ಭಾರತದಲ್ಲಿ iQOO 15 Apex ಎಡಿಷನ್ ಮೊಬೈಲ್ ಬಿಡುಗಡೆ! ಬೆಲೆ ಎಷ್ಟು ನೋಡಿ
ಏಪ್ರಿಲ್ 6 ರಂದು ಐಕ್ಯೂ 15 ಫೋನ್ ಅಪೆಕ್ಸ್ ಫೋನ್ ಸೇಲ್ ಪ್ರಾರಂಭ
ಈ ನೂತನ ಸ್ಮಾರ್ಟ್‌ಫೋನ್ 144Hz ರಿಫ್ರೆಶ್ ರೇಟ್ ಸೌಲಭ್ಯ ಪಡೆದಿದೆ
ಐಕ್ಯೂ ಕಂಪನಿಯ ಈ ಮೊಬೈಲ್ 7000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ
ವಿವೋ ಕಂಪನಿಯ ಸಬ್ ಬ್ರಾಂಡ್ ಆಗಿರುವ iQOO ಇಂದು (ಏಪ್ರಿಲ್ 1 ರಂದು) ಭಾರತದಲ್ಲಿ iQOO 15 Apex ಕಲರ್ ಎಡಿಷನ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 8 ಎಲೈಟ್ ಜನ್ 5 ಚಿಪ್‌ಸೆಟ್ ಪ್ರೊಸೆಸರ್ ಅನ್ನು ಒಳಗೊಂಡಿರುವ ಜೊತೆಗೆ 7,000mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ. ಹಾಗೆಯೇ ಇದು 144Hz ವರೆಗಿನ ರಿಫ್ರೆಶ್ ರೇಟ್ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಹಾಗಾದರೇ iQOO 15 ಅಪೆಕ್ಸ್ ಕಲರ್ ಎಡಿಷನ್ ಸ್ಮಾರ್ಟ್‌ಫೋನ್ ಬೆಲೆ, ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಟ್ರಿಪಲ್ 50MP ಕ್ಯಾಮೆರಾ ಇರುವ Oppo Find X8 Pro ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇಳಿಕೆ!
iQOO 15 Apex ಎಡಿಷನ್ ಮೊಬೈಲ್ ಬೆಲೆ
ಐಕ್ಯೂ ಕಂಪನಿಯು ನೂತನವಾಗಿ iQOO 15 ಅಪೆಕ್ಸ್ ಕಲರ್ ಎಡಿಷನ್ ಆಕರ್ಷಕ ಲುಕ್‌ನಲ್ಲಿ ಗಮನ ಸೆಳೆಯುವಂತಿದೆ. ಈ ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ವೇರಿಯಂಟ್ 72,999 ರೂ.ಗಳ ಬೆಲೆಯನ್ನು ಪಡೆದುಕೊಂಡಿದೆ. ಹಾಗೆಯೇ 16GB + 512GB ಸ್ಟೋರೇಜ್ ವೇರಿಯಂಟ್ 79,999 ರೂ.ಗಳ ಬೆಲೆಯನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ ಇಂದಿನಿಂದ ಪ್ರೀ-ಆರ್ಡರ್‌ಗೆ ಲಭ್ಯವಿದೆ. ಆಸಕ್ತ ಗ್ರಾಹಕರು ಈ ಫೋನ್ ಅನ್ನು ಏಪ್ರಿಲ್ 6 ರಂದು ಮಧ್ಯಾಹ್ನ 12 ಗಂಟೆಗೆ ಐಕ್ಯೂ ವೆಬ್‌ಸೈಟ್, ಅಮೆಜಾನ್, ವಿವೋ ಎಕ್ಸ್‌ಕ್ಲೂಸಿವ್ ಸ್ಟೋರ್‌ಗಳು, ರಿಲಯನ್ಸ್ ಡಿಜಿಟಲ್ ಸೇರಿದಂತೆ ಪ್ರಮುಖ ರೀಟೇಲ್ ಸ್ಟೋರ್‌ಗಳ ಮೂಲಕ ಖರೀದಿಸಬಹುದಾಗಿದೆ.

ಐಕ್ಯೂ 15 ಅಪೆಕ್ಸ್ ಫೀಚರ್ಸ್ ಮಾಹಿತಿ
ಹೊಸ ಐಕ್ಯೂ 15 ಅಪೆಕ್ಸ್ ಮೊಬೈಲ್ 6.85 ಇಂಚಿನ Samsung 2K M14 LTPO OLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 144Hz ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್ 2600 nits ಗ್ಲೋಬಲ್ ಪೀಕ್ ಬ್ರೈಟ್ನೆಸ್ ಪಡೆದಿದೆ. ಈ ಮೊಬೈಲ್ Snapdragon 8 Elite Gen 5 ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 16GB ವರೆಗಿನ RAM ಜೊತೆಗೆ 512GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP68/IP69 ರೇಟಿಂಗ್ ಸೌಲಭ್ಯ ಒಳಗೊಂಡಿದೆ.
ಐಕ್ಯೂ 15 ಅಪೆಕ್ಸ್ ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 50MP ಸೆನ್ಸರ್ ಸೌಲಭ್ಯ ಹೊಂದಿವೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಮೆಗಾಪಿಕ್ಸಲ್ ಕ್ಯಾಮೆರಾ ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 7000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 100W ವೈರ್ಡ್ ಚಾರ್ಜಿಂಗ್ ಬೆಂಬಲ ಸಹ ಪಡೆದುಕೊಂಡಿದೆ. ಅಲ್ಲದೇ ಇದು ಸಿಮೆಟ್ರಿಕಲ್ ಡ್ರಮ್ ಮಾಸ್ಟರ್ ಸ್ಟೀರಿಯೊ ಸ್ಪೀಕರ್‌ಗಳು, 4D ಡ್ಯುಯಲ್-ಆಕ್ಸಿಸ್ ವೈಬ್ರೇಶನ್ ಮೋಟಾರ್ ಹಾಗೂ ಅಲ್ಟ್ರಾಸಾನಿಕ್ 3D ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile