ನಾಳೆ iQOO 15R ಸ್ಮಾರ್ಟ್‌ಫೋನ್ ಸೇಲ್ ಪ್ರಾರಂಭ! ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ನಾಳೆ (ಮಾರ್ಚ್ 3 ರಂದು) ಐಕ್ಯೂ 15R ಮೊಬೈಲ್ ಸ್ಮಾರ್ಟ್‌ಫೋನ್ ಸೇಲ್
ಈ ಸ್ಮಾರ್ಟ್‌ಫೋನ್ ಎರಡು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ
ಐಕ್ಯೂ 15R ಮೊಬೈಲ್ Snapdragon 8 Gen 5 ಪ್ರೊಸೆಸರ್ ಪಡೆದುಕೊಂಡಿದೆ
ಐಕ್ಯೂ ಮೊಬೈಲ್ ಬ್ರಾಂಡ್‌ನ ನೂತನ iQOO 15R ಮೊಬೈಲ್ ಈಗಾಗಲೇ ಮಾರುಕಟ್ಟೆಯ ಗಮನ ಸೆಳೆದಿದೆ. ಐಕ್ಯೂ 15R ಮೊಬೈಲ್‌ನ ಮೊದಲ ಮಾರಾಟ ನಾಳೆ ( ಮಾರ್ಚ್ 3 ರಂದು ) ಪ್ರಾರಂಭವಾಗಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ Snapdragon 8 Gen 5 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು ಜೊತೆಗೆ 7600mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ನಾಳೆ ಮಾರಾಟ ಶುರು ಮಾಡಲಿರುವ ಐಕ್ಯೂ 15R ಮೊಬೈಲ್ ಡಾರ್ಕ್ ನೈಟ್ ಮತ್ತು ಟ್ರಯಂಫ್ ಸಿಲ್ವರ್ ಕಲರ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗಾದರೇ ಐಕ್ಯೂ 15R ಮೊಬೈಲ್ ಬೆಲೆ, ಲಭ್ಯತೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Xiaomi 17 ಮತ್ತು Xiaomi 17 Ultra ಬಿಡುಗಡೆ! 200MP ಕ್ಯಾಮೆರಾ, 6,000mAh ಬ್ಯಾಟರಿ ಹೈಲೈಟ್ಸ್
iQOO 15R ಮೊಬೈಲ್ ಬೆಲೆ ಹಾಗೂ ಲಭ್ಯತೆ ಮಾಹಿತಿ
iQOO 15R ಸ್ಮಾರ್ಟ್‌ಫೋನ್ ನಾಳೆ ( ಮಾರ್ಚ್ 3 ರಂದು ) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಮಧ್ಯಾಹ್ನ 12 ಗಂಟೆಗೆ ಮಾರಾಟ ಪ್ರಾರಂಭ ಮಾಡಲಿದೆ. ಇದರ 8 GB + 256 GB ವೇರಿಯಂಟ್ ಬೆಲೆ 44,999 ರೂಗಳು ಆಗಿದೆ. ಅದೇ ರೀತಿ 12 GB + 256 GB ವೇರಿಯಂಟ್ ದರವು 47,999 ರೂಗಳು ಆಗಿದ್ದು ಹಾಗೆಯೇ 12 GB + 512 GB ವೇರಿಯಂಟ್ 52,999 ರೂಗಳ ಬೆಲೆಯಲ್ಲಿ ಮಾರುಕಟ್ಟೆ ಪ್ರವೇಶಿಸಿವೆ. ಇನ್ನು ಈ ಸ್ಮಾರ್ಟ್‌ಫೋನ್ ಡಾರ್ಕ್ ನೈಟ್ ಮತ್ತು ಟ್ರಯಂಫ್ ಸಿಲ್ವರ್ ಕಲರ್ ಆಯ್ಕೆಯನ್ನು ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್ ಮತ್ತು ಐಕ್ಯೂ ಇ-ಸ್ಟೋರ್, ವಿವೋ ಎಕ್ಸ್‌ಕ್ಲೂಸಿವ್ ಸ್ಟೋರ್ ಮತ್ತು ರಿಲಯನ್ಸ್ ಸ್ಟೋರ್‌ಗಳ ಮೂಲಕ ಪ್ರಿ-ಬುಕಿಂಗ್ ಮಾಡಬಹುದಾಗಿದೆ. ಪ್ರಿ-ಬುಕಿಂಗ್ ಮಾಡಿದ ಗ್ರಾಹಕರಿಗೆ ಮಾರ್ಚ್ 2 ರಂದು ಮೊಬೈಲ್ ಕೈಸೇರಲಿದೆ.

iQOO 15R ಮೊಬೈಲ್ ಫೀಚರ್ಸ್ ಮಾಹಿತಿ
ಹೊಸ iQOO 15R ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.59 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಅಲ್ಲದೇ ಈ ಮೊಬೈಲ್ ಸ್ಕ್ರೀನ್ 5,000 ನಿಟ್ಸ್ ಬ್ರೈಟ್ನೆಸ್ ಸಪೋರ್ಟ್ ಜೊತೆಗೆ 2750 x 1260 ಪಿಕ್ಸಲ್ ರೆಸಲ್ಯೂಶನನ್ನು ಹೊಂದಿದೆ. ಹಾಗೆಯೇ ಈ ನೂತನ ಫೋನ್ ಕ್ವಾಲ್ಕಾಮ್ Snapdragon 8 Gen 5 ಚಿಪ್‌ಸೆಟ್ ಪ್ರೊಸೆಸರ್‌ಸಾಮರ್ಥ್ಯ ಪಡೆದಿದ್ದು ಇದಕ್ಕೆ ಪೂರಕವಾಗಿ Origin OS 6.0 ಸಾಫ್ಟ್‌ವೇರ್ ಒಳಗೊಂಡಿದೆ. ಹಾಗೆಯೇ 256 GB ಹಾಗೂ 512 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಹಾಗೆಯೇ iQOO 15R ಮೊಬೈಲ್ 45W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲಿತ ಜೊತೆಗೆ 7600mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್ ಪಡೆದುಕೊಂಡಿದೆ. ಹಿಂಭಾಗದಲ್ಲಿ ಡ್ಯುಯಲ್ ಹಿಂಬದಿಯ ಕ್ಯಾಮೆರಾ ರಚನೆ ಪಡೆದಿದೆ. ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ ಹಾಗೂ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅದೇ ರೀತಿ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಒದಗಿಸಲಾಗಿದೆ. ಇದರ ಜೊತೆಗೆ ಈ ಮೊಬೈಲ್ IP68 + IP69 ಧೂಳು ಮತ್ತು ನೀರಿನ ನಿರೋಧಕ ರೇಟಿಂಗ್ ಹೊಂದಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile