ಕಡಿಮೆ ದರದ Redmi A7 Pro 5G ಮೊಬೈಲ್ ಈಗ ಸ್ಪೆಷಲ್ ಆಫರ್‌ನಲ್ಲಿ ಲಭ್ಯ!
ರೆಡ್ಮಿ A7 ಪ್ರೊ 5G ಫೋನಿಗೆ ಅಮೆಜಾನ್‌ನಲ್ಲಿ ಭಾರೀ ರಿಯಾಯಿತಿ
ರೆಡ್ಮಿ A7 ಪ್ರೊ 5G ಮೊಬೈಲ್ 6,300mAh ಬ್ಯಾಟರಿ ಒಳಗೊಂಡಿದೆ
ರೆಡ್ಮಿ A7 ಪ್ರೊ 5G ಸ್ಮಾರ್ಟ್‌ಫೋನ್ ಮೂರು ಆಕರ್ಷಕ ಕಲರ್‌ನಲ್ಲಿ ಲಭ್ಯ
ಅಮೆಜಾನ್ ತಾಣದಲ್ಲಿ ಚಾಲ್ತಿ ಇರುವ Amazon Great Indian Festival Sale 2026 ಸೇಲ್ ಆನ್‌ಲೈನ್ ಶಾಪಿಂಗ್ ಪ್ರಿಯರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದ್ದು, ಆ ಪೈಕಿ Redmi A7 Pro 5G ಮೊಬೈಲ್ ಗಮನಾರ್ಹ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಆಕ್ಟಾ-ಕೋರ್ Unisoc T8300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 6,300mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರೆಡ್ಮಿ A7 ಪ್ರೊ 5G ಮೊಬೈಲ್ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಕಡಿಮೆ ಬೆಲೆಯಲ್ಲಿ 6000mAh ಬ್ಯಾಟರಿ ಇರುವ Lava ಮೊಬೈಲ್ ಖರೀದಿಸಲು ಇಲ್ಲಿದೆ ಬೆಸ್ಟ್ ಆಫರ್!
Redmi A7 Pro 5G ಫೋನಿಗೆ ಬೊಂಬಾಟ್ ಆಫರ್
ಅಗ್ಗದ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ರೆಡ್ಮಿ A7 ಪ್ರೊ 5G ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ 26,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ 14,489 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಬ್ಲ್ಯಾಕ್, ಮಿಸ್ಟ್ ಬ್ಲೂ ಮತ್ತು ಸನ್‌ಸೆಟ್ ಆರೆಂಜ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು. ರೆಡ್ಮಿ A7 ಪ್ರೊ 5G ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

ರೆಡ್ಮಿ A7 ಪ್ರೊ 5G ಮೊಬೈಲ್ ಫೀಚರ್ಸ್
ರೆಡ್ಮಿ A7 ಪ್ರೊ 5G ಮೊಬೈಲ್ 6.9 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 800 nits ಪೀಕ್ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್ ಆಕ್ಟಾ-ಕೋರ್ Unisoc T8300 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.
ಹಾಗೆಯೇ ರೆಡ್ಮಿ A7 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 32 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,300mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 15W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
Disclosure: This Article Contains Affiliate Links
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
