Amazon EPL 2026 ಸೇಲ್: Redmi Note 15 5G ಖರೀದಿಸುವು ಪ್ಲಾನ್ ಇದ್ರೆ, ತಡ ಮಾಡಬೇಡಿ!
ಅಮೆಜಾನ್ EPL 2026 ಸೇಲ್‌ನಲ್ಲಿ ಜನಪ್ರಿಯ ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್
ಅಮೆಜಾನ್ EPL 2026 ಮಾರಾಟದಲ್ಲಿ ರೆಡ್ಮಿ ನೋಟ್ 15 ಆಕರ್ಷಕ ಬೆಲೆ ಇಳಿಕೆ ಪಡೆದಿದೆ
ರೆಡ್ಮಿ ನೋಟ್ 15 5G ಫೋನ್ ಕ್ಯಾಮೆರಾ 108MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ
ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ನಡೆಯುತ್ತಿರುವ Amazon Electronics Premier league 2026 ಮಾರಾಟ ಮೊಬೈಲ್ ಖರೀದಿದಾರರಿಗೆ ಹಾಟ್‌ಸ್ಪಾಟ್ ಆಗಿದೆ. ಈ ಸೇಲ್‌ನಲ್ಲಿ ಮೊಬೈಲ್‌ಗಳು ಸೇರಿದಂತೆ ಅಗತ್ಯ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು ಡಿಸ್ಕೌಂಟ್ ಪಡೆದುಕೊಂಡಿವೆ. ಅದರಲ್ಲಿಯೂ ಬಜೆಟ್ ಮಾದರಿಯ REDMI Note 15 5G ಮೊಬೈಲ್ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 6 Gen 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿದೆ. ಹಾಗಾದರೇ ಅಮೆಜಾನ್ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ ರೆಡ್ಮಿ ಸಂಸ್ಥೆಯ ರೆಡ್ಮಿ ನೋಟ್ 15 5G ಮೊಬೈಲ್ ಕೊಡುಗೆ, ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ.
SurveyAlso Read : 10001mAh ಬ್ಯಾಟರಿ ಇರುವ Realme Narzo Power ಮೊಬೈಲ್ ಈಗ ಖರೀದಿಗೆ ಲಭ್ಯ
REDMI Note 15 5G ಮೊಬೈಲ್ ಬೆಲೆಯಲ್ಲಿ ಇಳಿಕೆ
ಜನಪ್ರಿಯ ರೆಡ್ಮಿ ಕಂಪನಿಯ ರೆಡ್ಮಿ ನೋಟ್ 15 5G ಮೊಬೈಲ್ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಸ್ಮಾರ್ಟ್‌ಫೋನ್ ಅಮೆಜಾನ್ ವೆಬ್‌ಸೈಟ್‌ನಲ್ಲಿ 26,999 ರೂಗಳ ಬೆಲೆಯನ್ನು ಹೊಂದಿದೆ. ಆದರೆ ಇದೀಗ ಅಮೆಜಾನ್ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ ಈ ಮೊಬೈಲ್ 22,998 ರೂಗಳ ಬೆಲೆಗೆ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ನೋ ಕಾಸ್ಟ್ ಇಎಮ್‌ಐ, ಬ್ಯಾಂಕ್ ಆಫರ್ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದು. ಇನ್ನು ಈ ಫೋನ್ ಬ್ಲೂ, ಬ್ಲ್ಯಾಕ್ ಮತ್ತು ಪರ್ಪಲ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ರೆಡ್ಮಿ ನೋಟ್ 15 5G ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

ರೆಡ್ಮಿ ನೋಟ್ 15 5G ಮೊಬೈಲ್ ಫೀಚರ್ಸ್ ಮಾಹಿತಿ
ರೆಡ್ಮಿ ನೋಟ್ 15 5G ಮೊಬೈಲ್ 6.77 ಇಂಚಿನ ಕರ್ವ್ಡ AMOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ ಇದು 3200 nits ಬ್ರೈಟ್ನೆಸ್ ಸಪೋರ್ಟ್ ಸಹ ಹೊಂದಿದೆ. ಇನ್ನು ಈ ಮೊಬೈಲ್ ಸ್ನಾಪ್‌ಡ್ರಾಗನ್ 6 Gen 3 ಚಿಪ್‌ಸೆಟ್ ಪ್ರೊಸೆಸರ್‌ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 8GB RAM + 128GB ಹಾಗೂ 8GB RAM + 256GB ಸ್ಟೋರೇಜ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಹಾಗೆಯೇ ರೆಡ್ಮಿ ನೋಟ್ 15 5G ಮೊಬೈಲ್ ಹಿಂಭಾಗದಲ್ಲಿ 108MP OIS ಮಾಸ್ಟರ್‌ಪಿಕ್ಸೆಲ್ ಕ್ಯಾಮೆರಾ ಒಳಗೊಂಡಿದ್ದು, ಹೈ-ರೆಸಲ್ಯೂಶನ್ ಫೋಟೋಗಳನ್ನು ಶೂಟ್ ಮಾಡುತ್ತದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 20MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 5G ಸಪೋರ್ಟ್, IR ರಿಮೋಟ್ ಕಂಟ್ರೋಲ್ ಮತ್ತು Google Gemini ಮತ್ತು Circle to Search ನಂತಹ AI ಫೀಚರ್ಸ್‌ಗಳನ್ನು ಸಹ ಪಡೆದಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile