Google Pixel 10 Price Down By Rs 10000 On Amazon How To Grab The Deal
ನೀವೇನಾದರೂ Google ಸಂಸ್ಥೆಯ ಇತ್ತೀಚಿನ Pixel ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್ ಅನ್ನು ಖರೀದಿಸಲು ಬಯಸಿದರೆ ತಡಮಾಡದೆ Google Pixel 10 ಫೋನ್ ಅನ್ನು ಖರೀದಿಸಿ ಬಿಡಿ. ಹೌದು, Amazon ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ Google Pixel 10 ಮೊಬೈಲ್ ಭಾರೀ ಬೆಲೆ ಇಳಿಕೆಯ ದರದಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಮೂಲಕ ಹೆಚ್ಚುವರಿ ರಿಯಾಯಿತಿ ಕೂಡಾ ಪಡೆಯಬಹುದಾಗಿದೆ. ಅಂದಹಾಗೆ ಗೂಗಲ್ ಸಂಸ್ಥೆಯ ಈ ಮೊಬೈಲ್ Tensor G5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಹಾಗೆಯೇ ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 48MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಅಮೆಜಾನ್ ವೆಬ್‌ಸೈಟ್‌ನಲ್ಲಿ Google Pixel 10 ಮೊಬೈಲ್‌ಗೆ ಲಭ್ಯ ಇರುವ ಕೊಡುಗೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Airtel ಗ್ರಾಹಕರೇ ನಿಮಗೆ 365 ದಿನಗಳ ವ್ಯಾಲಿಡಿಟಿ ಅಗತ್ಯ ಇದ್ದರೆ ಈ ಪ್ಲಾನ್ ರೀಚಾರ್ಜ್ ಮಾಡಿ!
ಇತ್ತೀಚಿನ Google Pixel 10 ಮೊಬೈಲ್ ಆಕರ್ಷಕ ಡಿಸ್ಕೌಂಟ್ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. Amazon ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಈ ಮೊಬೈಲ್‌ನ 12GB RAM + 256GB ವೇರಿಯಂಟ್ 79,999 ರೂಗಳ ಪ್ರೈಸ್‌ಟ್ಯಾಗ್ ಪಡೆದಿದ್ದು, ಆದರೆ ಪ್ರಸ್ತುತ ನೇರವಾಗಿ 70,380 ರೂಗಳ ಆಫರ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಸಕ್ತ ಖರೀದಿದಾರರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದು. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಭಿನ್ನ EMI ಆಯ್ಕೆಗಳನ್ನು ಪಡೆಯಬಹುದು.
Google Pixel 10 ಸ್ಮಾರ್ಟ್‌ಫೋನ್ 120 Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.3 ಇಂಚಿನ OLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 3,000 ನಿಟ್ಸ್ ಪೀಕ್ ಬ್ರೈಟ್‌ನೆಸ್ ಸಪೋರ್ಟ್ ಜೊತೆಗೆ ಡಿಸ್ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಅನ್ನು ಪಡೆದುಕೊಂಡಿದೆ. ಈ ಮೊಬೈಲ್ Tensor G5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ Android 15 ಸಪೋರ್ಟ್ ಒಳಗೊಂಡಿದೆ. ಅಲ್ಲದೇ ಇದು 12GB RAM + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ Google Pixel 10 ಮೊಬೈಲ್ ಆಕರ್ಷಕ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಈ ಫೋನ್ 48MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 13MP ಅಲ್ಟ್ರಾ ವೈಡ್ ಸೆನ್ಸಾರ್ ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನೊಂದು ಕ್ಯಾಮೆರಾವು ಸಹ 10.8MP ಟೆಲಿಫೋಟೋ ಸೆನ್ಸಾರ್ ಹೊಂದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 10.8MP ಕ್ಯಾಮೆರಾವನ್ನು ಒಳಗೊಂಡಿದ್ದು 4K ಗುಣಮಟ್ಟದ ಸೆಲ್ಫಿ ಫೋಟೋಗಳನ್ನು ಸೆರೆಹಿಡಿಯಬಹುದು. ಹಾಗೆಯೇ ಈ ಫೋನ್ 4,970mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 30W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಜೊತೆಗೆ 15W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.