Amazon Great Summer Sale: 7600mAh ಬ್ಯಾಟರಿ ಇರುವ ಈ ಸ್ಟೈಲಿಶ್‌ ಫೋನ್‌ ಬೆಲೆ ಇಳಿಕೆ!

HIGHLIGHTS

ಅಮೆಜಾನ್‌ನಲ್ಲಿ ಐಕ್ಯೂ 15R ಮೊಬೈಲ್‌ಗೆ ಭರ್ಜರಿ ಆಫರ್‌

ಐಕ್ಯೂ 15R ಮೊಬೈಲ್‌ 7600mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ

ಈ ಮೊಬೈಲ್‌ ಡಾರ್ಕ್ ನೈಟ್ ಮತ್ತು ಟ್ರಯಂಫ್ ಸಿಲ್ವರ್ ಬಣ್ಣದಲ್ಲಿ ಲಭ್ಯ

Amazon Great Summer Sale: 7600mAh ಬ್ಯಾಟರಿ ಇರುವ ಈ ಸ್ಟೈಲಿಶ್‌ ಫೋನ್‌ ಬೆಲೆ ಇಳಿಕೆ!

ಐಕ್ಯೂ ಸಂಸ್ಥೆಯ ಮೊಬೈಲ್‌ ಖರೀದಿಗೆ ಸದ್ಯ ಅಮೆಜಾನ್‌ ಆಯೋಜಿಸಿರುವ Amazon Great Summer Sale ಅತ್ಯುತ್ತಮ ತಾಣ ಆಗಿದೆ. ಹೌದು, ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಐಕ್ಯೂ ಸಂಸ್ಥೆಯ iQOO 15R ಮೊಬೈಲ್‌ ಭರ್ಜರಿ ಬೆಲೆ ಇಳಿಕೆಯಲ್ಲಿ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಐಕ್ಯೂ ಸಂಸ್ಥೆಯ ಈ ಮೊಬೈಲ್‌ Snapdragon 8 Gen 5 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ ಎರಡು ಕಲರ್ ಆಯ್ಕೆಯಲ್ಲಿ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಐಕ್ಯೂ 15R ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಡ್ಯುಯಲ್ ಕ್ಯಾಮೆರಾ ಇರುವ Redmi Note 15 SE 5G ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

Amazon Sale: iQOO 15R ಆಫರ್‌ನಲ್ಲಿ ಲಭ್ಯ

ಐಕ್ಯೂ 15R ಮೊಬೈಲ್‌ ಆಕರ್ಷಕ ಫೀಚರ್ಸ್‌ ಮೂಲಕ ಗಮನ ಸೆಳೆದಿದೆ. ಸದ್ಯ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಗಮನಾರ್ಹ ರಿಯಾಯಿತಿ ಪಡೆದಿದೆ. ಈ ಮೊಬೈಲ್‌ 8GB + 256GB ಸ್ಟೋರೇಜ್‌ ವೇರಿಯಂಟ್‌ ಬೆಲೆ 53,990 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 44,998 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್‌ ಡಾರ್ಕ್ ನೈಟ್ ಮತ್ತು ಟ್ರಯಂಫ್ ಸಿಲ್ವರ್ ಕಲರ್‌ ಆಯ್ಕೆಯನ್ನು ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಮೂಲಕ ಖರೀದಿಸಬಹುದಾಗಿದೆ. ಈ ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

iQOO 15R

ಐಕ್ಯೂ 15R ಮೊಬೈಲ್‌ ಫೀಚರ್ಸ್‌ ಮಾಹಿತಿ

ಐಕ್ಯೂ 15R ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.59 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಅಲ್ಲದೇ ಈ ಫೋನ್‌ ಸ್ಕ್ರೀನ್‌ 5,000 ನಿಟ್ಸ್ ಬ್ರೈಟ್ನೆಸ್‌ ಸಪೋರ್ಟ್‌ ಜೊತೆಗೆ 2750 x 1260 ಪಿಕ್ಸಲ್‌ ರೆಸಲ್ಯೂಶನನ್ನು ಹೊಂದಿದೆ. ಹಾಗೆಯೇ ಈ ನೂತನ ಮೊಬೈಲ್‌ ಕ್ವಾಲ್ಕಾಮ್ Snapdragon 8 Gen 5 ಚಿಪ್‌ಸೆಟ್‌ ಪ್ರೊಸೆಸರ್‌ಸಾಮರ್ಥ್ಯ ಪಡೆದಿದ್ದು ಇದಕ್ಕೆ ಪೂರಕವಾಗಿ Origin OS 6.0 ಸಾಫ್ಟ್‌ವೇರ್ ಒಳಗೊಂಡಿದೆ. ಹಾಗೆಯೇ 256 GB ಹಾಗೂ 512 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಹಾಗೆಯೇ ಐಕ್ಯೂ 15R ಮೊಬೈಲ್‌ 45W ವೈರ್ಡ್ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಜೊತೆಗೆ 7600mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್‌ ಪಡೆದುಕೊಂಡಿದೆ. ಹಿಂಭಾಗದಲ್ಲಿ ಡ್ಯುಯಲ್ ಹಿಂಬದಿಯ ಕ್ಯಾಮೆರಾ ರಚನೆ ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ ಹಾಗೂ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಅದೇ ರೀತಿ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಒದಗಿಸಲಾಗಿದೆ. ಇದರೊಂದಿಗೆ ಈ ಫೋನ್‌ IP68 + IP69 ಧೂಳು ಮತ್ತು ನೀರಿನ ನಿರೋಧಕ ರೇಟಿಂಗ್ ಹೊಂದಿದೆ.

Disclosure: This Article Contains Affiliate Links

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile