50MP ಸೆಲ್ಫಿ ಕ್ಯಾಮೆರಾ ಇರುವ Vivo V60e ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ವಿವೋ V60e 5G ಸ್ಮಾರ್ಟ್‌ಫೋನ್‌ ಬೆಲೆ ಇಳಿಕೆ

ವಿವೋದ ಈ ಫೋನ್‌ ವಿಡಿಯೋ ಕರೆ ಹಾಗೂ ಸೆಲ್ಫಿಗಾಗಿ 50MP ಕ್ಯಾಮೆರಾ ಪಡೆದುಕೊಂಡಿದೆ

ವಿವೋ V60e ಫೋನ್‌ 200MP ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ

50MP ಸೆಲ್ಫಿ ಕ್ಯಾಮೆರಾ ಇರುವ Vivo V60e ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಇ ಕಾಮರ್ಸ್‌ ವೆಬ್‌ಸೈಟ್‌ಗಳು ಸ್ಮಾರ್ಟ್‌ಫೋನ್‌ಗಳಿಗೆ ಏನಾದರೊಂದು ಡಿಸ್ಕೌಂಟ್‌ ಘೋಷಿಸುತ್ತವೆ. ಈ ನಿಟ್ಟಿನಲ್ಲಿ ಅನೇಕರು ಇ ಕಾಮರ್ಸ್‌ ಮೂಲಕ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಲು ಮುಂದಾಗುತ್ತಾರೆ. ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ವಿವೋ ಕಂಪನಿಯ Vivo V60e ಸ್ಮಾರ್ಟ್‌ಫೋನ್‌ಗೆ ಗಮನಾರ್ಹ ರಿಯಾಯಿತಿ ಘೋಷಿಸಿದೆ. ಇದಲ್ಲದೇ ಬ್ಯಾಂಕ್‌ ಆಫರ್‌ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ವಿವೋ V60e ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಟರ್ಬೊ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ ಹಾಗೂ 90W ಫ್ಲ್ಯಾಶ್‌ ಚಾರ್ಜಿಂಗ್ ಲಭ್ಯ ಪಡೆದುಕೊಂಡಿದೆ. ಇದರೊಂದಿಗೆ 200MP ಕ್ಯಾಮೆರಾ ಸಪೋರ್ಟ್‌ ಸಹ ಒಳಗೊಂಡಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ನಲ್ಲಿ ವಿವೋ V60e ಮೊಬೈಲ್‌ಗೆ ಲಭ್ಯ ಇರುವ ಆಫರ್‌ ಬಗ್ಗೆ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಕನ್ಫರ್ಮ್ ಆಯ್ತು Realme P4 Lite 5G ಬಿಡುಗಡೆಗೆ ದಿನಾಂಕ! ಕೀ ಫೀಚರ್ಸ್‌ ಇಲ್ಲಿವೆ ನೋಡಿ

Vivo V60e ಫೋನ್‌ ಈಗ ಆಫರ್‌ನಲ್ಲಿ ಲಭ್ಯ

ಸ್ಟೈಲಿಶ್‌ ಲುಕ್‌ ಹೊಂದಿರುವ ವಿವೋ V60e ಮೊಬೈಲ್‌ ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ರಿಯಾಯಿತಿ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 8GB + 256GB ವೇರಿಯಂಟ್‌ ಬೆಲೆ 36,999 ರೂಗಳು ಪ್ರೈಸ್‌ಟ್ಯಾಗ್‌ನಲ್ಲಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 33,999 ರೂಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಪಡೆಯಬಹುದಾಗಿದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್‌ ನ್ಯುಬುಲಾ ಗೋಲ್ಡ್‌ ಹಾಗೂ ಇಲೈಟ್‌ ಪರ್ಪಲ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Vivo V60e
Vivo V60e

ವಿವೋ V60e ಸ್ಮಾರ್ಟ್‌ಫೋನ್‌ ಫೀಚರ್ಸ್‌

ವಿವೋ V60e ಮೊಬೈಲ್‌ 120 Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.7 ಇಂಚಿನ AMOLED ಕರ್ವ್ಡ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 1080×2392 ಪಿಕ್ಸಲ್‌ ರೆಸಲ್ಯೂಶನ್‌ ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಟರ್ಬೊ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 8GB + 128GB, 8GB + 256GB ಹಾಗೂ 12GB + 256GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ. ಇದು ಧೂಳು ಮತ್ತು ನೀರು ನಿರೋಧಕ IP68 ಹಾಗೂ IP69 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.

ಇನ್ನು ವಿವೋದ ಈ ಮೊಬೈಲ್‌ ಅತ್ಯುತ್ತಮ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 200MP ಸೆನ್ಸಾರ್‌ ಹೊಂದಿರುವ ಜೊತೆಗೆ 8MP ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 50MP ಕ್ಯಾಮೆರಾವನ್ನು ಒಳಗೊಂಡಿದ್ದು 4K ಗುಣಮಟ್ಟದ ಸೆಲ್ಫಿ ಫೋಟೋಗಳನ್ನು ಸೆರೆಹಿಡಿಯಬಹುದು. ಹಾಗೆಯೇ ಈ ಮೊಬೈಲ್‌ 6500mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 90W ಫ್ಲ್ಯಾಶ್‌ ಚಾರ್ಜಿಂಗ್ ಸೌಲಭ್ಯ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo