ಇಂದಿನಿಂದ Infinix Note 60 Pro ಮೊಬೈಲ್‌ ಖರೀದಿಗೆ ಲಭ್ಯ! 90W ಫಾಸ್ಟ್ ಚಾರ್ಜಿಂಗ್‌ ಸೌಲಭ್ಯ

HIGHLIGHTS

ಇಂದು (ಏಪ್ರಿಲ್‌ 20 ರಿಂದ) ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಸೇಲ್‌

ಈ ನೂತನ ಸ್ಮಾರ್ಟ್‌ಫೋನ್‌ 90W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಹೊಂದಿದೆ

ಈ ಹೊಸ ಮೊಬೈಲ್‌ 50 ಮೆಗಾಪಿಕ್ಸೆಲ್ ಸೆನ್ಸಾರ್‌ನ ಕ್ಯಾಮೆರಾ ಆಯ್ಕೆ ಪಡೆದಿದೆ

ಇಂದಿನಿಂದ Infinix Note 60 Pro ಮೊಬೈಲ್‌ ಖರೀದಿಗೆ ಲಭ್ಯ! 90W ಫಾಸ್ಟ್ ಚಾರ್ಜಿಂಗ್‌ ಸೌಲಭ್ಯ

ಇನ್ಫಿನಿಕ್ಸ್‌ ಕಂಪನಿಯ Infinix Note 60 Pro ಸ್ಮಾರ್ಟ್‌ಫೋನ್ ಮೀಡ್‌ರೇಂಜ್‌ ಬೆಲೆಯ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್‌ ಇಂದು (ಏಪ್ರಿಲ್‌ 20 ರಂದು) ದೇಶೀಯ ಮಾರುಕಟ್ಟೆಯಲ್ಲಿ ಸೇಲ್‌ ಶುರು ಮಾಡಿದೆ. ಈ ನೂತನ ಮೊಬೈಲ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಒಳಗೊಂಡಿರುವ ಜೊತೆಗೆ 6,500mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ನ ಡಿಸ್‌ಪ್ಲೇಯು 144Hz ವರೆಗೆ ರಿಫ್ರೆಶ್ ರೇಟ್‌ ಹೊಂದಿದೆ. ಅಲ್ಲದೇ ಈ ಫೋನ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗಾದರೇ ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಮೊಬೈಲ್‌ನ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ನಾಳೆ Realme Narzo 100 Lite 5G ಮಾರಾಟ ಪ್ರಾರಂಭ! ಅಗ್ಗದ ಬೆಲೆಯಲ್ಲಿ ಲಭ್ಯ

Infinix Note 60 Pro ಸೇಲ್‌ ಡಿಟೇಲ್ಸ್‌

ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಸ್ಮಾರ್ಟ್‌ಫೋನ್‌ ಇಂದು (ಏಪ್ರಿಲ್‌ 20 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಪ್ರಾರಂಭ ಮಾಡಿದೆ. ಈ ಮೊಬೈಲ್‌ನ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 31,999 ರೂ.ಗಳು ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 34,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇದು ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯ.

Infinix Note 60 Pro

ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಫೀಚರ್ಸ್‌

ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಮೊಬೈಲ್‌ 6.78 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 144Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 4500 nits ಪೀಕ್‌ ಬ್ರೈಟ್ನೆಸ್‌ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು IP64 ರೇಟಿಂಗ ಸೌಲಭ್ಯ ಹಾಗೂ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಒಳಗೊಂಡಿದೆ.

ಹಾಗೆಯೇ ಇನ್ಫಿನಿಕ್ಸ್‌ ನೋಟ್‌ 60 ಪ್ರೊ ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 13 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 6500mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo