Amazon Prime Day Sale Redmi Turbo 5
ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಚಾಲ್ತಿ ಇರುವ ಅಮೆಜಾನ್ ಪ್ರೈಮ್ ಡೇ ಸೇಲ್‌ನಲ್ಲಿ (Amazon Prime Day 2026) ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್ ಲಭ್ಯವಿದೆ. ಈ ವಿಶೇಷ ಮಾರಾಟದಲ್ಲಿ ರೆಡ್ಮಿ ಕಂಪನಿಯ Redmi Turbo 5 ಸ್ಮಾರ್ಟ್‌ಫೋನ್ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಸಹ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಆಸ್ಫಾಲ್ಟ್ ಬ್ಲಾಕ್, ನೈಟ್ರೋ ಬ್ಲೂ ಮತ್ತು ಟರ್ಬೊ ವೈಟ್ ಕಲರ್ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ರೆಡ್ಮಿ ಟರ್ಬೋ 5 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Amazon Prime Day Sale 2026 ಪ್ರಾರಂಭ; ಈ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಆಫರ್
ಆಕರ್ಷಕ ಫೀಚರ್ಸ್‌ಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ರೆಡ್ಮಿ ಮೊಬೈಲ್ ಕಂಪನಿಯ ರೆಡ್ಮಿ ಟರ್ಬೋ 5 5G ಮೊಬೈಲ್ ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ ಸೇಲ್‌ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 54,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 37,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್ ಆಸ್ಫಾಲ್ಟ್ ಬ್ಲಾಕ್, ನೈಟ್ರೋ ಬ್ಲೂ ಮತ್ತು ಟರ್ಬೊ ವೈಟ್ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ. ಈ ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ರೆಡ್ಮಿ ಟರ್ಬೋ 5 5G ಮೊಬೈಲ್ 6.59 ಇಂಚಿನ 1.5K AMOLED ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಮತ್ತು ಡಾಲ್ಬಿ ವಿಷನ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 8GB RAM + 256GB ಹಾಗೂ 6GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಅಲ್ಲದೇ ಆಂಡ್ರಾಯ್ಡ್ 16 ಆಧಾರಿತ HyperOS 3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66 + IP68 + IP69 + IP69K ರೇಟಿಂಗ್ ಸೌಲಭ್ಯ ಪಡೆದಿದೆ.
ರೆಡ್ಮಿ ಟರ್ಬೋ 5 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 20MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7,540mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 27W ವೈರ್ಡ್ ರಿವರ್ಸ್ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.
Disclosure: This Article Contains Affiliate Links