CMF Phone 2 Pro
ಮಾರುಕಟ್ಟೆಯಲ್ಲಿ ವಿಭಿನ್ನ ಡಿಸೈನ್ ಮೂಲಕ ಗಮನ ಸೆಳೆದಿರುವ CMF Phone 2 Pro 5G ಫೋನ್ ಅನ್ನು ಆಫರ್‌ನಲ್ಲಿ ಖರೀದಿಸಲು ಈಗ ಸುಸಮಯ. ಹೌದು CMF ಫೋನ್ 2 ಪ್ರೊ 5G ಸ್ಮಾರ್ಟ್‌ಫೊನ್ ಈಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್ ನಲ್ಲಿ ಭರ್ಜರಿ ಬೆಲೆ ಇಳಿಕೆ ಪಡೆದಿದೆ. ಅಲ್ಲದೇ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದು. CMF ಕಂಪನಿಯ ಈ ಸ್ಮಾರ್ಟ್‌ಫೋನ್ MedaiTek Dimensty 7300 Pro 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು ಇದರೊಂದಿಗೆ 5000mAh ಬ್ಯಾಟರಿ ಬೆಂಬಲವನ್ನು ಒಳಗೊಂಡಿದೆ. ಅಂದಹಾಗೆ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ CMF Phone 2 Pro 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Samsung Galaxy S26 Ultra, Galaxy S26 Plus, Galaxy S26 ಫೋನ್‌ಗಳ ಬೆಲೆಯ ಮಾಹಿತಿ ಇಲ್ಲಿದೆ
CMF Phone 2 Pro 5G ಮೊಬೈಲ್ ಪ್ರಸ್ತುತ Flipkart ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 8GB RAM + 128GB ವೇರಿಯಂಟ್ ಬೆಲೆ 22,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್ 17,999 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿಯಾಗಿ 1,375 ರೂ.ಗಳ ವರೆಗೂ ಇನ್‌ಸ್ಟಂಟ್ ಡಿಸ್ಕೌಂಟ್ ಪಡೆಯಬಹುದಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಲೈಟ್ ಗ್ರೀನ್, ಆರೆಂಜ್, ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.
CMF Phone 2 Pro 5G ಮೊಬೈಲ್ ಡಿಸ್‌ಪ್ಲೇಯು 6.77 ಇಂಚಿನ Flexible AMOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ 2392×1080 ಪಿಕ್ಸೆಲ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ MedaiTek Dimensty 7300 Pro 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 8GB RAM + 128GB ಹಾಗೂ 8GB RAM + 256GB ಸ್ಟೋರೇಜ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಹಾಗೆಯೇ CMF Phone 2 Pro 5G ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದೆ. ಸೆಕೆಂಡರಿ ಕ್ಯಾಮೆರಾ 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಹಾಗೂ ತೃತೀಯ ಕ್ಯಾಮೆರಾ 8MP ಸೆನ್ಸಾರ್ ಬಲ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 16MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 5000mAh ಬ್ಯಾಟರಿ ಜೊತೆಗೆ 33W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಪಡೆದಿದೆ. ಹಾಗೆಯೇ Bluetooth, GPS, WiFi, 3.5mm Audio Jack, USB Type C Charge Port ಆಯ್ಕೆಗಳನ್ನು ಹೊಂದಿದೆ.