Amazon EPL 2026 ಸೇಲ್‌: Vivo X300 5G ಮೊಬೈಲ್‌ ಖರೀದಿಗೆ ಇದೇ ಬೆಸ್ಟ್‌ ಟೈಮ್‌

HIGHLIGHTS

ಅಮೆಜಾನ್‌ EPL 2026 ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಬೊಂಬಾಟ್‌ ಡಿಸ್ಕೌಂಟ್‌

ಅಮೆಜಾನ್‌ EPL 2026 ಮಾರಾಟದಲ್ಲಿ ವಿವೋ X300 5G ಮೊಬೈಲ್‌ ಬೆಲೆ ಇಳಿಕೆ

ವಿವೋ X300 5G ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ

ಇ ಕಾಮರ್ಸ್‌ ದೈತ್ಯ ಅಮೆಜಾನ್‌ನಲ್ಲಿ ನಡೆಯುತ್ತಿರುವ Amazon Electronics Premier league 2026 ಸೇಲ್‌ ಸದ್ಯ ಗ್ರಾಹಕರ ಹಾಟ್‌ಸ್ಪಾಟ್‌ ಆಗಿದೆ. ಈ ಮಾರಾಟದಲ್ಲಿ ಸ್ಮಾರ್ಟ್‌ಫೋನ್‌ಗಳು ಸೇರಿದಂತೆ ಎಲ್ಲ ಬಗೆಯ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು ರಿಯಾಯಿತಿ ಪಡೆದುಕೊಂಡಿವೆ. ಅದರಲ್ಲಿಯೂ ಫ್ಲ್ಯಾಗ್‌ಶಿಪ್‌ ಮಾದರಿಯ Vivo X300 5G ಮೊಬೈಲ್‌ ಸಖತ್‌ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ MediaTek Dimensity 9500 SoC ಪ್ರೊಸೆಸರ್‌ ಸಾಮರ್ಥ್ಯ ಒಳಗೊಂಡಿದೆ. ಹಾಗಾದರೇ ಅಮೆಜಾನ್ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ ವಿವೋ ಸಂಸ್ಥೆಯ ವಿವೋ X300 5G ಮೊಬೈಲ್‌ ಕೊಡುಗೆ, ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ.

Also Read : ಸದ್ಯದಲ್ಲೇ ಗ್ರ್ಯಾಂಡ್ ಎಂಟ್ರಿ ಕೊಡಲಿದೆ Oppo Find N6 ಮೊಬೈಲ್‌! ಅಚ್ಚರಿ ಮೂಡಿಸುವ ಫೀಚರ್ಸ್‌

Vivo X300 5G ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ

ಜನಪ್ರಿಯ ವಿವೋ ಕಂಪನಿಯ ವಿವೋ X300 5G ಮೊಬೈಲ್‌ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ ವೆಬ್‌ಸೈಟ್‌ನಲ್ಲಿ 83,999 ರೂಗಳ ಬೆಲೆಯನ್ನು ಹೊಂದಿದೆ. ಆದರೆ ಇದೀಗ ಅಮೆಜಾನ್‌ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ ಈ ಮೊಬೈಲ್‌ 75,998 ರೂಗಳ ಬೆಲೆಗೆ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ನೋ ಕಾಸ್ಟ್‌ ಇಎಮ್‌ಐ, ಬ್ಯಾಂಕ್‌ ಆಫರ್‌ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದು. ಈ ಫೋನ್‌ ಬ್ಲೂ, ಬ್ಲ್ಯಾಕ್ ಹಾಗೂ ರೆಡ್ ಕಲರ್‌ ಆಯ್ಕೆಯಲ್ಲಿ ಲಭ್ಯ. ವಿವೋ X300 5G ಮೊಬೈಲ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

ವಿವೋ X300 5G ಮೊಬೈಲ್‌ ಫೀಚರ್ಸ್‌ ಹೀಗಿವೆ

ವಿವೋ X300 5G ಸ್ಮಾರ್ಟ್‌ಫೋನ್‌ 6.31 ಇಂಚಿನ 1.5K AMOLED ಡಿಸ್‌ಪ್ಲೇ ಹೊಂದಿದೆ. ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಜೊತೆಗೆ 1216×2640 ಪಿಕ್ಸೆಲ್‌ ರೆಸಲ್ಯೂಶನ್ ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ MediaTek Dimensity 9500 SoC ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಇದು ಆಂಡ್ರಾಯ್ಡ್ 16 ಆಧಾರಿತ OriginOS 6 ಸ್ಕಿನ್‌ ಓಎಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಅನುಗುಣವಾಗಿ 12GB + 256GB, 12GB + 512GB ಹಾಗೂ 16GB + 512GB ಸ್ಟೋರೇಜ್‌ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಮೊಬೈಲ್‌ 90W ವೈರ್ಡ್ ಮತ್ತು 40W ವೈರ್‌ಲೆಸ್ ಚಾರ್ಜಿಂಗ್‌ ಸಪೋರ್ಟ್‌ ಜೊತೆಗೆ 6,040mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

ಹಾಗೆಯೇ ವಿವೋ X300 5G ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದ್ದು ಇದರ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಆಗಿದೆ. ಇನ್ನುಳಿದೆರಡು ಕ್ಯಾಮೆರಾಗಳು ಕ್ರಮವಾಗಿ 50 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸರ್ ಮತ್ತು 50 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಆಗಿವೆ. ಅಲ್ಲದೇ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಅನ್ನು ಒಳಗೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :