ಜನಪ್ರಿಯ Google Pixel 10a ಮೊಬೈಲ್ ಬೆಲೆಯಲ್ಲಿ ಬೊಂಬಾಟ್ ಇಳಿಕೆ; 48MP ಕ್ಯಾಮೆರಾ
ಫ್ಲಿಪ್ಕಾರ್ಟ್ನಲ್ಲಿ ಗೂಗಲ್ ಪಿಕ್ಸಲ್ 10a ಫೋನಿಗೆ ಬಿಗ್ ಆಫರ್
ಗೂಗಲ್ ಪಿಕ್ಸಲ್ 10a ಮೊಬೈಲ್ 5,100mAh ಬ್ಯಾಟರಿ ಸೌಲಭ್ಯ ಪಡೆದಿದೆ
ಗೂಗಲ್ ಪಿಕ್ಸಲ್ 10a ಸ್ಮಾರ್ಟ್ಫೋನ್ ಮೂರು ಆಕರ್ಷಕ ಕಲರ್ಗಳಲ್ಲಿ ಲಭ್ಯ
Flipkart Big Bang Diwali Sale: ಫ್ಲಿಪ್ಕಾರ್ಟ್ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಗೂಗಲ್ ಕಂಪನಿಯ Google Pixel 10a ಸ್ಮಾರ್ಟ್ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ Tensor G4 ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 5,100mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ಗೂಗಲ್ ಪಿಕ್ಸಲ್ 10a ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Google Pixel 10a ಭರ್ಜರಿ ಡಿಸ್ಕೌಂಟ್ನಲ್ಲಿ ಲಭ್ಯ
ಮೀಡ್ರೇಂಜ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಗೂಗಲ್ ಪಿಕ್ಸಲ್ 10a ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ಪ್ಲಾಟ್ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 8 GB RAM + 256 GB ಸ್ಟೋರೇಜ್ ವೇರಿಯಂಟ್ ಬೆಲೆ 55,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 52,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಲ್ಯಾವೆಂಡರ್, ಅಬ್ಸಿಡಿಯನ್, ಫಾಗ್ ಮತ್ತು ಬೆರ್ರಿ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ಗೂಗಲ್ ಪಿಕ್ಸಲ್ 10a ಮೊಬೈಲ್ನ ಫೀಚರ್ಸ್
ಗೂಗಲ್ ಪಿಕ್ಸಲ್ 10a ಮೊಬೈಲ್ 6.3 ಇಂಚಿನ Actua ಡಿಸ್ಪ್ಲೇ ಅನ್ನು ಪಡೆದಿದೆ. ಹಾಗೆಯೇ ಇದು 3,000 nits ಗರಿಷ್ಠ ಬ್ರೈಟ್ನೆಸ್ ಸಪೋರ್ಟ್ ಜೊತಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ಅನ್ನು ಹೊಂದಿದೆ. ಇನ್ನು ಈ ಮೊಬೈಲ್ Tensor G4 ಚಿಪ್ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 8GB RAM + 256GB ಆಂತರೀಕ ಸ್ಟೋರೇಜ್ ಸಪೋರ್ಟ್ ಅನ್ನು ಒಳಗೊಂಡಿದೆ. ಅಲ್ಲದೇ ಈ ದೈತ್ಯ ಫೋನ್ ಆಂಡ್ರಾಯ್ಡ್ 16 ಓಎಸ್ನಲ್ಲಿ ಕಾರ್ಯನಿರ್ವಹಿಸುತ್ತದೆ ಹಾಗೂ ಏಳು ವರ್ಷಗಳ OS ಮತ್ತು ಭದ್ರತಾ ಅಪ್ಡೇಟ್ ಬೆಂಬಲ ನೀಡುತ್ತದೆ.
ಗೂಗಲ್ ಪಿಕ್ಸಲ್ 10a ಸ್ಮಾರ್ಟ್ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್ಅಪ್ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 48MP ಸೆನ್ಸಾರ್ ಆಗಿದ್ದು ಸೆಕೆಂಡರಿ ಕ್ಯಾಮೆರಾವು 13MP ಅಲ್ಟ್ರಾವೈಡ್ ಲೆನ್ಸ್ ಪಡೆದುಕೊಂಡಿದೆ. ಇದಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 13MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 5,100mAh ಬ್ಯಾಟರಿ ಬ್ಯಾಕ್ಅಪ್ ಜೊತೆಗೆ 30W ವೈರ್ಡ್ ಚಾರ್ಜಿಂಗ್ ಮತ್ತು 10W ವೈರ್ಲೆಸ್ ಚಾರ್ಜಿಂಗ್ ಸಪೋರ್ಟ್ ಅನ್ನು ಹೊಂದಿದೆ. ಒಮ್ಮೆ ಪೂರ್ಣ ಚಾರ್ಜ್ನ ಮಾಡಿದರೆ 30 ಗಂಟೆಗಳ ಬ್ಯಾಟರಿ ಬ್ಯಾಕ್ಅಪ್ ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

