ಭಾರತದಲ್ಲಿ Infinix GT 50 Pro ಬಿಡುಗಡೆ; 144Hz ರಿಫ್ರೆಶ್ ರೇಟ್‌, 12GB RAM ಹೈಲೈಟ್ಸ್‌

HIGHLIGHTS

ಭಾರತದಲ್ಲಿ ಇನ್ಫಿನಿಕ್ಸ್‌ GT 50 ಪ್ರೊ ಮೊಬೈಲ್‌ ಬಿಡುಗಡೆ

ಇನ್ಫಿನಿಕ್ಸ್‌ ಸಂಸ್ಥೆಯ ಈ ಫೋನ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ

ಇನ್ಫಿನಿಕ್ಸ್‌ನ ಈ ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 8400 Ultimate ಪ್ರೊಸೆಸರ್‌ ಹೊಂದಿದೆ

ಇನ್ಫಿನಿಕ್ಸ್‌ ಮೊಬೈಲ್‌ ಸಂಸ್ಥೆಯು ಹೊಸದಾಗಿ Infinix GT 50 Pro ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್‌ MediaTek Dimensity 8400 Ultimate ಚಿಪ್‌ಸೆಟ್ ಪ್ರೊಸೆಸರ್‌ ಬೆಂಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ AMOLED ಡಿಸ್‌ಪ್ಲೇ ಹಾಗೂ 6,500mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಬ್ಲ್ಯಾಕ್ ಅಬಿಸ್ ಹಾಗೂ ರೆಡ್ ಬ್ಲೇಜ್ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶ ಪಡೆದಿದೆ. ಹಾಗಾದರೇ ಇನ್ಫಿನಿಕ್ಸ್‌ GT 50 ಪ್ರೊ ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Airtel ಗ್ರಾಹಕರಿಗೆ ಗುಡ್‌ನ್ಯೂಸ್! ಯೂಟ್ಯೂಬ್ ಜೊತೆ ಹೊಸ ಪಾಲುದಾರಿಕೆ; ಆಕರ್ಷಕ ಪ್ರಯೋಜನ

Infinix GT 50 Pro ಬೆಲೆ ಹಾಗೂ ಲಭ್ಯತೆ

ಇನ್ಫಿನಿಕ್ಸ್‌ ಮೊಬೈಲ್‌ ಸಂಸ್ಥೆಯ ಇನ್ಫಿನಿಕ್ಸ್‌ GT 50 ಪ್ರೊ ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 12GB RAM + 256GB ಸ್ಟೋರೇಜ್‌ ವೇರಿಯಂಟ್‌ 69,999 ರೂ.ಗಳ ಬೆಲೆಯನ್ನು ಹೊಂದಿದೆ. ಈ ಫೋನ್‌ ಬ್ಲ್ಯಾಕ್ ಅಬಿಸ್ ಹಾಗೂ ರೆಡ್ ಬ್ಲೇಜ್ ಕಲರ್‌ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಗ್ರಾಹಕರು ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮೂಲಕ ಖರೀದಿಸಬಹುದು.

Infinix GT 50 Pro

ಇನ್ಫಿನಿಕ್ಸ್‌ GT 50 ಪ್ರೊ ಮೊಬೈಲ್‌ ಫೀಚರ್ಸ್‌

ಇನ್ಫಿನಿಕ್ಸ್‌ GT 50 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ LTPS AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 144Hz ರಿಫ್ರೆಶ್ ರೇಟ್‌ ಜೊತೆಗೆ 4,500 ನಿಟ್ಸ್ ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಇದರ ಸ್ಕ್ರೀನ್‌ 1,208 x 2,644 ಪಿಕ್ಸೆಲ್‌ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ MediaTek Dimensity 8400 Ultimate ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಇದು ಆಂಡ್ರಾಯ್ಡ್‌ 16 ಆಧಾರಿತ XOS 16 ಆಪರೇಟಿಂಗ್ ಸಿಸ್ಟಮ್‌ ಸಪೋರ್ಟ್ ಪಡೆದಿದೆ.

ಹಾಗೆಯೇ ಇನ್ಫಿನಿಕ್ಸ್‌ GT 50 ಪ್ರೊ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ (OIS) ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 13MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 6,500mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 45W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 30W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :