ಅಮೆಜಾನ್ ಸೇಲ್ನಲ್ಲಿ Samsung Galaxy M47 5G ಮೊಬೈಲ್ಗೆ ಜಬರ್ದಸ್ತ್ ಡಿಸ್ಕೌಂಟ್!
ಸ್ಯಾಮ್ಸಂಗ್ ಗ್ಯಾಲಕ್ಸಿ M47 5G ಫೋನಿಗೆ ಅಮೆಜಾನ್ನಲ್ಲಿ ಬಿಗ್ ರಿಯಾಯಿತಿ
ಸ್ಯಾಮ್ಸಂಗ್ ಗ್ಯಾಲಕ್ಸಿ M47 5G ಮೊಬೈಲ್ 6,000mAh ಬ್ಯಾಟರಿ ಒಳಗೊಂಡಿದೆ
ಸ್ಯಾಮ್ಸಂಗ್ ಗ್ಯಾಲಕ್ಸಿ M47 5G ಸ್ಮಾರ್ಟ್ಫೋನ್ ಆಕರ್ಷಕ ಕಲರ್ನಲ್ಲಿ ಲಭ್ಯ

ಅಮೆಜಾನ್ ತಾಣವು ಮೊಬೈಲ್ಗಳಿಗೆ ಒಂದಿಲ್ಲೊಂದು ಆಫರ್ ಲಭ್ಯ ಮಾಡುತ್ತ ಗ್ರಾಹಕರನ್ನು ಸೆಳೆಯುತ್ತದೆ. ಸದ್ಯ Amazon Black Friday Saleನಲ್ಲಿ ಆಯ್ದ ಫೋನ್ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದ್ದು, ಆ ಪೈಕಿ Samsung Galaxy M47 5G ಮೊಬೈಲ್ ಗಮನಾರ್ಹ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಸ್ನಾಪ್ಡ್ರಾಗನ್ 6 Gen 3 ಚಿಪ್ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ M47 5G ಮೊಬೈಲ್ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Samsung Galaxy M47 5G ಡಿಸ್ಕೌಂಟ್ನಲ್ಲಿ ಲಭ್ಯ
ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಸ್ಯಾಮ್ಸಂಗ್ ಗ್ಯಾಲಕ್ಸಿ M47 5G ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 46,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ 32,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು.
ಸ್ಯಾಮ್ಸಂಗ್ ಗ್ಯಾಲಕ್ಸಿ M47 5G ಮೊಬೈಲ್ ಫೀಚರ್ಸ್
ಸ್ಯಾಮ್ಸಂಗ್ ಗ್ಯಾಲಕ್ಸಿ M47 5G ಮೊಬೈಲ್ 6.7 ಇಂಚಿನ FHD+ ಸೂಪರ್ AMOLED ಡಿಸ್ಪ್ಲೇ ಅನ್ನು ಹೊಂದಿದ್ದು, ಇದು 120Hz ರಿಫ್ರೆಶ್ ರೇಟ್ ಮತ್ತು 1,400 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಸಪೋರ್ಟ್ ಹೊಂದಿದೆ. ಅಲ್ಲದೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ನಿಂದ ರಕ್ಷಿಸಲಾಗಿದೆ. ಹಾಗೆಯೇ ಇದು ಕ್ವಾಲ್ಕಾಮ್ನ ಸ್ನಾಪ್ಡ್ರಾಗನ್ 6 Gen 3 ಚಿಪ್ಸೆಟ್ ಪ್ರೊಸೆಸರ್ ಸಪೋರ್ಟ್ ಸಹ ಪಡೆದುಕೊಂಡಿದೆ.
ಹಾಗೆಯೇ ಸ್ಯಾಮ್ಸಂಗ್ ಗ್ಯಾಲಕ್ಸಿ M47 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಆಗಿದೆ. ಹಾಗೆಯೇ ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 5MP ಮತ್ತು 2MP ಸೆನ್ಸಾರ್ ಸಾಮರ್ಥ್ಯ ಒಳಗೊಂಡಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 12MP ಕ್ಯಾಮೆರಾ ಪಡೆದುಕೊಂಡಿದೆ. ಈ ಮೊಬೈಲ್ ಎಲ್ಲಾ ಕ್ಯಾಮೆರಾಗಳಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ಹೊಂದಿದೆ. ಇದರೊಂದಿಗೆ ಈ ಫೋನ್ 6,000mAh ಬ್ಯಾಟರಿ ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 45W ವೈರ್ಡ್ ಫಾಸ್ಟ್ ಚಾರ್ಜಿಂಗ್ಗೆ ಬೆಂಬಲವನ್ನು ಹೊಂದಿದೆ.
Manthesh B
Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್ಇಂಡಿಯಾ ಸಂಸ್ಥೆಯ ಗಿಜ್ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.
View full profile