6,500mAh ಬ್ಯಾಟರಿ ಇರುವ Infinix Note 60 Pro ಮೊಬೈಲ್‌ ಬೆಲೆಯಲ್ಲಿ ಆಕರ್ಷಕ ಇಳಿಕೆ!

HIGHLIGHTS

ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಮೊಬೈಲ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ

ಈ ಸ್ಮಾರ್ಟ್‌ಫೋನ್‌ 6,500mAh ಬ್ಯಾಟರಿ ಸಪೋರ್ಟ್‌ ಪಡೆದುಕೊಂಡಿದೆ

ಇನ್ಫಿನಿಕ್ಸ್‌ನ ಈ ಫೋನ್ ಸ್ನಾಪ್‌ಡ್ರಾಗನ್ 7s ಜೆನ್ 4 ಪ್ರೊಸೆಸರ್‌ ಒಳಗೊಂಡಿದೆ

6,500mAh ಬ್ಯಾಟರಿ ಇರುವ Infinix Note 60 Pro ಮೊಬೈಲ್‌ ಬೆಲೆಯಲ್ಲಿ ಆಕರ್ಷಕ ಇಳಿಕೆ!

ಮೊಬೈಲ್‌ ಮಾರುಕಟ್ಟೆಯಲ್ಲಿ ಇನ್ಫಿನಿಕ್ಸ್‌ ಕಂಪನಿಯು ಬಜೆಟ್‌ ದರದ ಫೋನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಸಂಸ್ಥೆಯ ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳ ಮೂಲಕ ಮಾರುಕಟ್ಟೆಯ ಗಮನ ಸೆಳೆದಿದೆ. ಸದ್ಯ ಕಂಪನಿಯ Infinix Note 60 Pro ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್ ಬೆಲೆ ಇಳಿಕೆ ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ ಅಂದಹಾಗೆ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಲಾಂಚ್‌ ಆಗಿಯೇ ಬಿಡ್ತು Oppo Find X9s ಸ್ಮಾರ್ಟ್‌ಫೋನ್‌! ಟ್ರಿಪಲ್‌ 50MP ಕ್ಯಾಮೆರಾ

Infinix Note 60 Pro ಬೆಲೆಯಲ್ಲಿ ಆಕರ್ಷಕ ಇಳಿಕೆ

ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಮೊಬೈಲ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್‌ 8GB RAM + 256GB ವೇರಿಯಂಟ್‌ ಬೆಲೆ 44,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 34,999 ರೂ.ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಇದರೊಂದಿಗೆ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಗ್ರಾಹಕರು ಈ ಮೊಬೈಲ್‌ ಅನ್ನು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Infinix Note 60 Pro

ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಫೀಚರ್ಸ್‌

ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಮೊಬೈಲ್‌ 6.78 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 144Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 4500 nits ಪೀಕ್‌ ಬ್ರೈಟ್ನೆಸ್‌ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು IP64 ರೇಟಿಂಗ ಸೌಲಭ್ಯ ಹಾಗೂ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಪಡೆದುಕೊಂಡಿದೆ.

ಹಾಗೆಯೇ ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಮದಿದೆ. ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ದ್ವಿತೀಯ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್ ರಚನೆ ಪಡೆದುಕೊಂಡಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 13 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile