HMD Vibe 2 Pro 5G ಮೊಬೈಲ್ ದರದಲ್ಲಿ ಭರ್ಜರಿ ಕಡಿತ; 6,000mAh ಬ್ಯಾಟರಿ ಸೌಲಭ್ಯ
ಫ್ಲಿಪ್‌ಕಾರ್ಟ್‌ನಲ್ಲಿ ಹೆಚ್‌ಎಮ್‌ಡಿ ವೈಬ್ 2 ಪ್ರೊ ಫೋನಿಗೆ ಬಿಗ್ ಆಫರ್
ಹೆಚ್‌ಎಮ್‌ಡಿ ವೈಬ್ 2 ಪ್ರೊ ಮೊಬೈಲ್ 6,000mAh ಬ್ಯಾಟರಿ ಸೌಲಭ್ಯ ಪಡೆದಿದೆ
ಹೆಚ್‌ಎಮ್‌ಡಿ ವೈಬ್ 2 ಪ್ರೊ ಸ್ಮಾರ್ಟ್‌ಫೋನ್ ಮೂರು ಆಕರ್ಷಕ ಕಲರ್‌ಗಳಲ್ಲಿ ಲಭ್ಯ
Flipkart Big Bang Diwali Sale: ಫ್ಲಿಪ್‌ಕಾರ್ಟ್ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಹೆಚ್‌ಎಮ್‌ಡಿ ಕಂಪನಿಯ HMD Vibe 2 Pro 5G ಸ್ಮಾರ್ಟ್‌ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಹೆಚ್‌ಎಮ್‌ಡಿ ವೈಬ್ 2 ಪ್ರೊ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
HMD Vibe 2 Pro 5G ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ
ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಹೆಚ್‌ಎಮ್‌ಡಿ ವೈಬ್ 2 ಪ್ರೊ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 29,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್‌ಗಳ ಮೂಲಕ 16,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಸಿಲ್ವರ್ ಮಿಸ್ಟ್, ಸಿಲ್ವರ್ ಮಿಸ್ಟ್ ಮತ್ತು ಕಾಸ್ಮಿಕ್ ಪರ್ಪಲ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ಹೆಚ್‌ಎಮ್‌ಡಿ ವೈಬ್ 2 ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್
ಹೆಚ್‌ಎಮ್‌ಡಿ ವೈಬ್ 2 ಪ್ರೊ ಮೊಬೈಲ್ 6.78 ಇಂಚಿನ IPS LCD, FHD+ ಡಿಸ್‌ಪ್ಲೇ ಪಡೆದಿದೆ. ಇದರ ಸ್ಕ್ರೀನ್ 1080 x 2460 ಪಿಕ್ಸೆಲ್ ರೆಸಲ್ಯೂಶನ್ ಒಳಗೊಂಡಿದೆ. ಅಲ್ಲದೇ ಇದು 120Hz ರಿಫ್ರೆಶ್ ರೇಟ್ ಜೊತೆಗೆ 800 nits ಬ್ರೈಟ್‌ನೆಸ್ ಸಪೋರ್ಟ್ ಒಳಗೊಂಡಿದೆ. ಹಾಗೆಯೇ ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ 6GB RAM + 128GB ಹಾಗೂ 8GB RAM + 128GB ಸ್ಟೋರೇಜ್ ಆಯ್ಕೆ ಪಡೆದಿದೆ.
ಹಾಗೆಯೇ ಹೆಚ್‌ಎಮ್‌ಡಿ ವೈಬ್ 2 ಪ್ರೊ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾವು 64MP ಸೆನ್ಸಾರ್ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 13MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದುಕೊಂಡಿದ್ದು, 33W ಫಾಸ್ಟ್ ಚಾರ್ಜ್ ಚಾರ್ಜಿಂಗ್ ಬೆಂಬಲ ಹೊಂದಿದೆ.