ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಅಮೆಜಾನ್ ನಡೆಯುತ್ತಿರುವ Amazon Electronics Premier league 2026 ಮಾರಾಟವು ಹೊಸ ಮೊಬೈಲ್ ಖರೀದಿಸುವ ಗ್ರಾಹಕರಿಗೆ ಆಕರ್ಷಣೆಯ ಕೇಂದ್ರವಾಗಿದೆ. ಈ ಸೇಲ್‌ನಲ್ಲಿ ಮೊಬೈಲ್‌ಗಳು ಸೇರಿದಂತೆ ಅಗತ್ಯ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು ಡಿಸ್ಕೌಂಟ್ ಪಡೆದುಕೊಂಡಿವೆ. ಅದರಲ್ಲಿಯೂ ಮಿಡ್‌ರೇಂಜ್ ಮಾದರಿಯ OnePlus 15R ಮೊಬೈಲ್ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ Snapdragon 8 Gen 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿದೆ. ಹಾಗಾದರೇ ಅಮೆಜಾನ್ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ ಒನ್‌ಪ್ಲಸ್ ಸಂಸ್ಥೆಯ ಒನ್‌ಪ್ಲಸ್ 15R 5G ಮೊಬೈಲ್ ಕೊಡುಗೆ, ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ.
Also Read : ಮಾರುಕಟ್ಟೆಯಲ್ಲಿ ಅಬ್ಬರಿಸಲು ನಾಳೆ ಬರ್ತಿದೆ iQOO Z11x 5G ಫೋನ್! 7,200mAh ಬ್ಯಾಟರಿ ಸಾಧ್ಯತೆ
ಜನಪ್ರಿಯ ಒನ್‌ಪ್ಲಸ್ ಕಂಪನಿಯ ಒನ್‌ಪ್ಲಸ್ 15R 5G ಮೊಬೈಲ್ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಸ್ಮಾರ್ಟ್‌ಫೋನ್ ಅಮೆಜಾನ್ ವೆಬ್‌ಸೈಟ್‌ನಲ್ಲಿ 54,999 ರೂಗಳ ಬೆಲೆಯನ್ನು ಹೊಂದಿದೆ. ಆದರೆ ಇದೀಗ ಅಮೆಜಾನ್ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ ಈ ಮೊಬೈಲ್ 47,997 ರೂಗಳ ಬೆಲೆಗೆ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ನೋ ಕಾಸ್ಟ್ ಇಎಮ್‌ಐ, ಬ್ಯಾಂಕ್ ಆಫರ್ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದು. ಇನ್ನು ಈ ಫೋನ್ ಚಾರ್ಕೋಲ್ ಬ್ಲ್ಯಾಕ್, ಎಲೆಕ್ಟ್ರಿಕ್ ವೈಲೆಟ್ ಹಾಗೂ ಮಿಂಟ್ ಬ್ರಿಜ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಒನ್‌ಪ್ಲಸ್ 15R 5G ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಒನ್‌ಪ್ಲಸ್ 15R ಸ್ಮಾರ್ಟ್‌ಫೋನ್ 165Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 2800 x 1272 ಪಿಕ್ಸಲ್ ರೆಸಲ್ಯೂಶನ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ Snapdragon 8 Gen 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ Android 16 ಸಪೋರ್ಟ್ ಒಳಗೊಂಡಿದೆ. ಅಲ್ಲದೇ ಇದು 12GB + 256GB ಹಾಗೂ 12GB + 512GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಇನ್ನು ಒನ್‌ಪ್ಲಸ್ 15R ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 8MP ಅಲ್ಟ್ರಾ ವೈಡ್ ಸೆನ್ಸಾರ್ ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 32MP ಕ್ಯಾಮೆರಾವನ್ನು ಒಳಗೊಂಡಿದೆ. 4K 120fps ವಿಡಿಯೋ ಸಪೋರ್ಟ್ ಸಹ ಇದೆ. ಅಲ್ಲದೇ ನೀರು ಹಾಗೂ ಧೂಳು ನಿರೋಧಕತೆಗಾಗಿ IP68/69 ರೇಟಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಹಾಗೆಯೇ ಈ ಫೋನ್ 7400mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 80W SUPERVOOC ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.