ಬಿಗ್ ಆಫರ್‌ನಲ್ಲಿ iPhone 17 ಖರೀದಿಸಲು ಇದು ಸಕಾಲ! 256GB ಸ್ಟೋರೇಜ್‌

HIGHLIGHTS

ಐಫೋನ್‌ 17 ಫೋನಿಗೆ ವಿಜಯಾ ಸೇಲ್ಸ್‌ನಲ್ಲಿ ಬಿಗ್ ಆಫರ್‌

ಈ ಐಫೋನ್‌ A19 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದುಕೊಂಡಿದೆ

ಐಫೋನ್‌ 17 ಮೊಬೈಲ್‌ 48MP ಪ್ರಾಥಮಿಕ ಕ್ಯಾಮೆರಾ ಸೌಲಭ್ಯ ಹೊಂದಿದೆ

ಇತ್ತೀಚಿನ ಹೊಸ ಐಫೋನ್‌ ಖರೀದಿ ಮಾಡಲು ಯೋಚಿಸಿರುವ ಗ್ರಾಹಕರೇ ಇಲ್ಲಿ ಗಮನಿಸಿ. ಪ್ರಸ್ತುತ ವಿಜಯಾ ಸೇಲ್ಸ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಆಪಲ್‌ iPhone 17 ಮೊಬೈಲ್‌ ಬೊಂಬಾಟ್‌ ಬೆಲೆ ಇಳಿಕೆ ದರದಲ್ಲಿ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಆಪಲ್‌ ಸಂಸ್ಥೆಯ ಈ ಮೊಬೈಲ್‌ A19 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ LTPO ಪ್ಯಾನೆಲ್‌ ಜೊತೆಗೆ ಆಲ್ವೇಸ್ ಆನ್ ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗಾದರೆ ವಿಜಯಾ ಸೇಲ್ಸ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಐಫೋನ್‌ 17 ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Jio 195 ರೂ.ಗಳ ಯೋಜನೆಯಲ್ಲಿ ಡೇಟಾ ಸೌಲಭ್ಯದ ಜೊತೆಗೆ 30 ದಿನಗಳ ವ್ಯಾಲಿಡಿಟಿ ಖಚಿತ!

iPhone 17 ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ

ದೈತ್ಯ ಐಫೋನ್‌ 17 ಮೊಬೈಲ್‌ ಆಕರ್ಷಕ ಫೀಚರ್ಸ್‌ ಮೂಲಕ ಗಮನ ಸೆಳೆದಿದೆ. ಪ್ರಸ್ತುತ ವಿಜಯಾ ಸೇಲ್ಸ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 256GB ಸ್ಟೋರೇಜ್‌ ವೇರಿಯಂಟ್‌ ಬೆಲೆ 82,900 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 80,390 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ ಬ್ಲ್ಯಾಕ್‌, ಪಿಂಕ್, ಮಿಸ್ಟ್‌ ಬ್ಲೂ, ಲ್ಯಾವೆಂಡರಾ, ಸಾಗಾ ಹಾಗೂ ವೈಟ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ವಿಜಯಾ ಸೇಲ್ಸ್ ಇ ಕಾಮರ್ಸ್‌ ತಾಣದ ಮೂಲಕ ಖರೀದಿಸಬಹುದಾಗಿದೆ.

ಐಫೋನ್‌ 17 ಫೋನಿನ ಫೀಚರ್ಸ್‌

ಐಫೋನ್‌ 17 ಮೊಬೈಲ್‌ ಸಂಸ್ಥೆಯ A19 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದ್ದು ಇದು ಆಪಲ್‌ನ ಇಂಟೆಲಿಜೆನ್ಸ್ ಫೀಚರ್ಸ್‌ಗಳ ಸಂಪೂರ್ಣ ಸೂಟ್ ಅನ್ನು ಸಪೋರ್ಟ್ ಮಾಡುತ್ತದೆ. ಈ ಫೋನ್ 6.3 ಇಂಚಿನ ಸೂಪರ್ ರೆಟಿನಾ XDR OLED ಡಿಸ್‌ಪ್ಲೇ ಅನ್ನು ಪಡೆದಿದ್ದು, 3,000 nits ಬ್ರೈಟ್ನೆಸ್‌ ಜೊತೆಗೆ 120Hz ಪ್ರೊಮೋಷನ್ ಹೊಂದಿದೆ. ಫೋಟೋಗ್ರಫಿಗಾಗಿ ಈ ಫೋನ್ 48MP ವೈಡ್ ಆಂಗಲ್ ಪ್ರಾಥಮಿಕ ಕ್ಯಾಮೆರಾ ಜೊತೆಗೆ ದ್ವಿತೀಯ ಕ್ಯಾಮೆರಾ ಸಹ 48MP ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 18MP ಕ್ಯಾಮೆರಾ ರಚನೆ ಪಡೆದುಕೊಂಡಿದೆ.

ಈ ಫೋನ್‌ 256GB ಸ್ಟೋರೇಜ್‌ ಹಾಗೂ 512GB ಸ್ಟೋರೇಜ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗೆಯೇ ವೈ-ಫೈ 7, ಬ್ಲೂಟೂತ್ 6, ಮತ್ತು ಯುಎಸ್‌ಬಿ-ಸಿ ನಂತಹ ಕನೆಕ್ಟಿವಿಟಿ ಆಯ್ಕೆಗಳನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಆಪಲ್ ಇಂಟೆಲಿಜೆನ್ಸ್, ಆಕ್ಷನ್ ಬಟನ್, ಡೈನಾಮಿಕ್ ಐಲ್ಯಾಂಡ್ ಹಾಗೂ ಮುಂಭಾಗದಲ್ಲಿ ಸೆರಾಮಿಕ್ ಶೀಲ್ಡ್ 2 ಸೌಲಭ್ಯ ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :