Karnataka SIR: ಕರಡು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಪರಿಶೀಲಿಸಲು ಹೀಗೆ ಮಾಡಿ
ಕರ್ನಾಟಕ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಇದೀಗ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪರಿಷ್ಕರಣೆಯ ಬಳಿಕ ರಾಜ್ಯದಲ್ಲಿ ಒಟ್ಟು 1,07,96,339 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಇದರೊಂದಿಗೆ ಒಟ್ಟು ಮತದಾರರ ಸಂಖ್ಯೆಯಲ್ಲಿ ಸುಮಾರು ಶೇ.20 ರಷ್ಟು ಇಳಿಕೆಯಾಗಿದೆ. ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಅಥವಾ ತಿದ್ದುಪಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23 ರ ವರೆಗೆ ಅವಕಾಶ ನೀಡಲಾಗಿದೆ.
SurveyAlso Read : 6,500mAh ಬ್ಯಾಟರಿ ಇರುವ Oppo K14x 5G ಬೆಲೆಯಲ್ಲಿ ಭಾರೀ ಇಳಿಕೆ! ಸಖತ್ ಉಳಿತಾಯ
SIR: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
ವಿವಿಧ ಕಾರಣಗಳಿಂದ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವವರು ಸೂಕ್ತ ದಾಖಲೆ ಅಥವಾ ಕಾರಣಗಳನ್ನು ನೀಡಿ ಮತ್ತೆ ತಮ್ಮ ಹೆಸರನ್ನು ಸೇರ್ಪಡೆ ಮಾಡಿಸಿಕೊಳ್ಳಬಹುದು. ಇದಕ್ಕಾಗಿ ಅಗತ್ಯವಿರುವ ಫಾರಂ 6 ಅಥವಾ ಫಾರಂ 8 ಅನ್ನು ಬಳಸಬಹುದಾಗಿದೆ. ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 27 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಪರಿಶೀಲಿಸುವುದು ಹೇಗೆ?
ಮತದಾರರು ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಪರಿಶೀಲಿಸಬಹುದು.
ಆನ್‌ಲೈನ್ ಮೂಲಕ ಪರಿಶೀಲಿಸುವುದು ಹೇಗೆ?
- Election Commission of India ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
- EPIC ನಂಬರ್ (Voter ID) ಮೂಲಕ, ನಿಮ್ಮ ವಿವರಗಳ ಮೂಲಕ (Search by Details) ಅಥವಾ ಮೊಬೈಲ್ ಸಂಖ್ಯೆಯ ಮೂಲಕ ಹುಡುಕಲು ಆಯ್ಕೆ ಮಾಡಿ.
- ನಿಮ್ಮ EPIC ಸಂಖ್ಯೆ ಮತ್ತು ರಾಜ್ಯದ ಹೆಸರನ್ನು ನಮೂದಿಸಿ.
- ಕ್ಯಾಪ್ಚಾ (Captcha) ಕೋಡ್ ನಮೂದಿಸಿ ‘Search’ ಮೇಲೆ ಕ್ಲಿಕ್ ಮಾಡಿ.ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಸಂಪೂರ್ಣ ವಿವರಗಳು ಪರದೆಯ ಮೇಲೆ ಕಾಣಿಸಿಕೊಳ್ಳುತ್ತವೆ
ಕರಡು ಮತದಾರರ ಪಟ್ಟಿಯನ್ನು ಡೌನ್‌ಲೋಡ್ ಮಾಡಲು ECI ವೆಬ್‌ಸೈಟ್. ವೆಬ್‌ಸೈಟ್‌ನಲ್ಲಿ ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿಕೊಂಡ ನಂತರ ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಬೇಕು. ಬಳಿಕ ಸಂಬಂಧಪಟ್ಟ ಬೂತ್‌ನ ಮತದಾರರ ಪಟ್ಟಿಯ PDF ಲಭ್ಯವಾಗುತ್ತದೆ. ಈ PDFನಲ್ಲಿ ನಿಮ್ಮ ಹೆಸರು ಹುಡುಕಬಹುದು. ಅಥವಾ https://electoralsearch.eci.gov.in/ ಮೂಲಕ ಚೆಕ್ ಮಾಡಬಹುದು.
ಎಸ್‌ಎಂಎಸ್ ಅಥವಾ ಸಹಾಯವಾಣಿ ಮೂಲಕ ಚೆಕ್ ಮಾಡಬಹುದು
- ನಿಮ್ಮ ಮೊಬೈಲ್‌ನಿಂದ 1950 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
- ಅಥವಾ ನಿಗದಿತ ನಮೂನೆಯಲ್ಲಿ 1950 ಸಂಖ್ಯೆಗೆ ಎಸ್‌ಎಂಎಸ್ ಕಳುಹಿಸುವ ಮೂಲಕವೂ ಪರಿಶೀಲಿಸಬಹುದು.
- ನಿಮ್ಮ ಹತ್ತಿರದ ಬೂತ್ ಮಟ್ಟದ ಅಧಿಕಾರಿಯನ್ನು (BLO) ಕೂಡ ಸಂಪರ್ಕಿಸಬಹುದು.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
