ಸ್ಟೈಲಿಶ್‌ ಲುಕ್‌ ಇರುವ Motorola Edge 70 Pro ಮೊಬೈಲ್‌ ಬೆಲೆಯಲ್ಲಿ ಈಗ ಗಮನಾರ್ಹ ಇಳಿಕೆ!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ ಎಡ್ಜ್ 70 ಪ್ರೊ ಫೋನಿಗೆ ಆಕರ್ಷಕ ಆಫರ್‌

ಮೊಟೊರೊಲಾ ಎಡ್ಜ್ 70 ಪ್ರೊ ಮೊಬೈಲ್‌ 6,500mAh ಬ್ಯಾಟರಿ ಸೌಲಭ್ಯ ಹೊಂದಿದೆ

ಮೊಟೊರೊಲಾ ಎಡ್ಜ್ 70 ಪ್ರೊ ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಬಣ್ಣಗಳಲ್ಲಿ ಲಭ್ಯ

ಸ್ಟೈಲಿಶ್‌ ಲುಕ್‌ ಇರುವ Motorola Edge 70 Pro ಮೊಬೈಲ್‌ ಬೆಲೆಯಲ್ಲಿ ಈಗ ಗಮನಾರ್ಹ ಇಳಿಕೆ!

Flipkart Big Bang Diwali Sale: ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಮೊಟೊರೊಲಾ ಕಂಪನಿಯ Motorola Edge 70 Pro ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಎಕ್ಸ್‌ಟ್ರೀಮ್ ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 6,500mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್ 70 ಪ್ರೊ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಅಗ್ಗದ ಬೆಲೆಯಲ್ಲಿ ಗಮನ ಸೆಳೆದ Redmi 15A ಮೊಬೈಲ್‌ ದರದಲ್ಲಿ ಇದೀಗ ಭರ್ಜರಿ ಇಳಿಕೆ!

Motorola Edge 70 Pro ಈಗ ಆಫರ್‌ನಲ್ಲಿ ಲಭ್ಯ

ಬಜೆಟ್‌ ದರ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಮೊಟೊರೊಲಾ ಎಡ್ಜ್ 70 ಪ್ರೊ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 4GB + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 27,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 16,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಪ್ಯಾಂಟೋನ್ ಲಿಲ್ಲಿ ವೈಟ್, ಪ್ಯಾಂಟೋನ್ ಟೀ ಮತ್ತು ಪ್ಯಾಂಟೋನ್ ಟೈಟಾನ್ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

MOTOROLA edge 70 pro
MOTOROLA edge 70 pro

ಮೊಟೊರೊಲಾ ಎಡ್ಜ್ 70 ಪ್ರೊ ಫೋನ್‌ ಫೀಚರ್

ಮೊಟೊ ಸಂಸ್ಥೆಯ ಈ ಫೋನ್‌ 6.8 ಇಂಚಿನ ಸೂಪರ್ HD ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 1,272×2,772 ಪಿಕ್ಸಲ್ ರೆಸಲ್ಯೂಶನ್ ಅನ್ನು ಪಡೆದಿದೆ. ಇದು 144Hz ವರೆಗೆ ರಿಫ್ರೆಶ್ ರೇಟ್‌ ಹೊಂದಿದ್ದು 5,200 nits ಸೌಲಭ್ಯ ನೀಡಲಾಗಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಎಕ್ಸ್‌ಟ್ರೀಮ್ ಪ್ರೊಸೆಸರ್‌ ಪವರ್ ಜೊತೆಗೆ Android 16 ಓಎಸ್‌ ಸಪೋರ್ಟ್‌ ಒಳಗೊಂಡಿದೆ. ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68+IP69 ರೇಟಿಂಗ್‌ ಸೌಲಭ್ಯ ಪಡೆದಿದೆ.

ಹಾಗೆಯೇ ಮೊಟೊರೊಲಾ ಎಡ್ಜ್ 70 ಪ್ರೊ ಮೊಬೈಲ್‌ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ದ್ವಿತೀಯ ಕ್ಯಾಮೆರಾ 50 ಮೆಗಾಪಿಕ್ಸಲ್ ಸೆನ್ಸಾರ್‌ನಲ್ಲಿ ಇದ್ದು, ತೃತೀಯ ಕ್ಯಾಮೆರಾವು ಬೇಸಿಕ್‌ ಸೆನ್ಸಾರ್ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 50 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಅಲ್ಲದೇ ಈ ಫೋನ್ 6,500mAh ಸಾಮರ್ಥ್ಯದ ಬ್ಯಾಟರಿ ಒಳಗೊಂಡಿದ್ದು, 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 5W ವೈರ್ಡ್ ರಿವರ್ಸ್ ಫಾಸ್ಟ್ ಚಾರ್ಜಿಂಗ್‌ ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile