ನಾಳೆ ಮತ್ತೆ HMD Vibe 2 5G ಸ್ಮಾರ್ಟ್‌ಫೋನ್‌ ಖರೀದಿಗೆ ಲಭ್ಯ! ಫೀಚರ್ಸ್‌ ಹಾಗೂ ಬೆಲೆ ನೋಡಿ

HIGHLIGHTS

ನಾಳೆ (ಜೂನ್‌ 16 ರಂದು) ಹೆಚ್‌ಎಮ್‌ಡಿ ವೈಬ್‌ 2 5G ಸೇಲ್‌

ಹೆಚ್‌ಎಮ್‌ಡಿ ವೈಬ್‌ 2 5G ಫೋನ್‌ 50MP ಕ್ಯಾಮೆರಾ ಸೌಲಭ್ಯ ಪಡೆದಿದೆ

ಹೆಚ್‌ಎಮ್‌ಡಿ ವೈಬ್‌ 2 5G ಮೊಬೈಲ್‌ 6,000mAh ಬ್ಯಾಟರಿ ಒಳಗೊಂಡಿದೆ

ಜನಪ್ರಿಯ HMD ಮೊಬೈಲ್‌ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಹೊಸ HMD Vibe 2 5G ಮೊಬೈಲ್‌ ನಾಳೆ (ಜೂನ್‌ 16 ರಂದು) ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಮೂಲಕ ಮತ್ತೊಮ್ಮೆ ಮಾರಾಟಕ್ಕೆ ಬರಲಿದೆ. ಈ ಬಜೆಟ್‌ ಬೆಲೆಯ ಮೊಬೈಲ್‌ ಆಕ್ಟಾ ಕೋರ್ ಯುನಿಸಾಕ್ ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಅಲ್ಲದೇ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರುವುದು ಹೈಲೈಟ್‌ ಸಂಗತಿಗಳಲ್ಲಿ ಒಂದಾಗಿದೆ. ಇನ್ನು ಈ ಮೊಬೈಲ್‌ ಕಾಸ್ಮಿಕ್ ಲ್ಯಾವೆಂಡರ್, ನಾರ್ಡಿಕ್ ಬ್ಲೂ ಮತ್ತು ಪೀಚ್ ಪಿಂಕ್ ಕಲರ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಹೆಚ್‌ಎಮ್‌ಡಿ ವೈಬ್‌ 2 5G ಸ್ಮಾರ್ಟ್‌ಫೋನ್‌ ಸೇಲ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Samsung Galaxy M17 5G ಮೊಬೈಲ್‌ ಈಗ ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ! 50MP ಕ್ಯಾಮೆರಾ ಸೌಲಭ್ಯ

ನಾಳೆ ಮತ್ತೆ HMD Vibe 2 5G ಮಾರಾಟ

ಹೊಸ ಹೆಚ್‌ಎಮ್‌ಡಿ ವೈಬ್‌ 2 5G ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ ಮೂಲಕ ಗಮನ ಸೆಳೆದಿದೆ. ಈ ಮೊಬೈಲ್‌ ನಾಳೆ (ಜೂನ್‌ 16 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಮತ್ತೆ ಸೇಲ್‌ ಪ್ರಾರಂಭ ಮಾಡಲಿದೆ. ಈ ಮೊಬೈಲ್‌ನ ಆರಂಭಿಕ 4GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 14,999 ರೂ.ಗಳು ಆಗಿದೆ. ಹಾಗೆಯೇ 6GB + 128GB ವೇರಿಯಂಟ್‌ ಬೆಲೆ 16,999 ರೂ.ಗಳು ಆಗಿದೆ. ಇನ್ನು ಈ ಮೊಬೈಲ್‌ ಕಾಸ್ಮಿಕ್ ಲ್ಯಾವೆಂಡರ್, ನಾರ್ಡಿಕ್ ಬ್ಲೂ ಮತ್ತು ಪೀಚ್ ಪಿಂಕ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

ಹೆಚ್‌ಎಮ್‌ಡಿ ವೈಬ್‌ 2 5G ಮೊಬೈಲ್‌ ಫೀಚರ್ಸ್‌

ಹೆಚ್‌ಎಮ್‌ಡಿ ವೈಬ್‌ 2 5G ಫೋನ್‌ 6.7 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್‌ 720×1,600 ಪಿಕ್ಸೆಲ್‌ ರೆಸಲ್ಯೂಶನ್‌ ಒಳಗೊಂಡಿದೆ. ಈ ಮೊಬೈಲ್‌ ಆಕ್ಟಾ ಕೋರ್ ಯುನಿಸಾಕ್ ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM + 64GB ಹಾಗೂ 512GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ.

ಹೆಚ್‌ಎಮ್‌ಡಿ ವೈಬ್‌ 2 5G ಮೊಬೈಲ್‌ ಡ್ಯುಯಲ್‌ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಆಗಿದ್ದು, ಹಾಗೆಯೇ ಇದರ ದ್ವಿತೀಯ ಬೇಸಿಕ್ ಸೆನ್ಸಾರ್‌ ಸೌಲಭ್ಯದಲ್ಲಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 18W ಚಾರ್ಜಿಂಗ್‌ ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :