ಕಡಿಮೆ ಬೆಲೆಯ Redmi 17C 5G ಸ್ಮಾರ್ಟ್ಫೋನ್ ಮತ್ತಷ್ಟು ರಿಯಾಯಿತಿ ದರದಲ್ಲಿ ಲಭ್ಯ!
ಫ್ಲಿಪ್ಕಾರ್ಟ್ನಲ್ಲಿ ರೆಡ್ಮಿ 17C 5G ಫೋನಿಗೆ ಬೆಸ್ಟ್ ಆಫರ್
ರೆಡ್ಮಿ 17C 5G ಮೊಬೈಲ್ 6,000mAh ಬ್ಯಾಟರಿ ಪಡೆದಿದೆ
ರೆಡ್ಮಿ 17C 5G ಸ್ಮಾರ್ಟ್ಫೋನ್ ಆಕರ್ಷಕ ಕಲರ್ಗಳಲ್ಲಿ ಲಭ್ಯ
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ಆಯ್ದ ಸ್ಮಾರ್ಟ್ಫೋನ್ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಿದೆ. ಆ ಪೈಕಿ Redmi 17C 5G ಸ್ಮಾರ್ಟ್ಫೋನ್ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ರೆಡ್ಮಿ 17C 5G ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Redmi 17C 5G ಈಗ ಡಿಸ್ಕೌಂಟ್ನಲ್ಲಿ ಲಭ್ಯ
ಅಗ್ಗದ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ರೆಡ್ಮಿ 17C 5G ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 4GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 39,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 20,785 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಕಾಫಿ ಬ್ರೂ, ಡಾರ್ಕ್ ನೈಟ್ ಮತ್ತು ಪರ್ಪಲ್ ಡಾನ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ರೆಡ್ಮಿ 17C 5G ಸ್ಮಾರ್ಟ್ಫೋನ್ ಫೀಚರ್ಸ್
ರೆಡ್ಮಿ 17C 5G ಮೊಬೈಲ್ 6.9 ಇಂಚಿನ HD+ LCD ಡಿಸ್ಪ್ಲೇ ಅನ್ನು ಪಡೆದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 810 ನಿಟ್ಸ್ ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಇದರ ಸ್ಕ್ರೀನ್ 720×1,600 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಪರೇಟಿಂಗ್ ಸಿಸ್ಟಮ್ (HyperOS 3) ಸಪೋರ್ಟ್ ಪಡೆದಿದೆ. ಅಲ್ಲದೇ ಧೂಳು ಮತ್ತು ನೀರಿನ ಸಿಂಪಡಣೆಯಿಂದ ರಕ್ಷಣೆಗಾಗಿ ಇದು IP64 ರೇಟಿಂಗ್ ಅನ್ನು ಪಡೆದುಕೊಂಡಿದೆ.
ಹಾಗೆಯೇ ರೆಡ್ಮಿ 17C 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್ಯೆಂದರೆ ಇದು 6,000mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 33W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.