ನಾಳೆ HMD Vibe 2 5G ಫೋನ್ ಫಸ್ಟ್ ಸೇಲ್! ಬೆಲೆ ಹಾಗೂ ಫೀಚರ್ಸ್ ನೋಡಿ
ನಾಳೆ (ಮೇ 26 ರಂದು) ಹೆಚ್‌ಎಮ್‌ಡಿ ವೈಬ್ 2 ಮೊಬೈಲ್ ಸೇಲ್ ಶುರು
ಹೆಚ್‌ಎಮ್‌ಡಿಯ ಈ ಫೋನ್ ಆಕ್ಟಾ ಕೋರ್ ಯುನಿಸಾಕ್ ಪ್ರೊಸೆಸರ್ ಹೊಂದಿದೆ
ಹೆಚ್‌ಎಮ್‌ಡಿಯ ಈ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ
HMD ಮೊಬೈಲ್ ಸಂಸ್ಥೆಯು ತನ್ನ ಕೆಲವು ಮೊಬೈಲ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಇನ್ನು ಕಂಪನಿಯು ಇತ್ತೀಚಿಗೆ ಲಾಂಚ್ ಮಾಡಿರುವ HMD Vibe 2 5G ಮೊಬೈಲ್‌ನ ಮೊದಲ ಮಾರಾಟ ನಾಳೆ (ಮೇ 26 ರಂದು) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಶುರುವಾಗಲಿದೆ. ಈ ಬಜೆಟ್ ಬೆಲೆಯ ಮೊಬೈಲ್ ಆಕ್ಟಾ ಕೋರ್ ಯುನಿಸಾಕ್ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಈ ಮೊಬೈಲ್ ಕಾಸ್ಮಿಕ್ ಲ್ಯಾವೆಂಡರ್, ನಾರ್ಡಿಕ್ ಬ್ಲೂ ಮತ್ತು ಪೀಚ್ ಪಿಂಕ್ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಹೆಚ್‌ಎಮ್‌ಡಿ ವೈಬ್ 2 5G ಸ್ಮಾರ್ಟ್‌ಫೋನ್ ಸೇಲ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Jio ಟೆಲಿಕಾಂನ ಈ ಪ್ಲಾನ್ ರೀಚಾರ್ಜ್ ಮಾಡಿದ್ರೆ ಡೇಟಾ ಜೊತೆಗೆ 56 ದಿನಗಳ ವ್ಯಾಲಿಡಿಟಿ ಪಕ್ಕಾ
HMD Vibe 2 5G ಮೊಬೈಲ್ ಮಾರಾಟದ ಮಾಹಿತಿ
ಇತ್ತೀಚಿಗೆ ಬಿಡುಗಡೆ ಆಗಿರುವ ಹೆಚ್‌ಎಮ್‌ಡಿ ವೈಬ್ 2 5G ಫೋನ್ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಈ ಮೊಬೈಲ್ ನಾಳೆ (ಮೇ 26 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಮೊದಲ ಸೇಲ್ ಪ್ರಾರಂಭ ಮಾಡಲಿದೆ. ಈ ಮೊಬೈಲ್‌ನ ಆರಂಭಿಕ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ 10,999 ರೂ.ಗಳು ಆಗಿದೆ. ಹಾಗೆಯೇ 512GB ವೇರಿಯಂಟ್ ಬೆಲೆ 11,999 ರೂ.ಗಳು ಆಗಿದೆ. ಇನ್ನು ಈ ಮೊಬೈಲ್ ಕಾಸ್ಮಿಕ್ ಲ್ಯಾವೆಂಡರ್, ನಾರ್ಡಿಕ್ ಬ್ಲೂ ಮತ್ತು ಪೀಚ್ ಪಿಂಕ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

ಹೆಚ್‌ಎಮ್‌ಡಿ ವೈಬ್ 2 5G ಫೀಚರ್ಸ್ ಹೀಗಿವೆ
ಹೆಚ್‌ಎಮ್‌ಡಿ ವೈಬ್ 2 5G ಮೊಬೈಲ್ 6.7 ಇಂಚಿನ HD+ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್ 720×1,600 ಪಿಕ್ಸೆಲ್ ರೆಸಲ್ಯೂಶನ್ ಒಳಗೊಂಡಿದೆ. ಈ ಮೊಬೈಲ್ ಆಕ್ಟಾ ಕೋರ್ ಯುನಿಸಾಕ್ ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM + 64GB ಹಾಗೂ 512GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.
ಹೆಚ್‌ಎಮ್‌ಡಿ ವೈಬ್ 2 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಆಗಿದ್ದು, ಹಾಗೆಯೇ ಇದರ ಸೆಕೆಂಡರಿ ಬೇಸಿಕ್ ಸೆನ್ಸಾರ್ ಸೌಲಭ್ಯದಲ್ಲಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 18W ಚಾರ್ಜಿಂಗ್ ಹೊಂದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile