ಅಗ್ಗದ ಬೆಲೆಯಲ್ಲಿ HMD Vibe 2 5G ಸ್ಮಾರ್ಟ್‌ಫೋನ್‌ ಬಿಡುಗಡೆ! 6,000mAh ಬ್ಯಾಟರಿ ಸೌಲಭ್ಯ

HIGHLIGHTS

ಹೆಚ್‌ಎಮ್‌ಡಿ ವೈಬ್‌ 2 ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ

ಹೆಚ್‌ಎಮ್‌ಡಿಯ ಈ ನೂತನ ಮೊಬೈಲ್‌ 50MP ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ

ಹೆಚ್‌ಎಮ್‌ಡಿಯ ಈ ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ ಆಯ್ಕೆ ಪಡೆದಿದೆ

ಅಗ್ಗದ ಬೆಲೆಯಲ್ಲಿ HMD Vibe 2 5G ಸ್ಮಾರ್ಟ್‌ಫೋನ್‌ ಬಿಡುಗಡೆ! 6,000mAh ಬ್ಯಾಟರಿ ಸೌಲಭ್ಯ

ಹೆಚ್‌ಎಮ್‌ಡಿ ಮೊಬೈಲ್‌ ಕಂಪನಿಯು ನೂತನವಾಗಿ HMD Vibe 2 5G ಸ್ಮಾರ್ಟ್‌ಫೋನ್‌ ಅನ್ನು ಇಂದು (ಮೇ 21 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಮಾಡಿದೆ. ಈ ಮೊಬೈಲ್‌ ಆಕ್ಟಾ ಕೋರ್ ಯುನಿಸಾಕ್ ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಹೊಂದಿರುವ ಜೊತೆಗೆ 6000 mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಮೊಬೈಲ್‌ ಕಾಸ್ಮಿಕ್ ಲ್ಯಾವೆಂಡರ್, ನಾರ್ಡಿಕ್ ಬ್ಲೂ ಮತ್ತು ಪೀಚ್ ಪಿಂಕ್ ಕಲರ್‌ ಆಯ್ಕೆಗಳಲ್ಲಿ ಮಾರುಕಟ್ಟೆಗೆ ಎಂಟ್ರಿ ಪಡೆದಿದೆ. ಹಾಗಾದರೆ ಹೆಚ್‌ಎಮ್‌ಡಿ ವೈಬ್‌ 2 5G ಸ್ಮಾರ್ಟ್‌ಫೋನ್‌ನ ಬೆಲೆ, ಮಾರಾಟ, ಫೀಚರ್ಸ್‌ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಲಾಂಚ್‌ ಆಗಿಯೇ ಬಿಡ್ತು Oppo Find X9s ಸ್ಮಾರ್ಟ್‌ಫೋನ್‌! ಟ್ರಿಪಲ್‌ 50MP ಕ್ಯಾಮೆರಾ

HMD Vibe 2 5G ಮೊಬೈಲ್‌ ಬೆಲೆ ಮತ್ತು ಲಭ್ಯತೆ

ನೂತನ ಹೆಚ್‌ಎಮ್‌ಡಿ ವೈಬ್‌ 2 5G ಮೊಬೈಲ್‌ ಅಗ್ಗದ ಪ್ರೈಸ್‌ಟ್ಯಾಗ್‌ ಪಡೆದಿದ್ದು ಈ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್‌ನ ಆರಂಭಿಕ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 10,999 ರೂ.ಗಳು ಆಗಿದೆ. ಹಾಗೆಯೇ 512GB ವೇರಿಯಂಟ್‌ ಬೆಲೆ 11,999 ರೂ.ಗಳು ಆಗಿದೆ. ಅಂದಹಾಗೆ ಈ ಫೋನ್‌ ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಲಭ್ಯವಿದೆ. ಇನ್ನು ಈ ಮೊಬೈಲ್‌ ಕಾಸ್ಮಿಕ್ ಲ್ಯಾವೆಂಡರ್, ನಾರ್ಡಿಕ್ ಬ್ಲೂ ಮತ್ತು ಪೀಚ್ ಪಿಂಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

HMD Vibe 2 5G

ಹೆಚ್‌ಎಮ್‌ಡಿ ವೈಬ್‌ 2 5G ಫೀಚರ್ಸ್‌ ಹೀಗಿವೆ

ಹೆಚ್‌ಎಮ್‌ಡಿ ವೈಬ್‌ 2 5G ಮೊಬೈಲ್ 6.7 ಇಂಚಿನ HD+ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್‌ 720×1,600 ಪಿಕ್ಸೆಲ್‌ ರೆಸಲ್ಯೂಶನ್‌ ಒಳಗೊಂಡಿದೆ. ಈ ಮೊಬೈಲ್‌ ಆಕ್ಟಾ ಕೋರ್ ಯುನಿಸಾಕ್ ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM + 64GB ಹಾಗೂ 512GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ.

ಹೆಚ್‌ಎಮ್‌ಡಿ ವೈಬ್‌ 2 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಆಗಿದ್ದು, ಹಾಗೆಯೇ ಇದರ ಸೆಕೆಂಡರಿ ಬೇಸಿಕ್ ಸೆನ್ಸಾರ್‌ ಸೌಲಭ್ಯದಲ್ಲಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್‌ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 18W ಚಾರ್ಜಿಂಗ್‌ ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile