ಇ ಕಾಮರ್ಸ್ ದೈತ್ಯ ಅಮೆಜಾನ್‌ನಲ್ಲಿ ನಡೆಯುತ್ತಿರುವ Amazon Electronics Premier league 2026 ಸೇಲ್ ಸದ್ಯ ಗ್ರಾಹಕರ ಹಾಟ್‌ಸ್ಪಾಟ್ ಆಗಿದೆ. ಈ ಮಾರಾಟದಲ್ಲಿ ಮೊಬೈಲ್‌ಗಳು ಸೇರಿದಂತೆ ಅಗತ್ಯ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು ಡಿಸ್ಕೌಂಟ್ ಪಡೆದುಕೊಂಡಿವೆ. ಅದರಲ್ಲಿಯೂ ಬಜೆಟ್ ಮಾದರಿಯ Motorola g57 power 5G ಮೊಬೈಲ್ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ Snapdragon 6s gen 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿದೆ. ಹಾಗಾದರೇ ಅಮೆಜಾನ್ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ ಮೊಟೊರೊಲಾ ಸಂಸ್ಥೆಯ ಮೊಟೊರೊಲಾ g57 ಪವರ್ 5G ಮೊಬೈಲ್ ಕೊಡುಗೆ, ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ.
Also Read : Amazon EPL 2026 ಸೇಲ್: Vivo X300 5G ಮೊಬೈಲ್ ಖರೀದಿಗೆ ಇದೇ ಬೆಸ್ಟ್ ಟೈಮ್
ಜನಪ್ರಿಯ ಮೊಟೊರೊಲಾ ಕಂಪನಿಯ ಮೊಟೊರೊಲಾ g57 ಪವರ್ 5G ಮೊಬೈಲ್ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಸ್ಮಾರ್ಟ್‌ಫೋನ್ ಅಮೆಜಾನ್ ವೆಬ್‌ಸೈಟ್‌ನಲ್ಲಿ 17,999 ರೂಗಳ ಬೆಲೆಯನ್ನು ಹೊಂದಿದೆ. ಆದರೆ ಇದೀಗ ಅಮೆಜಾನ್ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ ಈ ಮೊಬೈಲ್ 14,499 ರೂಗಳ ಬೆಲೆಗೆ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ನೋ ಕಾಸ್ಟ್ ಇಎಮ್‌ಐ, ಬ್ಯಾಂಕ್ ಆಫರ್ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದು. ಈ ಫೋನ್ Pantone Regatta, Pantone Fluidity ಮತ್ತು Pantone Corsair ಕಲರ್ ಆಯ್ಕೆಯಲ್ಲಿ ಲಭ್ಯ. ಮೊಟೊರೊಲಾ g57 ಪವರ್ 5G ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
Motorola g57 power 5G ಫೋನ್ 120Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.7 ಇಂಚಿನ ಪುಲ್ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ Snapdragon 6s gen 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 8GB RAM ಮತ್ತು 128GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ Motorola g57 power 5Gಮೊಬೈಲ್ ಹಿಂಭಾಗದಲ್ಲಿ ಆಕರ್ಷಕ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 8MP ಸೆನ್ಸಾರ್ ಪಡೆದಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 8MP ಕ್ಯಾಮೆರಾವನ್ನು ಒಳಗೊಂಡಿದೆ. ಅಲ್ಲದೇ ಪನೋರಮಾ, ಪೋರ್ಟ್ರೇಟ್, ಪ್ರೊ ವೀಡಿಯೊ, ಸಿಂಗಲ್ ಟೇಕ್, ಸ್ಲೋ ಮೋಷನ್ ಆಯ್ಕೆಗಳು ಇವೆ. ಹಾಗೆಯೇ ಈ ಫೋನ್ 7000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.