ದೈತ್ಯ iPhone 17 Pro Max ಖರೀದಿಸಲು ಇದುವೇ ಬೆಸ್ಟ್ ಟೈಮ್! ಭರ್ಜರಿ ಡಿಸ್ಕೌಂಟ್ ಲಭ್ಯ
ವಿಜಯಾ ಸೇಲ್ಸ್‌ನಲ್ಲಿ ಐಫೋನ್ 17 ಪ್ರೊ ಮ್ಯಾಕ್ಸ್ ಭಾರೀ ಡಿಸ್ಕೌಂಟ್ ಪಡೆದಿದೆ
ಐಫೋನ್ 17 ಪ್ರೊ ಮ್ಯಾಕ್ಸ್ A19 Pro ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ
ಐಫೋನ್ 17 ಪ್ರೊ ಮ್ಯಾಕ್ಸ್ ಫೋನ್ ಟ್ರಿಪಲ್ ಫ್ಯೂಷನ್ ಕ್ಯಾಮೆರಾ ಸೆಟ್‌ಅಪ್ ಸೌಲಭ್ಯ ಪಡೆದುಕೊಂಡಿದೆ
iPhone 17 Pro Max: ಪ್ರಮುಖ ಟೆಕ್ ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್‌ಗಳ ಲಿಸ್ಟ್ Vijay Sales ವೆಬ್‌ಸೈಟ್ ಸಹ ಸೇರಿದೆ. ಈ ಟೆಕ್ ಇ ಕಾಮರ್ಸ್ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಆಫರ್ ನೀಡುತ್ತಾ ಗ್ರಾಹಕರ ಗಮನ ಸೆಳೆಯುತ್ತದೆ. ಸದ್ಯ ಐಫೋನ್ 17 ಪ್ರೊ ಮ್ಯಾಕ್ಸ್ ಫೋನಿಗೆ ಭರ್ಜರಿ ಡಿಸ್ಕೌಂಟ್ ಲಭ್ಯ ಮಾಡಿದ್ದು ಗ್ರಾಹಕರು ಖುಷಿಯಿಂದ ಈ ದೈತ್ಯ ಐಫೋನ್‌ನತ್ತ ನೋಡುವಂತಾಗಿದೆ. ಇದಲ್ಲದೇ ಬ್ಯಾಂಕ್ ಆಫರ್ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ಈ ಐಫೋನ್ 17 ಪ್ರೊ ಮ್ಯಾಕ್ಸ್ A19 Pro ಪ್ರೊಸೆಸರ್ ಸಪೋರ್ಟ್‌ನಲ್ಲಿ ಕೆಲಸ ಮಾಡಲಿದೆ. Vijay Sales ವೆಬ್‌ಸೈಟ್‌ನಲ್ಲಿ ಐಫೋನ್ 17 ಪ್ರೊ ಮ್ಯಾಕ್ಸ್ ಫೋನಿಗೆ ಲಭ್ಯ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
SurveyAlso Read : ಶೀಘ್ರದಲ್ಲೇ POCO X8 Pro ಸರಣಿ ಲಾಂಚ್! ಕುತೂಹಲ ಮೂಡಿಸಿದ ಲೀಕ್ ಫೀಚರ್ಸ್
iPhone 17 Pro Max ಮೊಬೈಲ್ ಬೆಲೆ ಇಳಿಕೆ
ಆಪಲ್ ಸಂಸ್ಥೆಯ ಐಫೋನ್ 17 ಪ್ರೊ ಮ್ಯಾಕ್ಸ್ ಮೊಬೈಲ್ ಪ್ರಸ್ತುತ Vijay Sales ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ರಿಯಾಯಿತಿ ಪಡೆದಿದೆ. ಈ ಮೊಬೈಲ್ 12GB RAM + 256GB ವೇರಿಯಂಟ್ ಬೆಲೆ 1,49,900 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಐಫೋನ್ 1,47,900 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಪಡೆಯಬಹುದಾಗಿದೆ. ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಐಫೋನ್ ಕಾಸ್ಮಿಕ್ ಆರೆಂಜ್, ಡೀಪ್ ಬ್ಲೂ ಮತ್ತು ಸಿಲ್ವರ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ಐಫೋನ್ 17 ಪ್ರೊ ಮ್ಯಾಕ್ಸ್ ಮೊಬೈಲ್ ಫೀಚರ್ಸ್ ಹೀಗಿವೆ
ಐಫೋನ್ 17 ಪ್ರೊ ಮ್ಯಾಕ್ಸ್ ಮೊಬೈಲ್ 6.9 ಇಂಚಿನ ಡೈನಾಮಿಕ್ ProMotion ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ ಇದು ಆಂಟಿ-ರಿಫ್ಲೆಕ್ಟಿವ್ ಲೇಪನವನ್ನು ಸಹ ಹೊಂದಿದೆ. ಇನ್ನು ಈ ಮೊಬೈಲ್ ಆಪಲ್‌ನ ಹೊಸ A19 ಪ್ರೊ ಚಿಪ್‌ಸೆಟ್ ಪ್ರೊಸೆಸರ್‌ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 256GB, 512GB ಹಾಗೂ 1TB ಸ್ಟೋರೇಜ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಹಾಗೆಯೇ ಐಫೋನ್ 17 ಪ್ರೊ ಮ್ಯಾಕ್ಸ್ ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ಫ್ಯೂಷನ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಅವುಗಳು ಕ್ರಮವಾಗಿ 48MP ಮುಖ್ಯ ಸೆನ್ಸಾರ್ ಕ್ಯಾಮೆರಾ, 48MP ಅಲ್ಟ್ರಾವೈಡ್ ಲೆನ್ಸ್ ಮತ್ತು 4x ಆಪ್ಟಿಕಲ್ ಜೂಮ್ ಬೆಂಬಲಿತ 48MP ಟೆಲಿಫೋಟೋ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 18MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 39 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಅನ್ನು ಒದಗಿಸುತ್ತದೆ ಎಂದು ಹೇಳಲಾಗುತ್ತದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile