ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಚಿತ್ರದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಯ್ತು!

HIGHLIGHTS

ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಬರ್ಟ್ ಸಿನಿಮಾದ ನಂತರ ಕೈಗೆತ್ತಿಕೊಂಡಿರುವ ಹೊಸ ಸಿನಿಮಾವೆ ಈ ಕ್ರಾಂತಿ (Kranti).

ಈಗಾಗಲೇ ಕ್ರಾಂತಿ (Kranti) ಚಿತ್ರದ ಫಸ್ಟ್ ಲುಕ್ ಮತ್ತು ಟೀಸರ್ ಕೂಡ ರಿಲೀಸ್ ಆಗಿದೆ.

ಕ್ರಾಂತಿ (Kranti) ಸಿನಿಮಾ ಇದೇ ವರ್ಷ ನವೆಂಬರ್‌ನಲ್ಲಿ ತೆರೆ ಕಾಣಲಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಚಿತ್ರದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಯ್ತು!

ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenge Star Darshan) ರಾಬರ್ಟ್ ಸಿನಿಮಾದ ನಂತರ ಕೈಗೆತ್ತಿಕೊಂಡಿರುವ ಹೊಸ ಸಿನಿಮಾವೆ ಈ ಕ್ರಾಂತಿ (Kranti). ಈಗಾಗಲೇ ಕ್ರಾಂತಿ (Kranti) ಚಿತ್ರದ ಫಸ್ಟ್ ಲುಕ್ ಮತ್ತು ಟೀಸರ್ ಕೂಡ ರಿಲೀಸ್ ಆಗಿದೆ. ಚಿತ್ರದಲ್ಲಿ ದರ್ಶನ್ ಯಾವ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಟೀಸರ್‌ನಲ್ಲಿ ರಿವೀಲ್ ಆಗಿದೆ. ಇದು ದರ್ಶನ್ ಅವರ 55ನೇ ಸಿನಿಮಾ ಎನ್ನುವುದು ವಿಶೇಷ. ಈಗಾಗಲೇ ಕ್ರಾಂತಿ (Kranti) ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ದೊಡ್ಡ ಮಟ್ಟದಲ್ಲಿ ಟ್ರೆಂಡ್ ಹುಟ್ಟು ಹಾಕಿದೆ.

Digit.in Survey
✅ Thank you for completing the survey!

ದರ್ಶನ್ ಈ ಕ್ರಾಂತಿ (Kranti) ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಕೊಳ್ಳುತ್ತಿದ್ದಾರೆ. ಟೀಸರ್‌ನಲ್ಲಿ ಸೂಟು, ಬೂಟು ತೊಟ್ಟು ಮಿಂಚಿದ್ದಾರೆ. ಈ ಕ್ರಾಂತಿ (Kranti) ಚಿತ್ರದ ಮೂಲಕ ದರ್ಶನ್‌ರನ್ನು ಕಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಕಾಯುತ್ತಾ ಇದ್ದಾರೆ. ಅಷ್ಟಕ್ಕೂ ಕ್ರಾಂತಿ ಚಿತ್ರಕ್ಕಾಗಿ ಇನ್ನು ಹೆಚ್ಚು ದಿನಗಳು ಕಾಯಬೇಕಾಗಿಲ್ಲ. ಇದೆ ವರ್ಷಾಂತ್ಯದಲ್ಲಿ ಕ್ರಾಂತಿ ಅಬ್ಬರ ಶುರುವಾಗಲಿದೆ.

ಭರದಿಂದ ಸಾಗಿದ ಕ್ರಾಂತಿ (Kranti) ಕೆಲಸಗಳು! 

ಕ್ರಾಂತಿ (Kranti)ಚಿತ್ರ ಬಹುತೇಕ ಶೂಟಿಂಗ್ ಮುಕ್ತಾಯವಾಗಿದೆ. ಇನ್ನೇನಿದ್ದರೂ ಸಿನಿಮಾದ ಪ್ಯಾಚ್ ವರ್ಕ್ ಮಾತ್ರ ಬಾಕಿ ಇದೆ ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ. ಕ್ರಾಂತಿ (Kranti) ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಸಿನಿಮಾ ತಂಡ ನಿರತವಾಗಿದೆ. ಜೊತೆಗೆ ಆದಷ್ಟು ಬೇಗ ಸಿನಿಮಾ ರಿಲೀಸ್ ಮಾಡುವ ಪ್ಲ್ಯಾನ್ ಕೂಡ ಹಾಕಿಕೊಂಡಿದೆ. ಹಾಗಾಗಿ ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳು ವೇಗವಾಗಿ ಸಾಗುತ್ತಿವೆ.

ನವೆಂಬರ್‌ನಲ್ಲಿ ಕ್ರಾಂತಿ (Kranti) ರಿಲೀಸ್! 

ಇನ್ನು ನಟ ದರ್ಶನ್ ರಾಬರ್ಟ್ ಬಳಿಕ ಕೊಂಚ ಗ್ಯಾಪ್ ತೆಗೆದುಕೊಂಡಿದ್ದರು. ಕೊರೊನಾ ಕಾರಣಕ್ಕೆ ಕ್ರಾಂತಿ (Kranti) ಕೂಡ ತಡವಾಗಿ ಶುರುವಾಗಿದೆ. ಆದರೆ ಇನ್ನು ಹೆಚ್ಚು ದಿನ ಕ್ರಾಂತಿಗಾಗಿ ಕಾಯಬೇಕಾಗಿಲ್ಲ. ಯಾಕೆಂದರೆ ಕ್ರಾಂತಿ (Kranti) ಸಿನಿಮಾ ಇದೇ ವರ್ಷ ನವೆಂಬರ್‌ನಲ್ಲಿ ತೆರೆ ಕಾಣಲಿದೆ. ಈ ಬಗ್ಗೆ ಸದ್ಯಲ್ಲೇ ಚಿತ್ರತಂಡ ಅಧಿಕೃತ ಮಾಹಿತಿ ನೀಡಲಿದ್ದು, ಟ್ರೈಲರ್ ಕೂಡ ರಿಲೀಸ್ ಆಗಲಿದೆ.

ಸರ್ಕಾರಿ ಶಾಲೆಯ ಕ್ರಾಂತಿ ಕಥೆ 

ಕ್ರಾಂತಿ (Kranti) ಸಿನಿಮಾ ಯಾವ ವಿಚಾರದ ಬಗ್ಗೆ ಇರಲಿದೆ, ಯಾವುದಕ್ಕಾಗಿ ಕ್ರಾಂತಿ ಆಗುತ್ತಿದೆ ಎನ್ನುವ ವಿಚಾರ ಹೊರ ಬಿದ್ದಿದೆ. ಈ ಚಿತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟ ಇದೆ. ಅವನತಿಯತ್ತ ಸಾಗುತ್ತಾ ಇರುವ ಸರ್ಕಾರಿ ಶಾಲೆಗಳನ್ನು ಉಳಿಸುವುದು ಹೇಗೆ ಮತ್ತು ಸರ್ಕಾರಿ ಶಾಲೆಗಳು ಅವನತಿ ಹೊಂದಿದರೆ ಏನೆಲ್ಲಾ ಆಗುತ್ತದೆ ಎನ್ನುವ ಬಗ್ಗೆ ಕ್ರಾಂತಿ ಹೇಳಲಿದೆ.

ಸರ್ಕಾರಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ನಟ ದರ್ಶನ್ ಪಾತ್ರ ಹೋರಾಡುತ್ತೆ. ಕ್ರಾಂತಿ (Kranti) ಚಿತ್ರದಲ್ಲಿ ಎನ್‌ಆರ್‌ಐ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ. ದರ್ಶನ್ ಇಲ್ಲಿ ತನಕ ಹಲವಾರು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಈ ಕತೆಯಲ್ಲಿ ಹೇಗೆ ಕಾಣಿಸಿಕೊಳ್ಳುತ್ತಾರೆ ಎನ್ನುವ ಬಗ್ಗೆ ಕುತೂಹಲ ಮೂಡಿದೆ.

Ravi Rao

Ravi Rao

Kannada Tech Editor: Ravi Rao is an Indian technology Journalist who has been covering day to day consumer Technology News, Features, How To and much more in Kannada since 2016. View Full Profile

Digit.in
Logo
Digit.in
Logo