Ai+ Nova 2 Power 5G
Ai+ ಮೊಬೈಲ್ ಸಂಸ್ಥೆಯು ಹೊಸದಾಗಿ Ai+ Nova 2 Power 5G ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7100 ಚಿಪ್‌ಸೆಟ್ ಪ್ರೊಸೆಸರ್ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಈ ಫೋನ್ 120Hz ರಿಫ್ರೆಶ್ ರೇಟ್‌ನ ಡಿಸ್‌ಪ್ಲೇ ಹಾಗೂ 7,000mAh ಸಾಮರ್ಥ್ಯದ ಟೈಟಾನ್ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 48MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಗೋಲ್ಡನ್ ಬ್ಲೂ ಫ್ಯೂಷನ್, ಬ್ಲೂ ಫ್ಯೂಷನ್, ಓಷನ್ ಗ್ರೀನ್, ಡೀಪ್ ಪರ್ಪಲ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಕಲರ್ ಆಯ್ಕೆಯನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶ ಪಡೆದಿದೆ. ಹಾಗಾದರೇ Ai+ ನೋವಾ 2 ಪವರ್ 5G ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Vi ಟೆಲಿಕಾಂನ 625 ರೂ.ಗಳ ಪ್ಲಾನ್‌ನಲ್ಲಿ ಜಬರ್ದಸ್ತ್ ಡೇಟಾ ಜೊತೆಗೆ 60 ದಿನಗಳ ವ್ಯಾಲಿಡಿಟಿ
Ai+ ಮೊಬೈಲ್ ಸಂಸ್ಥೆಯ Ai+ ನೋವಾ 2 ಪವರ್ 5G ಮೊಬೈಲ್ ಆಕರ್ಷಕ ಡಿಸೈನ್ ಹಾಗೂ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ ಆರಂಭಿಕ 6GB RAM + 128GB ಸ್ಟೋರೇಜ್ ವೇರಿಯಂಟ್ 16,999 ರೂ.ಗಳ ಬೆಲೆಯನ್ನು ಹೊಂದಿದೆ. ಹಾಗೆಯೇ 8GB RAM + 128GB ಸ್ಟೋರೇಜ್ ವೇರಿಯಂಟ್ 17,999 ರೂ.ಗಳ ಬೆಲೆಯನ್ನು ಹೊಂದಿದೆ. ಈ ಫೋನ್ ಈ ಫೋನ್ ಗೋಲ್ಡನ್ ಬ್ಲೂ ಫ್ಯೂಷನ್, ಬ್ಲೂ ಫ್ಯೂಷನ್, ಓಷನ್ ಗ್ರೀನ್, ಡೀಪ್ ಪರ್ಪಲ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.
Ai+ ನೋವಾ 2 ಪವರ್ 5G ಸ್ಮಾರ್ಟ್‌ಫೋನ್ 6.75 ಇಂಚಿನ HD+ IPS LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 450 ನಿಟ್ಸ್ ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಇದರ ಸ್ಕ್ರೀನ್ 720×1,600 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7100 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಪರೇಟಿಂಗ್ ಸಿಸ್ಟಮ್ ಸಪೋರ್ಟ್ ಪಡೆದಿದೆ. ಅಲ್ಲದೇ ಮೈಕ್ರೋ ಎಸ್‌ಡಿ (microSD) ಕಾರ್ಡ್ ಬಳಸಿ ಸ್ಟೋರೇಜ್ ಅನ್ನು 1TB ವರೆಗೆ ವಿಸ್ತರಿಸಬಹುದು ಎಂದು ಕಂಪನಿ ತಿಳಿಸಿದೆ.
ಹಾಗೆಯೇ Ai+ ನೋವಾ 2 ಪವರ್ 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 48MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 13MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,000mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 33W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.