Google Pixel 9a ಮೊಬೈಲ್‌ ಖರೀದಿಸಲು ಇದುವೇ ಬೆಸ್ಟ್‌ ಟೈಮ್‌! ಭರ್ಜರಿ ಆಫರ್‌ ಲಭ್ಯ

HIGHLIGHTS

ಗೂಗಲ್‌ ಪಿಕ್ಸಲ್‌ 9a ಮೊಬೈಲ್‌ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ

ಈ ಮೊಬೈಲ್‌ 5,100mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದಿದೆ

ಗೂಗಲ್‌ನ ಈ ಫೋನ್‌ Tensor G4 ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದೆ

Google Pixel 9a ಮೊಬೈಲ್‌ ಖರೀದಿಸಲು ಇದುವೇ ಬೆಸ್ಟ್‌ ಟೈಮ್‌! ಭರ್ಜರಿ ಆಫರ್‌ ಲಭ್ಯ

ಗೂಗಲ್‌ ಕಂಪನಿಯ Google Pixel 9a ಮೊಬೈಲ್‌ ಆಕರ್ಷಕ ಫಿಚರ್ಸ್‌ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಗೂಗಲ್‌ನ Tensor G4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 5,100 mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಆಕರ್ಷಕ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಗೂಗಲ್‌ ಪಿಕ್ಸಲ್‌ 9a ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Jio ಕಂಪನಿಯಿಂದ 10,000 ರೂ.ಗಳ ಪ್ಲಾನ್‌ ಪರಿಚಯ! ಈ ಯೋಜನೆಯಲ್ಲಿ ಏನುಂಟು ಏನಿಲ್ಲ

Google Pixel 9a ಬೆಲೆಯಲ್ಲಿ ಭಾರೀ ಇಳಿಕೆ

ಪ್ರೀಮಿಯಂ ಲುಕ್ ಬೆಲೆಯ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಗೂಗಲ್‌ ಪಿಕ್ಸಲ್‌ 9a ಸ್ಮಾರ್ಟ್‌ಫೋನ್‌ ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 49,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 49,845 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಬ್ಯಾಂಕ್‌ ಆಫರ್‌ ಹಾಗೂ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

Google Pixel 9A

ಗೂಗಲ್‌ ಪಿಕ್ಸಲ್‌ 9a ಮೊಬೈಲ್‌ನ ಫೀಚರ್ಸ್‌

ಗೂಗಲ್‌ ಪಿಕ್ಸಲ್‌ 9a ಮೊಬೈಲ್‌ 120Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.3 ಇಂಚಿನ AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಇದರ ಸ್ಕ್ರೀನ್‌ 2700 ನಿಟ್ಸ್‌ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 1080 x 2424 ಪಿಕ್ಸೆಲ್‌ಗಳ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಈ ಮೊಬೈಲ್‌ ಗೂಗಲ್‌ನ Tensor G4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 8 GB RAM + 256 ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ.

ಹಾಗೆಯೇ ಗೂಗಲ್‌ ಪಿಕ್ಸಲ್‌ 9a ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್ ಹಿಂಬದಿಯ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾ 48MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದರ ಸೆಕೆಂಡರಿ ಕ್ಯಾಮೆರಾವು 13 MP ಅಲ್ಟ್ರಾವೈಡ್ ಸೆನ್ಸಾರ್‌ ಆಗಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 13MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ 5,100 mAh ಬ್ಯಾಟರಿ ಸೌಲಭ್ಯ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile