iPhone 16 ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ; ಈ ಅವಕಾಶ ಮಿಸ್ ಮಾಡ್ಕೋಬೇಡಿ!
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ಆಯ್ದ ಸ್ಮಾರ್ಟ್ಫೋನ್ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಿದೆ. ಆ ಪೈಕಿ iPhone 16 ಸ್ಮಾರ್ಟ್ಫೋನ್ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ iOS 18 ಆಪರೇಟಿಂಗ್ ಸಿಸ್ಟಮ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 48MP ಮುಖ್ಯ ಕ್ಯಾಮೆರಾ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ಐಫೋನ್ 16 ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
iPhone 16 ಈಗ ಡಿಸ್ಕೌಂಟ್ನಲ್ಲಿ ಲಭ್ಯ
ಫ್ಲ್ಯಾಗ್ಶಿಪ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಐಫೋನ್ 16 ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 4GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 39,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 20,785 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಬ್ಲ್ಯಾಕ್, ಪಿಂಕ್, ಟೇಲ್, ಅಲ್ಟ್ರಾ ಮರಿನಾ ಹಾಗೂ ವೈಟ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ಐಫೋನ್ 16 ಮೊಬೈಲ್ನ ಪ್ರಮುಖ ಫೀಚರ್ಸ್
ಐಫೋನ್ 16 ಮೊಬೈಲ್ ಸಂಸ್ಥೆಯ A18 ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದ್ದು ಇದು ಆಪಲ್ನ ಇಂಟೆಲಿಜೆನ್ಸ್ ಫೀಚರ್ಸ್ಗಳ ಸಂಪೂರ್ಣ ಸೂಟ್ ಅನ್ನು ಸಪೋರ್ಟ್ ಮಾಡುತ್ತದೆ. ಈ ಫೋನ್ 6.1 ಇಂಚಿನ ಸೂಪರ್ ರೆಟಿನಾ XDR OLED ಡಿಸ್ಪ್ಲೇ ಅನ್ನು ಹೊಂದಿದೆ. ಫೋಟೋಗ್ರಫಿಗಾಗಿ ಇದು 12MP ಅಲ್ಟ್ರಾವೈಡ್ ಲೆನ್ಸ್ ಜೊತೆಗೆ ಜೋಡಿಸಲಾದ 48MP ಮುಖ್ಯ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿರುವ ಜೊತೆಗೆ 12MP ಅಲ್ಟ್ರಾ-ವೈಡ್ ಸೆನ್ಸಾರ್ ಕ್ಯಾಮೆರಾ ಸಹ ಇದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 12MP ಕ್ಯಾಮೆರಾ ರಚನೆ ಪಡೆದುಕೊಂಡಿದೆ.
iPhone 16 ಮೊಬೈಲ್ iOS 18 ಆಪರೇಟಿಂಗ್ ಸಿಸ್ಟಮ್ ಅನ್ನು ಪಡೆದಿದೆ. ಇದರೊಂದಿಗೆ 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಆಯ್ಕೆಗಳನ್ನು ಪಡೆದುಕೊಂಡಿದೆ. ಅಲ್ಲದೇ Face ID, Emergency SOS ಹಾಗೂ Find My via satellite ನಂತಹ ಅಗತ್ಯ ಫೀಚರ್ಸ್ಗಳನ್ನು ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್ IP68 ರೇಟಿಂಗ್ ಅನ್ನು ಪಡೆದಿದ್ದು ಇದು ಬ್ಲ್ಯಾಕ್, ಪಿಂಕ್, ಟೇಲ್, ವೈಟ್ ಹಾಗೂ ಅಲ್ಟ್ರಾ ಮರಿನಾ ಕಲರ್ ಆಯ್ಕೆಗಳಲ್ಲಿ ಲಭ್ಯ ಇದೆ.