ಜನಪ್ರಿಯ Google Pixel 10 Pro ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ! ಇದು ಅತ್ಯುತ್ತಮ ಕ್ಯಾಮೆರಾ ಫೋನ್‌

HIGHLIGHTS

ಗೂಗಲ್‌ ಪಿಕ್ಸಲ್‌ 10 ಪ್ರೊ ಮೊಬೈಲ್‌ 48MP ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ

ಗೂಗಲ್‌ ಪಿಕ್ಸಲ್‌ 10 ಪ್ರೊ ಫೋನ್‌ Tensor G5 ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ

ಗೂಗಲ್‌ ಪಿಕ್ಸಲ್‌ 10 ಪ್ರೊ ಫೋನ್‌ ನಾಲ್ಕು ಆಕರ್ಷಕ ಕಲರ್‌ ಆಯ್ಕೆಗಳಲ್ಲಿ ಲಭ್ಯ

ನೀವೇನಾದರೂ ಸದ್ಯ ಗೂಗಲ್‌ ಕಂಪನಿಯ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ ಖರೀದಿಸಲು ಯೋಜಿಸುತ್ತಿದ್ದರೆ ಇಲ್ಲಿದೆ ನಿಮಗೆ ಗುಡ್‌ನ್ಯೂಸ್‌. ಹೌದು, ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ತಾಣದಲ್ಲಿ Google Pixel 10 Pro ಮೊಬೈಲ್‌ಗೆ ಬೊಂಬಾಟ್‌ ಡಿಸ್ಕೌಂಟ್‌ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್‌ ಆಫರ್‌ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ಗೂಗಲ್‌ ಪಿಕ್ಸಲ್‌ 10 ಪ್ರೊ ಮೊಬೈಲ್‌ Tensor G5 ಹಾಗೂ Titan M2 ಚಿಪ್‌ಸೆಟ್‌ ಪ್ರೊಸೆಸರ್‌ ಬೆಂಬಲದಲ್ಲಿ ಕೆಲಸ ಮಾಡಲಿದೆ ಹಾಗೂ ಆಂಡ್ರಾಯ್ಡ್‌ 16 ಓಎಸ್‌ ಬೆಂಬಲ ಪಡೆದುಕೊಂಡಿದೆ. ಇದರೊಂದಿಗೆ 120Hz ಸ್ಕ್ರೀನ್‌ ರಿಫ್ರೆಶ್ ರೇಟ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗಾದರೆ ಅಮೆಜಾನ್‌ ವೆಬ್‌ಸೈಟ್‌ನಲ್ಲಿ ಗೂಗಲ್‌ ಪಿಕ್ಸಲ್‌ 10 ಪ್ರೊ ಫೋನಿಗೆ ಲಭ್ಯ ಇರುವ ಆಫರ್‌ ಬಗ್ಗೆ ಮುಂದೆ ತಿಳಿಯೋಣ.

Also Read : ನಾಳೆ iQOO 15R ಸ್ಮಾರ್ಟ್‌ಫೋನ್‌ ಸೇಲ್‌ ಪ್ರಾರಂಭ! ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

Google Pixel 10 Pro ಮೊಬೈಲ್‌ಗೆ ಭರ್ಜರಿ ಡಿಸ್ಕೌಂಟ್‌

ಸರ್ಚ್ ಇಂಜಿನ್ ದೈತ್ಯ ಗೂಗಲ್‌ ಸಂಸ್ಥೆಯ ಗೂಗಲ್‌ ಪಿಕ್ಸಲ್‌ 10 ಪ್ರೊ ಸ್ಮಾರ್ಟ್‌ಫೋನ್‌ ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್‌ 6GB RAM + 256GB ವೇರಿಯಂಟ್‌ ಬೆಲೆ 1,09,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 1,09,999 ರೂಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಪಡೆಯಬಹುದಾಗಿದೆ. ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್‌ ಮೂನ್‌ಸ್ಟೋನ್, Jade, Porcelain ಹಾಗೂ ಅಬ್ಸಿಡಿಯನ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ಗೂಗಲ್‌ ಪಿಕ್ಸಲ್‌ 10 ಪ್ರೊ ಫೀಚರ್ಸ್‌ ಮಾಹಿತಿ

ಗೂಗಲ್‌ ಪಿಕ್ಸಲ್‌ 10 ಪ್ರೊ ಮೊಬೈಲ್‌ 6.3 ಇಂಚಿನ LTPO OLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಈ ಮೊಬೈಲ್‌ Tensor G5 ಹಾಗೂ Titan M2 ಚಿಪ್‌ಸೆಟ್‌ ಪ್ರೊಸೆಸರ್‌ ಬೆಂಬಲದಲ್ಲಿ ಕೆಲಸ ಮಾಡಲಿದೆ ಹಾಗೂ ಆಂಡ್ರಾಯ್ಡ್‌ 16 ಓಎಸ್‌ ಬೆಂಬಲ ಪಡೆದುಕೊಂಡಿದೆ. ಇದಕ್ಕೆ ಅನುಗುಣವಾಗಿ 16GB RAM + 256GB ಸ್ಟೋರೇಜ್‌ ಆಯ್ಕೆ ಪಡೆದುಕೊಂಡಿದೆ. ಇನ್ನು ಈ ಮೊಬೈಲ್‌ 4,870 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದ್ದು ಇದಕ್ಕೆ ಪೂರಕವಾಗಿ 30W ವೈರ್ಡ್ ಚಾರ್ಜಿಂಗ್ ಹಾಗೂ 15W Qi2 ವೈರ್‌ಲೆಸ್ ಚಾರ್ಜಿಂಗ್ ಒದಗಿಸಿದೆ.

ಹಾಗೆಯೇ ಗೂಗಲ್‌ ಪಿಕ್ಸಲ್‌ 10 ಪ್ರೊ ಮೊಬೈಲ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 50MP ವೈಡ್ ಆಂಗಲ್ ಲೆನ್ಸ್ ಸೆನ್ಸಾರ್‌ನಲ್ಲಿ ಇದೆ. ಉಳಿದೆರಡು ಕ್ಯಾಮೆರಾಗಳು ಕ್ರಮವಾಗಿ 48MP ಅಲ್ಟ್ರಾ ವೈಡ್ ಲೆನ್ಸ್ ಮತ್ತು 48MP 5x ಟೆಲಿಫೋಟೋ ಲೆನ್ಸ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇವೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 48MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಈ ಫೋನ್ ಅತ್ಯುತ್ತಮ ಆಂಡ್ರಾಯ್ಡ್ ಅನುಭವ, ಶಕ್ತಿಯುತ ಕ್ಯಾಮೆರಾ ರಚನೆ ಮತ್ತು AI-ಚಾಲಿತ ವೈಶಿಷ್ಟ್ಯಗಳ ಮೂಲಕ ಗಮನ ಸೆಳೆಯುತ್ತದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :