Redmi A7 Pro 5G ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ; ಖರೀದಿಗೆ ಇದುವೇ ಬೆಸ್ಟ್‌ ಟೈಮ್‌!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ರೆಡ್ಮಿ A7 ಪ್ರೊ 5G ಫೋನಿಗೆ ಭಾರೀ ಡಿಸ್ಕೌಂಟ್‌

ರೆಡ್ಮಿ A7 ಪ್ರೊ 5G ಮೊಬೈಲ್‌ 6,300mAh ಬ್ಯಾಟರಿ ಸಪೋರ್ಟ್‌ ಪಡೆದಿದೆ

ರೆಡ್ಮಿ A7 ಪ್ರೊ 5G ಫೋನ್‌ ಆಕ್ಟಾ ಕೋರ್ Unisoc T8300 ಪ್ರೊಸೆಸರ್‌ ಹೊಂದಿದೆ

Redmi A7 Pro 5G ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ; ಖರೀದಿಗೆ ಇದುವೇ ಬೆಸ್ಟ್‌ ಟೈಮ್‌!

ರೆಡ್ಮಿ ಕಂಪನಿಯ Redmi A7 Pro 5G ಮೊಬೈಲ್‌ ಆಕರ್ಷಕ ಫಿಚರ್ಸ್‌ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್‌ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಆಕ್ಟಾ-ಕೋರ್ Unisoc T8300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 13MP ಮುಖ್ಯ ಕ್ಯಾಮೆರಾ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಬ್ಲ್ಯಾಕ್‌, ಮಿಸ್ಟ್ ಬ್ಲೂ ಮತ್ತು ಸನ್‌ಸೆಟ್ ಆರೆಂಜ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ A7 ಪ್ರೊ 5G ಮೊಬೈಲ್‌ಗೆ ಲಭ್ಯವಿರುವ ಆಫರ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಭಾರತದಲ್ಲಿ OPPO F35 ಫೋನ್‌ ಸರಣಿ ಲಾಂಚ್‌ಗೆ ಡೇಟ್‌ ಫಿಕ್ಸ್‌; ಜಬರ್ದಸ್ತ್‌ ಫೀಚರ್ಸ್‌ ನಿರೀಕ್ಷೆ

Redmi A7 Pro 5G ಬೆಲೆಯಲ್ಲಿ ಬಿಗ್ ಆಫರ್

ಸ್ಟೈಲಿಶ್‌ ಲುಕ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್‌ ಪ್ರಿಯರ ಗಮನ ಸೆಳೆದಿರುವ ರೆಡ್ಮಿ A7 ಪ್ರೊ 5G ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 6GB + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 26,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಬಿಗ್ ಬಿಲಿಯನ್‌ ಡೇಸ್‌ ಸೇಲ್‌ ನಲ್ಲಿ 13,995 ರೂ.ಗಳ ಬೆಲೆಯಲ್ಲಿ ಖರೀದಿಗೆ ಸಿಗಲಿದೆ ಎಂದು ಕಾಣಿಸಿಕೊಂಡಿದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್‌ ಬ್ಲ್ಯಾಕ್‌, ಮಿಸ್ಟ್ ಬ್ಲೂ ಮತ್ತು ಸನ್‌ಸೆಟ್ ಆರೆಂಜ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Flipkart GOAT Redmi A7 pro

ರೆಡ್ಮಿ A7 ಪ್ರೊ 5G ಮೊಬೈಲ್‌ ಫೀಚರ್ಸ್‌

ರೆಡ್ಮಿ A7 ಪ್ರೊ 5G ಮೊಬೈಲ್‌ 6.9 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 800 nits ಪೀಕ್‌ ಬ್ರೈಟ್ನೆಸ್‌ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ-ಕೋರ್ Unisoc T8300 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.

ಹಾಗೆಯೇ ರೆಡ್ಮಿ A7 ಪ್ರೊ 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 6,300mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 15W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile