ಇಂದು Infinix Note Pro 60 Limited Edition ಮೊಬೈಲ್‌ ಸೇಲ್‌! ಸಖತ್‌ ಸ್ಟೈಲಿಶ್‌ ಲುಕ್

HIGHLIGHTS

ಇನ್ಫಿನಿಕ್ಸ್‌ನ ಈ ಸ್ಪೆಷಲ್‌ ಎಡಿಷನ್‌ ಸಖತ್ ಸ್ಟೈಲಿಶ್‌ ಲುಕ್‌ನಲ್ಲಿ ಇದೆ.

ಇನ್ಫಿನಿಕ್ಸ್‌ನ ಈ ಮೊಬೈಲ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಪ್ರೊಸೆಸರ್‌ ಹೊಂದಿದೆ.

ಇನ್ಫಿನಿಕ್ಸ್‌ನ ಈ ಸ್ಮಾರ್ಟ್‌ಫೋನ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ.

ಈಗಾಗಲೇ ಮೊಬೈಲ್‌ ಮಾರುಕಟ್ಟೆಯಲ್ಲಿ ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಸ್ಮಾರ್ಟ್‌ಫೋನ್‌ ಗ್ರಾಹಕರ ಗಮನ ಸೆಳೆದಿದೆ. ಇದೀಗ ಕಂಪನಿಯು ಹೊಸದಾಗಿ Infinix Note Pro 60 Limited Edition ಮೊಬೈಲ್‌ ಅನ್ನು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಮಾರಾಟ ಮಾಡಲು ಸಜ್ಜಾಗಿದೆ. ಈ ಸ್ಪೆಷಲ್‌ ಎಡಿಷನ್ ಫೋನ್‌ ಇಂದು (ಮೇ 22 ರಂದು) ಸಂಜೆ 6 ಗಂಟೆಗೆ ಫ್ಲಿಪ್‌ಕಾರ್ಟ್‌ ತಾಣದ ಮೂಲಕ ಸೇಲ್‌ ಪ್ರಾರಂಭ ಮಾಡಲಿದೆ. ಅಂದಹಾಗೆ ಈ ಮೊಬೈಲ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ ಅಂದಹಾಗೆ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಲಿಮಿಟೆಡ್ ಎಡಿಷನ್‌ ಸ್ಮಾರ್ಟ್‌ಫೋನ್‌ ಸೇಲ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಇರುವ Airtel ಟೆಲಿಕಾಂನ ಬೆಸ್ಟ್‌ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ!

Infinix Note Pro 60 Limited Edition ಸೇಲ್‌

ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಲಿಮಿಟೆಡ್ ಎಡಿಷನ್‌ ಫೋನ್‌ ಕಾಲ್‌ ಆಫ್‌ ಡ್ಯುಟಿ ಮೊಬೈಲ್‌ ಲುಕ್‌ನಲ್ಲಿ ಕಾಣಿಸಿಕೊಂಡಿದೆ. ಈ ಫೋನ್‌ ಇಂದು (ಮೇ 22 ರಂದು) ಸಂಜೆ 6 ಗಂಟೆಗೆ ಫ್ಲಿಪ್‌ಕಾರ್ಟ್‌ ತಾಣದ ಮೂಲಕ ಸೇಲ್‌ ಪ್ರಾರಂಭ ಮಾಡಲಿದೆ. ಈ ಸ್ಮಾರ್ಟ್‌ಫೋನ್‌ 8GB RAM + 128GB ವೇರಿಯಂಟ್‌ ಬೆಲೆ 31,999 ರೂ.ಗಳು ಆಗಿದೆ. ಹಾಗೆಯೇ 8GB RAM + 256GB ವೇರಿಯಂಟ್‌ ಬೆಲೆಯು 34,999 ರೂ.ಗಳ ದರದಲ್ಲಿ ಖರೀದಿಗೆ ಲಭ್ಯ.

ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಫೀಚರ್ಸ್‌

ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಮೊಬೈಲ್‌ 6.78 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 144Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 4500 nits ಪೀಕ್‌ ಬ್ರೈಟ್ನೆಸ್‌ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು IP64 ರೇಟಿಂಗ ಸೌಲಭ್ಯ ಹಾಗೂ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಪಡೆದುಕೊಂಡಿದೆ.

ಹಾಗೆಯೇ ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಮದಿದೆ. ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ದ್ವಿತೀಯ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್ ರಚನೆ ಪಡೆದುಕೊಂಡಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 13 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :