ಅಗ್ಗದ ದರದ Boltt ACE 5G ಮೊಬೈಲ್ ಈಗ ಇನ್ನಷ್ಟು ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯ!
ಫ್ಲಿಪ್‌ಕಾರ್ಟ್‌ನಲ್ಲಿ ಬೋಲ್ಟ್ ಏಸ್ 5G ಫೋನಿಗೆ ಆಕರ್ಷಕ ಆಫರ್
ಬೋಲ್ಟ್ ಏಸ್ 5G ಮೊಬೈಲ್ 6,000mAh ಬ್ಯಾಟರಿ ಸೌಲಭ್ಯ ಹೊಂದಿದೆ
ಬೋಲ್ಟ್ ಏಸ್ 5G ಸ್ಮಾರ್ಟ್‌ಫೋನ್ ಆರು ಆಕರ್ಷಕ ಬಣ್ಣಗಳಲ್ಲಿ ಲಭ್ಯ
Flipkart ಆಯೋಜಿಸಿರುವ ವಿಶೇಷ ಸೇಲ್‌ನಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಬೋಲ್ಟ್ ಕಂಪನಿಯ Boltt ACE 5G ಸ್ಮಾರ್ಟ್‌ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಯುನಿಸೊಕ್ T8200 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಬೋಲ್ಟ್ ಏಸ್ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : 50MP ಸೆಲ್ಫಿ ಕ್ಯಾಮೆರಾ ಸೌಲಭ್ಯದ OPPO F35 Pro ಮೊಬೈಲ್‌ಗೆ ಈಗ ಭರ್ಜರಿ ಡಿಸ್ಕೌಂಟ್!
Boltt ACE 5G ಈಗ ಡಿಸ್ಕೌಂಟ್‌ನಲ್ಲಿ ಲಭ್ಯ
ಎಂಟ್ರಿ ಲೆವೆಲ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಬೋಲ್ಟ್ ಏಸ್ 5G ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 4GB + 64GB ಸ್ಟೋರೇಜ್ ವೇರಿಯಂಟ್ ಬೆಲೆ 24,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್‌ಗಳ ಮೂಲಕ 11,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಸ್ಕೈ ಬ್ಲೂ, ಬ್ಲ್ಯಾಕ್, ಲ್ಯಾವೆಂಡರ ಬ್ಲೂಮ್, ಫಾರೆಸ್ಟ್ ಗ್ರೀನ್, ಬರ್ಗಂಡಿ ಬ್ಲಿಸ್ ಹಾಗೂ ವೈಟ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.

ಬೋಲ್ಟ್ ಏಸ್ 5G ಮೊಬೈಲ್ ಫೀಚರ್ಸ್
ಬೋಲ್ಟ್ ಏಸ್ 5G ಸ್ಮಾರ್ಟ್‌ಫೋನ್ 6.79 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು, ಇದರೊಂದಿಗೆ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಪಡೆದಿದೆ. ಹಾಗೆಯೇ ಈ ಫೋನ್ ಯುನಿಸೊಕ್ T8200 ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ದೀರ್ಘಾವಧಿ ಬ್ಯಾಕ್‌ಅಪ್ ಒದಗಿಸಲಿದೆ. ಇದಕ್ಕೆ ಪೂರಕವಾಗಿ ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಬೋಲ್ಟ್ ಏಸ್ 5G ಸ್ಮಾರ್ಟ್‌ಫೋನ್ ಹಿಂಬದಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 64MP ಸೆನ್ಸಾರ್ ಹಾಗೂ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸೌಲಭ್ಯ ಪಡೆದಿದೆ. ವಿಡಿಯೋ ಕರೆ ಹಾಗೂ ಸೆಲ್ಫಿಗಾಗಿ ಈ ಫೋನ್ 8MP ಸೆನ್ಸಾರ್ ಕ್ಯಾಮೆರಾ ಒಳಗೊಂಡಿದೆ. ಈ ಫೋನ್ ಸ್ಕೈ ಬ್ಲೂ, ಬ್ಲ್ಯಾಕ್, ಲ್ಯಾವೆಂಡರ ಬ್ಲೂಮ್, ಫಾರೆಸ್ಟ್ ಗ್ರೀನ್, ಬರ್ಗಂಡಿ ಬ್ಲಿಸ್ ಹಾಗೂ ವೈಟ್ ಕಲರ್ ಆಯ್ಕೆಯನ್ನು ಒಳಗೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
