ಇಂದು ಭಾರತದಲ್ಲಿ Infinix Note Edge 5G ಬಿಡುಗಡೆ! ನಿರೀಕ್ಷಿತ ಫೀಚರ್ಸ್‌ ಹಾಗೂ ಬೆಲೆ ನೋಡಿ

HIGHLIGHTS

Infinix Note Edge 5G ಮೊಬೈಲ್‌ ಮೂರು ಕಲರ್‌ ಆಯ್ಕೆ ಒಳಗೊಂಡಿರಲಿದೆ

Infinix Note Edge 5G ಫೋನ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯ ಪಡೆದಿರಲಿದೆ

Infinix Note Edge 5G ಮೊಬೈಲ್‌ MediaTek ಪ್ರೊಸೆಸರ್‌ ಹೊಂದಿರಲಿದೆ

ಇಂದು ಭಾರತದಲ್ಲಿ Infinix Note Edge 5G ಬಿಡುಗಡೆ! ನಿರೀಕ್ಷಿತ ಫೀಚರ್ಸ್‌ ಹಾಗೂ ಬೆಲೆ ನೋಡಿ

ಜನಪ್ರಿಯ Infinix ಮೊಬೈಲ್‌ ಕಂಪನಿಯು ತನ್ನ ಬಹುನಿರೀಕ್ಷಿತ Infinix Note Edge 5G ಮೊಬೈಲ್‌ ಅನ್ನು ಇಂದು (ಫೆ 18 ಎಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಮಾಡಲಿದೆ. ಈ ಮೊಬೈಲ್‌ ಬಿಡುಗಡೆ ಕುರಿತಾಗಿ ಈಗಾಗಲೇ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಈಗ ತೆರೆಯಲಾಗಿದ್ದು, ಗ್ರಾಹಕರ ಕುತೂಹಲದಿಂದ ನೋಡುವಂತಾಗಿದೆ. ಅಂದಹಾಗೆ ಈ ಮೊಬೈಲ್‌ MediaTek ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿರುವುದು ಪಕ್ಕಾ ಎನ್ನಲಾಗಿದೆ ಹಾಗೆಯೇ ಈ ಫೋನ್‌ ಭಾರತದಲ್ಲಿ ಮೂರು ಭಿನ್ನ ಕಲರ್‌ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಡುವ ಸಾಧ್ಯತೆಗಳು ಇವೆ ಎಂದು ಹೇಳಲಾಗಿದೆ. ಇನ್ನುಳಿದಂತೆ Infinix Note Edge 5G ಮೊಬೈಲ್‌ನ ನಿರೀಕ್ಷಿತ ಫೀಚರ್ಸ್‌ ಹಾಗೂ ಬೆಲೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಶೀಘ್ರದಲ್ಲೇ Vivo X300 FE ಲಾಂಚ್! 50MP ಕ್ಯಾಮೆರಾ, 12GB RAM ಜೊತೆಗೆ ಬಿಗ್‌ ಬ್ಯಾಟರಿ ಸಾಧ್ಯತೆ

Infinix Note Edge 5G ನಿರೀಕ್ಷಿತ ಬೆಲೆ ಹಾಗೂ ಲಭ್ಯತೆ

Infinix Note Edge 5G ಮೊಬೈಲ್‌ ಇಂದು (ಫೆಬ್ರವರಿ 18 ರಂದು) ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಫ್ಲಿಪ್‌ಕಾರ್ಟ್ ಇ-ಕಾಮರ್ಸ್ ತಾಣದಲ್ಲಿ Infinix Note Edge 5G ಮೊಬೈಲ್‌ ಸೇಲ್‌ ಪ್ರಾರಂಭಿಸಲಿದೆ. ಇನ್ನು ಬರಲಿರುವ ಈ ಹೊಸ ಮೊಬೈಲ್‌ ಸ್ಟೆಲ್ಲರ್ ಬ್ಲೂ, ಸಿಲ್ಕ್ ಗ್ರೀನ್ ಮತ್ತು ಲೂನಾರ್ ಟೈಟಾನಿಯಂ ಕಲರ್‌ಗಳ ಆಯ್ಕೆಯನ್ನು ಒಳಗೊಂಡಿರುವುದು ನಿಕ್ಕಿ ಆಗಿದೆ. ಇನ್ನು ಈ ಮೊಬೈಲ್‌ನ ಅಧಿಕೃತ ಬೆಲೆಯ ಮಾಹಿತಿ ಬಹಿರಂಗವಾಗಿಲ್ಲ. ಅದಾಗ್ಯೂ ಈ ಫೋನ್‌ ಬಜೆಟ್‌ ರೇಂಜ್‌ನಲ್ಲಿ ಲಗ್ಗೆ ಇಡಬಹುದು ಎನ್ನಲಾಗಿದೆ.

Infinix Note Edge

Infinix Note Edge 5G ನಿರೀಕ್ಷಿತ ಫೀಚರ್ಸ್‌ ಮಾಹಿತಿ

Infinix Note Edge 5G ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.78 ಇಂಚಿನ 1.5K 3D ಕರ್ವ್ಡ AMOLED ಡಿಸ್‌ಪ್ಲೇ ಅನ್ನು ಪಡೆದಿರಲಿದೆ. ಅಲ್ಲದೇ ಈ ಫೋನ್‌ ಸ್ಕ್ರೀನ್‌ 4,500 ನಿಟ್ಸ್ ಬ್ರೈಟ್ನೆಸ್‌ ಸಪೋರ್ಟ್‌ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಹೊಂದಿರಲಿದೆ. ಹಾಗೆಯೇ ಈ ನೂತನ ಮೊಬೈಲ್‌ MediaTek Dimensity 7100 ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಪಡೆದಿರುವ ಸಾಧ್ಯತೆಗಳು ಅಧಿಕವಾಗಿವೆ. ಇದಕ್ಕೆ ಪೂರಕವಾಗಿ 128GB ಮತ್ತು 256GB ಸ್ಟೋರೇಜ್‌ ಆಯ್ಕೆಗಳು ನೀಡಬಹುದು ಎಂದು ನಿರೀಕ್ಷಿಸಲಾಗಿದೆ.

ಮಾರುಕಟ್ಟೆಗೆ ಎಂಟ್ರಿ ಕೊಡಲಿರುವ Infinix Note Edge 5G ಮೊಬೈಲ್‌ 45W ವೈರ್ಡ್ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಜೊತೆಗೆ 6,500mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯದಲ್ಲಿ ಮಾರುಕಟ್ಟೆ ಪ್ರವೇಶಿಸಬಹುದು. ಅಲ್ಲದೇ ಹಿಂಭಾಗದಲ್ಲಿ ಡ್ಯುಯಲ್ ಹಿಂಬದಿಯ ಕ್ಯಾಮೆರಾ ರಚನೆ ಪಡೆದಿರಲಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಬಹುದು. ಅದೇ ರೀತಿ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 13 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿರಬಹುದು. ಇದರೊಂದಿಗೆ ಈ ಫೋನ್‌ JBL ಟ್ಯೂನ್ಡ್ ಡ್ಯುಯಲ್ ಸ್ಪೀಕರ್ ಸೆಟ್‌ಅಪ್‌ ಪಡೆದಿರುವ ಸಾಧ್ಯತೆಗಳು ಹೆಚ್ಚಿವೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP65 ರೇಟಿಂಗ್ ಒಳಗೊಂಡಿರಲಿದೆ ಎನ್ನಲಾಗಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo