ಬಜೆಟ್ ಬೆಲೆಯಲ್ಲಿ ಗಮನ ಸೆಳೆದಿರುವ Samsung Galaxy M17e 5G ಫೋನಿಗೆ ಭಾರೀ ಡಿಸ್ಕೌಂಟ್!
Amazon ಕಂಪನಿಯ ಬಹುನಿರೀಕ್ಷಿತ Amazon Great Freedom Festival Sale 2026 ಸೇಲ್ ಇದೇ ಅಕ್ಟೋಬರ್ 8 ರಂದು ಪ್ರಾರಂಭವಾಗಲಿದೆ. ಈ ಸೇಲ್ ಶುರುವಿಗೂ ಮುನ್ನವೇ ಅಮೆಜಾನ್ ಸ್ಮಾರ್ಟ್‌ಫೋನ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಮೇಲಿನ ಡೀಲ್‌ಗಳನ್ನು ಬಹಿರಂಗಪಡಿಸಲು ಪ್ರಾರಂಭಿಸಿದೆ. ಇದರಿಂದಾಗಿ ಗ್ರಾಹಕರು ಮುಖ್ಯ ಸೇಲ್ ಪ್ರಾರಂಭವಾಗುವ ಮೊದಲೇ ಕೆಲವು ಡಿವೈಸ್‌ಗಳನ್ನು ಖರೀದಿಸುವ ಅವಕಾಶವನ್ನು ಲಭ್ಯವಾಗಿದೆ. ಈ ಮಾರಾಟದಲ್ಲಿ Samsung Galaxy M17e 5G ಮೊಬೈಲ್ ಆಕರ್ಷಕ ಕೊಡುಗೆ ಪಡೆದಿದೆ. ಇದರೊಂದಿಗೆ ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವ ಮೂಲಕ ಖರೀದಿದಾರರು ಹೆಚ್ಚುವರಿ ರಿಯಾಯಿತಿಯನ್ನೂ ಪಡೆಯಬಹುದು. ಹಾಗಾದರೆ ಅಮೆಜಾನ್‌ನಲ್ಲಿ ಈ ಮೊಬೈಲ್‌ಗೆ ಲಭ್ಯವಿರುವ ಕೊಡುಗೆಯ ಬಗ್ಗೆ ಮುಂದೆ ತಿಳಿಯೋಣ.
SurveyAlso Read : ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Redmi 17C 5G ಮೊಬೈಲ್; 6,000mAh ಬ್ಯಾಟರಿ ಸೌಲಭ್ಯ
Samsung Galaxy M17e 5G ಫೋನಿಗೆ ಭಾರೀ ಡಿಸ್ಕೌಂಟ್
ಬಜೆಟ್ ದರದಲ್ಲಿ ಸದ್ದು ಮಾಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಸ್ಮಾರ್ಟ್‌ಫೋನ್ ಸದ್ಯದಲ್ಲೇ ಪ್ರಾರಂಭವಾಗಲಿರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2026 ಮಾರಾಟದಲ್ಲಿ ಭಾರೀ ಡಿಸ್ಕೌಂಟ್ ಬೆಲೆಯಲ್ಲಿ ಲಭ್ಯವಾಗಲಿದೆ. ಅಮೆಜಾನ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಮೊಬೈಲ್ 16,999 ರೂ.ಗಳಿಗೆ ಲಭ್ಯವಿರುವುದು ಪಕ್ಕಾ ಆಗಿದೆ. ಆದರೆ ಪ್ರಸ್ತುತ ಇದರ ಬೆಲೆ 19,999 ರೂ.ಗಳು ಎಂದು ಪಟ್ಟಿ ಮಾಡಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಫೀಚರ್ಸ್ ಹೀಗಿವೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಮೊಬೈಲ್ 6.7 ಇಂಚಿನ HD+ Infinity-U LCD ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಈ ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 4GB / 6GB / 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಮೈಕ್ರೋ SD ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸಬಹುದಾದ ಆಯ್ಕೆ ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು ಎರಡನೇ ಕ್ಯಾಮೆರಾ 2MP ಡೆಪ್ತ್ ಸೆನ್ಸಾರ್ ಸೌಲಭ್ಯ ಹೊಂದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಅಲ್ಲದೇ ಧೂಳು ಮತ್ತು ನೀರು ಪ್ರತಿರೋಧಕ್ಕಾಗಿ ಈ ಫೋನ್ IP54 ರೇಟಿಂಗ್ ಸೌಲಭ್ಯ ಹೊಂದಿದೆ. ಅಲ್ಲದೇ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ ಪಡೆದುಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
