Amazon EPL 2026 ಸೇಲ್‌: Motorola g57 power 5G ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ

HIGHLIGHTS

ಅಮೆಜಾನ್‌ EPL 2026 ಸೇಲ್‌ನಲ್ಲಿ ಬಜೆಟ್‌ ದರದ ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್‌

ಅಮೆಜಾನ್‌ EPL 2026 ಮಾರಾಟದಲ್ಲಿ ಮೊಟೊರೊಲಾ g57 ಪವರ್‌ 5G ಬೆಲೆ ಇಳಿಕೆ

ಮೊಟೊರೊಲಾ g57 ಪವರ್‌ 5G ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ

Amazon EPL 2026 ಸೇಲ್‌: Motorola g57 power 5G ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ

ಇ ಕಾಮರ್ಸ್‌ ದೈತ್ಯ ಅಮೆಜಾನ್‌ನಲ್ಲಿ ನಡೆಯುತ್ತಿರುವ Amazon Electronics Premier league 2026 ಸೇಲ್‌ ಸದ್ಯ ಗ್ರಾಹಕರ ಹಾಟ್‌ಸ್ಪಾಟ್‌ ಆಗಿದೆ. ಈ ಮಾರಾಟದಲ್ಲಿ ಮೊಬೈಲ್‌ಗಳು ಸೇರಿದಂತೆ ಅಗತ್ಯ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು ಡಿಸ್ಕೌಂಟ್‌ ಪಡೆದುಕೊಂಡಿವೆ. ಅದರಲ್ಲಿಯೂ ಬಜೆಟ್‌ ಮಾದರಿಯ Motorola g57 power 5G ಮೊಬೈಲ್‌ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ Snapdragon 6s gen 4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಒಳಗೊಂಡಿದೆ. ಹಾಗಾದರೇ ಅಮೆಜಾನ್ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ ಮೊಟೊರೊಲಾ ಸಂಸ್ಥೆಯ ಮೊಟೊರೊಲಾ g57 ಪವರ್‌ 5G ಮೊಬೈಲ್‌ ಕೊಡುಗೆ, ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Amazon EPL 2026 ಸೇಲ್‌: Vivo X300 5G ಮೊಬೈಲ್‌ ಖರೀದಿಗೆ ಇದೇ ಬೆಸ್ಟ್‌ ಟೈಮ್‌

Motorola g57 power 5G ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ

ಜನಪ್ರಿಯ ಮೊಟೊರೊಲಾ ಕಂಪನಿಯ ಮೊಟೊರೊಲಾ g57 ಪವರ್‌ 5G ಮೊಬೈಲ್‌ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ ವೆಬ್‌ಸೈಟ್‌ನಲ್ಲಿ 17,999 ರೂಗಳ ಬೆಲೆಯನ್ನು ಹೊಂದಿದೆ. ಆದರೆ ಇದೀಗ ಅಮೆಜಾನ್‌ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ ಈ ಮೊಬೈಲ್‌ 14,499 ರೂಗಳ ಬೆಲೆಗೆ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ನೋ ಕಾಸ್ಟ್‌ ಇಎಮ್‌ಐ, ಬ್ಯಾಂಕ್‌ ಆಫರ್‌ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದು. ಈ ಫೋನ್‌ Pantone Regatta, Pantone Fluidity ಮತ್ತು Pantone Corsair ಕಲರ್‌ ಆಯ್ಕೆಯಲ್ಲಿ ಲಭ್ಯ. ಮೊಟೊರೊಲಾ g57 ಪವರ್‌ 5G ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

Motorola g57 power 5G

Motorola g57 power 5G ಮೊಬೈಲ್‌ ಫೀಚರ್ಸ್‌

Motorola g57 power 5G ಫೋನ್‌ 120Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.7 ಇಂಚಿನ ಪುಲ್‌ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ Snapdragon 6s gen 4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಹಾಗೆಯೇ Motorola g57 power 5Gಮೊಬೈಲ್‌ ಹಿಂಭಾಗದಲ್ಲಿ ಆಕರ್ಷಕ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 8MP ಸೆನ್ಸಾರ್‌ ಪಡೆದಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 8MP ಕ್ಯಾಮೆರಾವನ್ನು ಒಳಗೊಂಡಿದೆ. ಅಲ್ಲದೇ ಪನೋರಮಾ, ಪೋರ್ಟ್ರೇಟ್, ಪ್ರೊ ವೀಡಿಯೊ, ಸಿಂಗಲ್ ಟೇಕ್, ಸ್ಲೋ ಮೋಷನ್ ಆಯ್ಕೆಗಳು ಇವೆ. ಹಾಗೆಯೇ ಈ ಫೋನ್‌ 7000mAh ಬ್ಯಾಟರಿ ಜೊತೆಗೆ ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo