ಟ್ರಿಪಲ್ 50MP ಕ್ಯಾಮೆರಾ ಸೌಲಭ್ಯದ iQOO 15 ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ!
ಐಕ್ಯೂ 15 ಫೋನಿಗೆ ಅಮೆಜಾನ್ನಲ್ಲಿ ಭಾರೀ ಕೊಡುಗೆ
ಐಕ್ಯೂ 15 ಮೊಬೈಲ್ 7,000mAh ಬ್ಯಾಟರಿ ಪಡೆದಿದೆ
ಐಕ್ಯೂ 15 ಸ್ಮಾರ್ಟ್ಫೋನ್ ಮೂರು ಆಕರ್ಷಕ ಕಲರ್ನಲ್ಲಿ ಲಭ್ಯ
ದಸರಾ ಹಬ್ಬದ ಪ್ರಯುಕ್ತ ಅಮೆಜಾನ್ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಐಕ್ಯೂ ಕಂಪನಿಯ iQOO 15 ಮೊಬೈಲ್ ಬೊಂಬಾಟ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 8 ಎಲೈಟ್ ಜೆನ್ 5 ಚಿಪ್ಸೆಟ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ಐಕ್ಯೂ 15 ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Vivo ಕಂಪನಿಯ ಈ ಸ್ಟೈಲಿಶ್ ಸ್ಮಾರ್ಟ್ಫೋನ್ ಬೆಲೆಯಲ್ಲಿ ಜಬರ್ದಸ್ತ್ ಇಳಿಕೆ! ಟ್ರಿಪಲ್ ಕ್ಯಾಮೆರಾ ಸೌಲಭ್ಯ
iQOO 15 ಫೋನಿಗೆ ವಿಶೇಷ ಆಫರ್
ಪ್ರೀಮಿಯಂ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಐಕ್ಯೂ 15 ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 12GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 92,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ 85,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಅಲ್ಫಾ, ಲೆಜೆಂಡ್ ಹಾಗೂ ಅಪೆಕ್ಸ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಐಕ್ಯೂ 15 ಸ್ಮಾರ್ಟ್ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

ಐಕ್ಯೂ 15 ಫೀಚರ್ಸ್ ಮಾಹಿತಿ
ಐಕ್ಯೂ 15 ಮೊಬೈಲ್ 6.85 ಇಂಚಿನ 2K LTPO AMOLED ಡಿಸ್ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 144Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್ಪ್ಲೇಯು 6,000 ನಿಟ್ಸ್ ಬ್ರೈಟ್ನೆಸ್ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 8 ಎಲೈಟ್ ಜೆನ್ 5 ಚಿಪ್ಸೆಟ್ ಪ್ರೊಸೆಸರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ ಓಎಸ್ನಲ್ಲಿ ಕಾರ್ಯನಿರ್ವಹಿಸುತ್ತದೆ.
ಹಾಗೆಯೇ ಐಕ್ಯೂ 15 ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 50 ಮೆಗಾಪಿಕ್ಸೆಲ್ ವೈಲ್ಡ್ ಆಂಗಲ್ ಸೆನ್ಸಾರ್ ರಚನೆ ಹೊಂದಿದೆ. ತೃತೀಯ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 32 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್ಅಪ್ ಜೊತೆಗೆ 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
Disclosure: This Article Contains Affiliate Links
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್ಇಂಡಿಯಾ ಸಂಸ್ಥೆಯ ಗಿಜ್ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
