6,000mAh ಬ್ಯಾಟರಿ ಇರುವ Ai+ Nova 2 5G ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

HIGHLIGHTS

Ai+ ನೋವಾ 2 5G ಮೊಬೈಲ್‌ ದರದಲ್ಲಿ ಭಾರೀ ಡಿಸ್ಕೌಂಟ್‌

Ai+ ನೋವಾ 2 5G ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಹೊಂದಿದೆ

Ai+ ಸಂಸ್ಥೆಯ ಈ ಫೋನ್‌ 6,000mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ

6,000mAh ಬ್ಯಾಟರಿ ಇರುವ Ai+ Nova 2 5G ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಸದ್ಯ Ai+ ಸ್ಮಾರ್ಟ್‌ಫೋನ್‌ ಬ್ರಾಂಡ್‌ ಆನ್‌ಲೈನ್‌ ಮಾರುಕಟ್ಟೆಯಲ್ಲಿ ಹೆಚ್ಚಿನ ಗಮನ ಸೆಳೆಯುತ್ತಿದೆ. ಈ ಸಂಸ್ಥೆಯು ಅಗ್ಗದ ಬೆಲೆಯಲ್ಲಿ ಆಕರ್ಷಕ ಫೀಚರ್ಸ್‌ಗಳ ಫೋನ್‌ಗಳನ್ನು ಪರಿಚಯಿಸಿ ದೇಶೀಯ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಆ ಪೈಕಿ ಕಂಪನಿಯ Ai+ Nova 2 5G ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಫೋನ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ ಆಕ್ಟಾ ಕೋರ್ ಯುನಿಸಾಕ್ T8200 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದಿದೆ. ಇನ್ನು ಈ ಮೊಬೈಲ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ Ai+ ನೋವಾ 2 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ದೇಶೀಯ ಮಾರುಕಟ್ಟೆಯಲ್ಲಿ ಹೊಸ Xiaomi ಸ್ಮಾರ್ಟ್‌ಟಿವಿಗಳ ಗ್ರ್ಯಾಂಡ್‌ ಎಂಟ್ರಿ; ಬೆಲೆ ನೋಡಿ

Ai+ Nova 2 5G ಮೊಬೈಲ್‌ ಬೆಲೆಯಲ್ಲಿ ಇಳಿಕೆ

ಅಗ್ಗದ ದರದ ಜೊತೆಗೆ ಕೆಲವು ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ Ai+ ನೋವಾ 2 5G ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 6GB RAM + 128 GB ಸ್ಟೋರೇಜ್ ವೇರಿಯಂಟ್‌ ಬೆಲೆ 14,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 13,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್‌ ಬ್ಲ್ಯಾಕ್, ಬ್ಲೂ, ಪರ್ಪಲ್ ಮತ್ತು ಪಿಂಕ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

Ai Nova 2 5G

Ai+ ನೋವಾ 2 5G ಮೊಬೈಲ್ ಫೀಚರ್ಸ್‌ ಮಾಹಿತಿ

Ai+ ನೋವಾ 2 5G ಮೊಬೈಲ್ 6.7ಇಂಚಿನ HD+ IPS LCD ಡಿಸ್‌ಪ್ಲೇ ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು ಸ್ಕ್ರೀನ್ 600 ನಿಟ್ಸ್‌ಗಳ ಗರಿಷ್ಠ ಬ್ರೈಟ್ನೆಸ್‌ ಪಡೆದುಕೊಂಡಿದೆ. ಈ ಮೊಬೈಲ್‌ ಆಕ್ಟಾ ಕೋರ್ ಯುನಿಸಾಕ್ T8200 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಜೊತೆಗೆ ಇದು ಆಂಡ್ರಾಯ್ಡ್ 16 ಆಪರೇಟಿಂಗ್ ಸಿಸ್ಟಮ್ ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಮೈಕ್ರೋ SD ಕಾರ್ಡ್‌ ಮೂಲಕ 1TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಪಡೆದುಕೊಂಡಿದೆ.

Ai+ ನೋವಾ 2 5G ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ 50MP ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 18W ಚಾರ್ಜಿಂಗ್‌ ಬೆಂಬಲ ಸಹ ಹೊಂದಿದೆ. ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಆಯ್ಕೆ ಸಹ ಇದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile