ರತಿ ತಿಂಗಳು ರೀಚಾರ್ಜ್ ಮಾಡುವ ಕಿರಿ ಕಿರಿಯನ್ನು ತಪ್ಪಿಸಲು ಅನೇಕರು ವಾರ್ಷಿಕ ಪ್ಲಾನ್‌ಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಭಾರತದ ಪ್ರಮುಖ ಟೆಲಿಕಾಂ ಕಂಪನಿಗಳಾದ Airtel, Jio ಮತ್ತು Vi ಟೆಲಿಕಾಂಗಳು ತಮ್ಮ ಗ್ರಾಹಕರಿಗೆ 365 ದಿನಗಳವರೆಗೆ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳ ಆಯ್ಕೆ ನೀಡಿವೆ. ಅಲ್ಲದೇ ಈ ವಾರ್ಷಿಕ ಪ್ಲಾನ್‌ಗಳು ಅನಿಯಮಿತ ವಾಯ್ಸ್‌ ಕರೆ, ದಿನನಿತ್ಯದ ಡೇಟಾ ಮತ್ತು SMS ಸೌಲಭ್ಯಗಳನ್ನು ಒಳಗೊಂಡಿವೆ. ಇನ್ನು ಕೆಲವು ಪ್ಲಾನ್‌ಗಳಲ್ಲಿ OTT ಸೌಲಭ್ಯಗಳು ಮತ್ತು ಹೆಚ್ಚುವರಿ ಡೇಟಾ ಪ್ರಯೋಜನಗಳೂ ಲಭ್ಯವಿವೆ. ಹಾಗಾದರೆ Airtel, Jio ಮತ್ತು Vi ಟೆಲಿಕಾಂಗಳ ವಾರ್ಷಿಕ ಪ್ಲಾನ್‌ಗಳ ಮಾಹಿತಿ ಮುಂದೆ ತಿಳಿಯೋಣ.

Also Read : 200MP ಕ್ಯಾಮೆರಾ ಒಳಗೊಂಡ Redmi Note 15 Pro 5G ಬೆಲೆಯಲ್ಲಿ ಸಖತ್‌ ಇಳಿಕೆ!

Jio ಟೆಲಿಕಾಂನ ವಾರ್ಷಿಕ ಪ್ಲಾನ್‌ಗಳು

ಜಿಯೋ 3599 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ 2.5GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ.

ಜಿಯೋ 3999 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ 2.5GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಇದರೊಂದಿಗೆ ಫ್ಯಾನ್‌ಕೋಡ್‌ ಚಂದಾದಾರಿಕೆ ಲಭ್ಯ.

Airtel ಟೆಲಿಕಾಂನ ವಾರ್ಷಿಕ ಪ್ಲಾನ್‌ಗಳು

ಏರ್‌ಟೆಲ್‌ ಟೆಲಿಕಾಂನ 3,999 ರೂ.ಗಳ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯವಾಗುತ್ತದೆ. ಈ ಪ್ರೀಪೇಯ್ಡ್‌ ಪ್ಲಾನಿನಲ್ಲಿ ಅನಿಯಮಿತ ಡೇಟಾ (ಪ್ರತಿದಿನ 2.5GB ಡೇಟಾ) ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಅಲ್ಲದೇ ಜಿಯೋಹಾಟ್‌ ಸ್ಟಾರ್‌ ಚಂದಾದಾರಿಕೆಯ ಸೌಲಭ್ಯ ಸಹ ಪಡೆದಿದೆ.

ಏರ್‌ಟೆಲ್‌ ಟೆಲಿಕಾಂನ 3,599 ರೂ.ಗಳ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಪ್ರೀಪೇಯ್ಡ್‌ ಪ್ಲಾನಿನಲ್ಲಿ ಅನಿಯಮಿತ ಡೇಟಾ (ಪ್ರತಿದಿನ 2.5GB ಡೇಟಾ) ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಸಿಗಲಿದೆ. ಹಾಗೆಯೇ ಅಡೋಬ್ ಎಕ್ಸ್‌ಪ್ರೆಸ್‌ ಪ್ರಿಮಿಯಂ ಚಂದಾದಾರಿಕೆ ಲಭ್ಯ.

Vi ಟೆಲಿಕಾಂನ ವಾರ್ಷಿಕ ಪ್ಲಾನ್‌ಗಳು

ವಿ ಟೆಲಿಕಾಂನ 3599 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ 2GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌ ಸೌಲಭ್ಯ ಸಿಗಲಿದೆ.

ವಿ ಕಂಪನಿಯ 3999 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ 2GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ ಅಮೆಜಾನ್‌ ಪ್ರೈಮ್‌ ಲೈಟ್‌ ಹಾಗೂ ಜಿಯೋ ಹಾಟ್‌ಸ್ಟಾರ್‌ ಚಂದಾದಾರಿಕೆ ಲಭ್ಯ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :