ಪ್ರೇಮಿಗಳ ದಿನದ ಅಂಗವಾಗಿ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣವು Valentine,s Sale ಆಯೋಜಿಸಿದ್ದು ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ಘೋಷಿಸಿದೆ. ಆ ಪೈಕಿ ರಿಯಲ್‌ಮಿ ಕಂಪನಿಯ Realme P3x 5G ಸ್ಮಾರ್ಟ್‌ಫೋನ್ ಸಹ ಬೊಂಬಾಟ್ ಬೆಲೆ ಇಳಿಕೆ ಪಡೆದುಕೊಂಡಿದೆ. ಇದಲ್ಲದೇ ಈ ಪ್ಲಾಟ್‌ಫಾರ್ಮ್‌ನಲ್ಲಿ ಆಯ್ದ ಕೆಲವು ಬ್ಯಾಂಕ್ ಕೊಡುಗೆಗಳಿಂದ ಗ್ರಾಹಕರು ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್ Mediatek Dimensity 6400 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್ 6000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು ಇದರ ಜೊತೆಗೆ ಪ್ರೀಮಿಯಂ Vegan ಲೆದರ್ ಚಟ್‌ಅಪ್ ಅನ್ನು ಸಹ ಒಳಗೊಂಡಿದೆ. ಹಾಗಾದರೆ Flipkart ವೆಬ್‌ಸೈಟ್‌ನಲ್ಲಿ Realme P3x 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Jio ಟೆಲಿಕಾಂನ ಕಡಿಮೆ ಬೆಲೆಯ ಈ ಪ್ಲಾನ್‌ಗಳಲ್ಲಿ ಸಿಗುತ್ತೆ ಜಬರ್ದಸ್ತ್ ವ್ಯಾಲಿಡಿಟಿ
ಜನಪ್ರಿಯ Realme P3x 5G ಮೊಬೈಲ್ ಸದ್ಯ Flipkart ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 6GB RAM + 128 GB ವೇರಿಯಂಟ್ 16,999 ರೂಗಳ ಪ್ರೈಸ್‌ಟ್ಯಾಗ್ ಹೊಂದಿದ್ದು, ಆದರೆ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 12,999 ರೂಗಳ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಈ ಸ್ಟೈಲಿಶ್ ಮೊಬೈಲ್ ಖರೀದಿಸುವ ಗ್ರಾಹಕರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆ ಹಾಗೂ ಆಕರ್ಷಕ EMI ಆಯ್ಕೆಗಳನ್ನು ಸಹ ಪಡೆಯಬಹುದು. ಇನ್ನು ಈ ಮೊಬೈಲ್ ಮೀಡ್‌ನೈಟ್ ಬ್ಲೂ, ಸಿಲ್ವರ್ ಹಾಗೂ ಸ್ಟೆಲ್ಲರ್ ಪಿಂಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
Realme P3x 5G ಮೊಬೈಲ್ 6.72 ಇಂಚಿನ ಪೂರ್ಣ HD LCD ಡಿಸ್‌ಪ್ಲೇ ಅನ್ನು ಒಳಗೊಂಡಿರುವ ಜೊತೆಗೆ 120Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಸೂರ್ಯನ ಬೆಳಕಿನಲ್ಲಿ 950 nits ವರೆಗೆ ಗರಿಷ್ಠ ಬ್ರೈಟ್ನೆಸ್ ಒದಗಿಸುವ ಸೌಲಭ್ಯ ಪಡೆದುಕೊಂಡಿದೆ. ಅಂದಹಾಗೆ ಈ ಮೊಬೈಲ್ Mediatek Dimensity 6400 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಈ ಫೋನ್ 18GB ವರೆಗೆ ಡೈನಾಮಿಕ್ RAM ಸೌಲಭ್ಯವನ್ನು ಒಳಗೊಂಡಿದೆ.
ಅದೇ ರೀತಿ Realme P3x 5G ಮೊಬೈಲ್ ಆಕರ್ಷಕ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಕೂಡಾ ಈ ಮೊಬೈಲ್ 8MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಅಲ್ಲದೇ ಇದು 1080P / 30fps ವೀಡಿಯೊ ರೆಕಾರ್ಡಿಂಗ್ ಸಪೋರ್ಟ್ ಪಡೆದಿದೆ. ಇನ್ನು ಈ ಫೋನ್ 6,000mAh ಬ್ಯಾಟರಿ ಜೊತೆಗೆ 45W SuperVOOC ಚಾರ್ಜಿಂಗ್ ಬೆಂಬಲ ಪಡೆದಿದೆ.