ಜನಪ್ರಿಯ Samsung Galaxy S25 FE ಮೊಬೈಲ್‌ ಖರೀದಿಗೆ ಇದುವೇ ಬೊಂಬಾಟ್‌ ಆಫರ್‌!

Highlights

ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 FE ಫೋನಿಗೆ ಬಿಗ್ ಡಿಸ್ಕೌಂಟ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 FE ಮೊಬೈಲ್‌ 4,900mAh ಬ್ಯಾಟರಿ ಪಡೆದಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 FE ಮೊಬೈಲ್‌ ಆಕರ್ಷಕ ಕಲರ್‌ಗಳಲ್ಲಿ ಲಭ್ಯ

ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಲಭ್ಯವಿದೆ. ಆ ಪೈಕಿ Samsung Galaxy S25 FE ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಆಕ್ಟಾ ಕೋರ್ Exynos 2400 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 50MP ಮುಖ್ಯ ಕ್ಯಾಮೆರಾ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 FE ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Samsung Galaxy S25 FE ಈಗ ಡಿಸ್ಕೌಂಟ್‌ನಲ್ಲಿ ಲಭ್ಯ

ಅಗ್ಗದ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 FE ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 89,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 47,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಜೆಟ್‌ ಬ್ಲ್ಯಾಕ್‌, ನೇವಿ ಹಾಗೂ ವೈಟ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 FE ಫೀಚರ್ಸ್‌ ಹೀಗಿವೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 FE ಮೊಬೈಲ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.7 ಇಂಚಿನ FHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಹೊಂದಿದೆ. ಅಲ್ಲದೇ ಈ ಮೊಬೈಲ್‌ ಸ್ಕ್ರೀನ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ ಕೋರ್ Exynos 2400 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು ಇದಕ್ಕೆ ಪೂರಕವಾಗಿ 8GB + 128GB ಹಾಗೂ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ S25 FE ಮೊಬೈಲ್‌ 45W ವೈರ್ಡ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್‌ ಜೊತೆಗೆ 4,900mAh ಸಾಮರ್ಥ್ಯದ ಬ್ಯಾಟರಿ ಪಡೆದುಕೊಂಡಿದೆ. ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಕೆಂಡರಿ ಕ್ಯಾಮೆರಾವು 12MP ಸೆನ್ಸಾರ್‌ ಹೊಂದಿದ್ದು ತೃತೀಯ ಕ್ಯಾಮೆರಾವು 8MP ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಅದೇ ರೀತಿ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 12MP ಕ್ಯಾಮೆರಾವನ್ನು ನೀಡಲಾಗಿದೆ. ಇದರ ಜೊತೆಗೆ One UI 8 ನೊಂದಿಗೆ ಇತ್ತೀಚಿನ Android 16 ನಲ್ಲಿ ಕಾರ್ಯನಿರ್ವಹಿಸುತ್ತದೆ.

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile