ನಾಳೆ iQOO 15 Apex ಎಡಿಷನ್‌ ಮೊಬೈಲ್‌ ಮಾರಾಟ ಪ್ರಾರಂಭ! ಬೆಲೆ ಹಾಗೂ ಫೀಚರ್ಸ್‌ ನೋಡಿ

HIGHLIGHTS

ನಾಳೆ (ಏಪ್ರಿಲ್‌ 6 ರಂದು) ಭಾರತದಲ್ಲಿ ಐಕ್ಯೂ 15 ಅಪೆಕ್ಸ್‌ ಫಸ್ಟ್ ಸೇಲ್‌

ಐಕ್ಯೂ 15 ಅಪೆಕ್ಸ್‌ ಮೊಬೈಲ್‌ 7000mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ

ಐಕ್ಯೂನ ಈ ಮೊಬೈಲ್‌ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದೆ

ಲೀಡಿಂಗ್ ಬ್ರಾಂಡ್‌ಗಳ ಪೈಕಿ ಒಂದಾಗಿರುವ ಐಕ್ಯೂ ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ iQOO 15 Apex ಕಲರ್‌ ಎಡಿಷನ್‌ ಸ್ಮಾರ್ಟ್‌ಫೋನ್ ಫಸ್ಟ್‌ ಸೇಲ್‌ ನಾಳೆ (ಮಾರ್ಚ್‌ 6 ರಂದು) ಅಮೆಜಾನ್‌ ಇ ಕಾಮರ್ಸ್‌ ತಾಣದ ಮೂಲಕ ಪ್ರಾರಂಭ ಆಗಲಿದೆ. ಇನ್ನು ಈ ಮೊಬೈಲ್‌ ಸ್ನಾಪ್‌ಡ್ರಾಗನ್ 8 ಎಲೈಟ್ ಜನ್ 5 ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಒಳಗೊಂಡಿರುವ ಜೊತೆಗೆ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ. ಹಾಗೆಯೇ ಇದು 144Hz ವರೆಗಿನ ರಿಫ್ರೆಶ್ ರೇಟ್‌ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ ಎರಡು ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಹಾಗಾದರೇ iQOO 15 ಅಪೆಕ್ಸ್‌ ಕಲರ್‌ ಎಡಿಷನ್‌ ಸ್ಮಾರ್ಟ್‌ಫೋನ್ ಬೆಲೆ, ಫೀಚರ್ಸ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಸ್ಲಿಮ್‌ ಡಿಸೈನ್‌ ಹೊಂದಿರುವ iQOO Z10R ಮೊಬೈಲ್‌ ಖರೀದಿಗೆ ಇದು ಬೆಸ್ಟ್‌ ಟೈಮ್‌!

iQOO 15 Apex ಎಡಿಷನ್‌ ಸೇಲ್‌ ಮಾಹಿತಿ

ಐಕ್ಯೂ ಕಂಪನಿಯು ಹೊಸ iQOO 15 ಅಪೆಕ್ಸ್‌ ಕಲರ್‌ ಎಡಿಷನ್‌ ಆಕರ್ಷಕ ಲುಕ್‌ನಲ್ಲಿ ಗಮನ ಸೆಳೆಯುವಂತಿದೆ. ಈ ಸ್ಮಾರ್ಟ್‌ಫೋನ್ ಮೊದಲ ಮಾರಾಟ ನಾಳೆ (ಮಾರ್ಚ್‌ 6 ರಂದು) ಮಧ್ಯಾಹ್ನ 12 ಗಂಟೆಗೆ ಪ್ರಾರಂಭ ಆಗಲಿದೆ. ಇನ್ನು ಇದರ 12GB RAM + 256GB ಸ್ಟೋರೇಜ್‌ ವೇರಿಯಂಟ್‌ 72,999 ರೂ.ಗಳ ಬೆಲೆಯನ್ನು ಪಡೆದುಕೊಂಡಿದೆ. ಹಾಗೆಯೇ 16GB + 512GB ಸ್ಟೋರೇಜ್‌ ವೇರಿಯಂಟ್‌ 79,999 ರೂ.ಗಳ ಬೆಲೆಯನ್ನು ಪಡೆದುಕೊಂಡಿದೆ. ಆಸಕ್ತ ಗ್ರಾಹಕರು ಈ ಫೋನ್‌ ಅನ್ನು ಐಕ್ಯೂ ವೆಬ್‌ಸೈಟ್, ಅಮೆಜಾನ್, ವಿವೋ ಎಕ್ಸ್‌ಕ್ಲೂಸಿವ್ ಸ್ಟೋರ್‌ಗಳು, ರಿಲಯನ್ಸ್ ಡಿಜಿಟಲ್ ಸೇರಿದಂತೆ ಪ್ರಮುಖ ರೀಟೇಲ್‌ ಸ್ಟೋರ್‌ಗಳ ಮೂಲಕ ಖರೀದಿಸಬಹುದಾಗಿದೆ.

ಐಕ್ಯೂ 15 ಅಪೆಕ್ಸ್‌ ಫೀಚರ್ಸ್‌ ಮಾಹಿತಿ

ಹೊಸ ಐಕ್ಯೂ 15 ಅಪೆಕ್ಸ್‌ ಮೊಬೈಲ್‌ 6.85 ಇಂಚಿನ Samsung 2K M14 LTPO OLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 144Hz ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್‌ 2600 nits ಗ್ಲೋಬಲ್ ಪೀಕ್ ಬ್ರೈಟ್ನೆಸ್‌ ಪಡೆದಿದೆ. ಈ ಮೊಬೈಲ್‌ Snapdragon 8 Elite Gen 5 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದೆ. ಇದಕ್ಕೆ ಪೂರಕವಾಗಿ 16GB ವರೆಗಿನ RAM ಜೊತೆಗೆ 512GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP68/IP69 ರೇಟಿಂಗ್ ಸೌಲಭ್ಯ ಒಳಗೊಂಡಿದೆ.

ಐಕ್ಯೂ 15 ಅಪೆಕ್ಸ್‌ ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು, ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 50MP ಸೆನ್ಸರ್‌ ಸೌಲಭ್ಯ ಹೊಂದಿವೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಮೆಗಾಪಿಕ್ಸಲ್ ಕ್ಯಾಮೆರಾ ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 7000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 100W ವೈರ್ಡ್ ಚಾರ್ಜಿಂಗ್‌ ಬೆಂಬಲ ಸಹ ಪಡೆದುಕೊಂಡಿದೆ. ಅಲ್ಲದೇ ಇದು ಸಿಮೆಟ್ರಿಕಲ್ ಡ್ರಮ್ ಮಾಸ್ಟರ್ ಸ್ಟೀರಿಯೊ ಸ್ಪೀಕರ್‌ಗಳು, 4D ಡ್ಯುಯಲ್-ಆಕ್ಸಿಸ್ ವೈಬ್ರೇಶನ್ ಮೋಟಾರ್ ಹಾಗೂ ಅಲ್ಟ್ರಾಸಾನಿಕ್ 3D ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆಗಳನ್ನು ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :