ಅತ್ಯುತ್ತಮ ಕ್ಯಾಮೆರಾ ಇರುವ Google Pixel 9a ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

HIGHLIGHTS

ಗೂಗಲ್‌ ಪಿಕ್ಸಲ್‌ 9a ಫೋನ್‌ ಬೆಲೆಯಲ್ಲಿ ಈಗ ಆಕರ್ಷಕ ಇಳಿಕೆ

ಗೂಗಲ್‌ ಪಿಕ್ಸಲ್‌ 9a ಮೊಬೈಲ್‌ 13MP ಸೆಲ್ಫಿ ಕ್ಯಾಮೆರಾ ರಚನೆ ಅನ್ನು ಪಡೆದಿದೆ

ಗೂಗಲ್‌ ಸಂಸ್ಥೆಯ ಈ ಫೋನ್‌ Tensor G4 ಚಿಪ್‌ಸೆಟ್‌ ಪ್ರೊಸೆಸರ್‌ ಪಡೆದುಕೊಂಡಿದೆ

ಗೂಗಲ್‌ ಕಂಪನಿಯ ಪಿಕ್ಸಲ್‌ ಸ್ಮಾರ್ಟ್‌ಫೋನ್‌ಗಳು ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿವೆ. ಸದ್ಯ ನೀವೇನಾದರೂ ಗೂಗಲ್‌ ಪಿಕ್ಸಲ್‌ ಮೊಬೈಲ್‌ ಖರೀದಿಸುವ ಪ್ಲಾನ್ ಹೊಂದಿದ್ದರೆ ನಿಮಗೆ ಸಿಹಿಸುದ್ದಿ ಇದೆ. ಹೌದು, ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಗೂಗಲ್‌ ಸಂಸ್ಥೆಯ Google Pixel 9a ಸ್ಮಾರ್ಟ್‌ಫೋನ್‌ ಗಮನಾರ್ಹ ಡಿಸ್ಕೌಂಟ್‌ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್‌ ಆಫರ್‌ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ಗೂಗಲ್‌ನ ಈ ಮೊಬೈಲ್‌ 5,100mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಅಲ್ಲದೇ ಇದು ಗೂಗಲ್‌ನ Tensor G4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಈ ಫೋನ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಗೂಗಲ್‌ ಪಿಕ್ಸಲ್‌ 9a ಮೊಬೈಲ್‌ಗೆ ಲಭ್ಯ ಇರುವ ಆಫರ್‌ ಬಗ್ಗೆ ಮುಂದೆ ತಿಳಿಯೋಣ.

Also Read : Realme 16 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಮುಹೂರ್ತ ನಿಗದಿ! ನಿರೀಕ್ಷಿತ ಫೀಚರ್ಸ್‌ ಗಮನಿಸಿ

Google Pixel 9a ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್‌

ಗೂಗಲ್‌ ಪಿಕ್ಸಲ್‌ 9a ಸ್ಮಾರ್ಟ್‌ಫೋನ್‌ ಸದ್ಯ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಸಖತ್ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್‌ 8 GB RAM + 256 GB ವೇರಿಯಂಟ್‌ ಬೆಲೆ 49,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 40,679 ರೂ.ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಇದರೊಂದಿಗೆ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಫೋನ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

ಗೂಗಲ್‌ ಪಿಕ್ಸಲ್‌ 9a ಮೊಬೈಲ್‌ನ ಫೀಚರ್ಸ್‌

ಗೂಗಲ್‌ ಪಿಕ್ಸಲ್‌ 9a ಮೊಬೈಲ್‌ 120Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.3 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 2700 ನಿಟ್ಸ್‌ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 1080 x 2424 ಪಿಕ್ಸೆಲ್‌ಗಳ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಈ ಮೊಬೈಲ್‌ ಗೂಗಲ್‌ನ Tensor G4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 8 GB RAM + 256 ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ.

ಹಾಗೆಯೇ ಗೂಗಲ್‌ ಪಿಕ್ಸಲ್‌ 9a ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾ 48MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದರ ಸೆಕೆಂಡರಿ ಕ್ಯಾಮೆರಾವು 13 MP ಅಲ್ಟ್ರಾವೈಡ್ ಸೆನ್ಸಾರ್‌ ಆಗಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 13MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ 5,100 mAh ಬ್ಯಾಟರಿ ಸೌಲಭ್ಯ ಪಡೆದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :