ಸದ್ಯ Ai+ ಸ್ಮಾರ್ಟ್‌ಫೋನ್ ಬ್ರಾಂಡ್ ಆನ್‌ಲೈನ್ ಮಾರುಕಟ್ಟೆಯಲ್ಲಿ ಹೆಚ್ಚಿನ ಗಮನ ಸೆಳೆಯುತ್ತಿದೆ. ಈ ಸಂಸ್ಥೆಯು ಅಗ್ಗದ ಬೆಲೆಯಲ್ಲಿ ಆಕರ್ಷಕ ಫೀಚರ್ಸ್‌ಗಳ ಫೋನ್‌ಗಳನ್ನು ಪರಿಚಯಿಸಿ ದೇಶೀಯ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಆ ಪೈಕಿ ಕಂಪನಿಯ Ai+ Nova 2 5G ಸ್ಮಾರ್ಟ್‌ಫೋನ್ ಇದೀಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಫೋನ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಆಕ್ಟಾ ಕೋರ್ ಯುನಿಸಾಕ್ T8200 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇನ್ನು ಈ ಮೊಬೈಲ್ ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ Ai+ ನೋವಾ 2 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ದೇಶೀಯ ಮಾರುಕಟ್ಟೆಯಲ್ಲಿ ಹೊಸ Xiaomi ಸ್ಮಾರ್ಟ್‌ಟಿವಿಗಳ ಗ್ರ್ಯಾಂಡ್ ಎಂಟ್ರಿ; ಬೆಲೆ ನೋಡಿ
ಅಗ್ಗದ ದರದ ಜೊತೆಗೆ ಕೆಲವು ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ Ai+ ನೋವಾ 2 5G ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 6GB RAM + 128 GB ಸ್ಟೋರೇಜ್ ವೇರಿಯಂಟ್ ಬೆಲೆ 14,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 13,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್ ಬ್ಲ್ಯಾಕ್, ಬ್ಲೂ, ಪರ್ಪಲ್ ಮತ್ತು ಪಿಂಕ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.
Ai+ ನೋವಾ 2 5G ಮೊಬೈಲ್ 6.7ಇಂಚಿನ HD+ IPS LCD ಡಿಸ್‌ಪ್ಲೇ ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು ಸ್ಕ್ರೀನ್ 600 ನಿಟ್ಸ್‌ಗಳ ಗರಿಷ್ಠ ಬ್ರೈಟ್ನೆಸ್ ಪಡೆದುಕೊಂಡಿದೆ. ಈ ಮೊಬೈಲ್ ಆಕ್ಟಾ ಕೋರ್ ಯುನಿಸಾಕ್ T8200 ಚಿಪ್‌ಸೆಟ್ ಪ್ರೊಸೆಸರ್ ಪವರ್ ಜೊತೆಗೆ ಇದು ಆಂಡ್ರಾಯ್ಡ್ 16 ಆಪರೇಟಿಂಗ್ ಸಿಸ್ಟಮ್ ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಪಡೆದುಕೊಂಡಿದೆ.
Ai+ ನೋವಾ 2 5G ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ 50MP ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 18W ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಸಹ ಇದೆ.