iPhone 15 ಖರೀದಿಸುವ ಗ್ರಾಹಕರಿಗೆ ಗುಡ್‌ನ್ಯೂಸ್! ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಭಾರೀ ಡಿಸ್ಕೌಂಟ್
ಆಪಲ್ ಕಂಪನಿಯ Apple iPhone 15 ಮೊಬೈಲ್ ಆಕರ್ಷಕ ಫಿಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ Apple A16 Bionic ಚಿಪ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 48MP ಮುಖ್ಯ ಕ್ಯಾಮೆರಾ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಬ್ಲ್ಯಾಕ್, ಬ್ಲೂ, ಪಿಂಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಆಪಲ್ ಐಫೋನ್ 15 ಮೊಬೈಲ್‌ಗೆ ಲಭ್ಯವಿರುವ ಆಫರ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Vi ಟೆಲಿಕಾಂನ ಈ ಅಗ್ಗದ ಪ್ಲಾನ್‌ನಲ್ಲಿ ಅನಿಯಮಿತ ಡೇಟಾ ಜೊತೆಗೆ ಆಕರ್ಷಿಕ ವ್ಯಾಲಿಡಿಟಿ
Apple iPhone 15 ಬೆಲೆಯಲ್ಲಿ ಬಿಗ್ ಆಫರ್
ಸ್ಟೈಲಿಶ್ ಲುಕ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ಐಫೋನ್ 15 ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 128GB ಸ್ಟೋರೇಜ್ ವೇರಿಯಂಟ್ ಬೆಲೆ 74,900 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ 63,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಸಿಗಲಿದೆ ಎಂದು ಕಾಣಿಸಿಕೊಂಡಿದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್ ಬ್ಲ್ಯಾಕ್, ಬ್ಲೂ, ಪಿಂಕ್ ಸೇರಿ ಇನ್ನು ಕೆಲವು ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ಐಫೋನ್ 15 ಮೊಬೈಲ್ ಫೀಚರ್ಸ್
ಐಫೋನ್ 15 ಸ್ಮಾರ್ಟ್‌ಫೋನ್ 60Hz ರಿಫ್ರೆಶ್ ರೇಟ್ ಅನ್ನು ಹೊಂದಿರುವ 6.1 ಇಂಚಿನ OLED ಸ್ಕ್ರೀನ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಮೊಬೈಲ್ 2,000 ನಿಟ್ಸ್‌ವರೆಗಿನ ಬ್ರೈಟ್‌ನೆಸ್ ಮಟ್ಟವನ್ನು ಹೊಂದಿದ್ದು, ಪ್ರಖರ ಸೂರ್ಯನ ಬೆಳಕಿನಲ್ಲಿಯೂ ಸುಗಮವಾದ ಪರದೆಯ ಕಾರ್ಯಕ್ಷಮತೆಯನ್ನು ನೀಡುತ್ತದೆ. ಇದರ ಜೊತೆಗೆ ಐಫೋನ್ 15ಯು Apple A16 Bionic ಚಿಪ್‌ನೊಂದಿಗೆ ಕೆಲಸ ಮಾಡುತ್ತದೆ ಮತ್ತು ಇದರಲ್ಲಿ 26 ಗಂಟೆಗಳವರೆಗೆ ವೀಡಿಯೊಗಳನ್ನು ವೀಕ್ಷಿಸಬಹುದು.
ಹಾಗೆಯೇ ಐಫೋನ್ 15 ಮೊಬೈಲ್ ಕ್ಯಾಮೆರಾ ವಿಷಯಕ್ಕೆ ಬಂದರೆ ಈ ಫೋನ್ 48MP ಮುಖ್ಯ ಕ್ಯಾಮೆರಾ, 12MP ಅಲ್ಟ್ರಾ-ವೈಡ್ ಕ್ಯಾಮೆರಾ ಮತ್ತು 12MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹೆಚ್ಚುವರಿಯಾಗಿ, ಈ ಮೊಬೈಲ್ IP68 ರೇಟಿಂಗ್ ಅನ್ನು ಹೊಂದಿದ್ದು, ನೀರು ಮತ್ತು ಧೂಳಿನಿಂದ ರಕ್ಷಣೆ ಪಡೆಯುವ ಸಾಮರ್ಥ್ಯವನ್ನು ಹೊಂದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
