256GB ಸ್ಟೋರೇಜ್ ಇರುವ iQOO 15R ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

HIGHLIGHTS

ಅಮೆಜಾನ್‌ನಲ್ಲಿ ಐಕ್ಯೂ 15R ಮೊಬೈಲ್‌ ಈಗ ಆಫರ್‌ನಲ್ಲಿ ಲಭ್ಯ

ಐಕ್ಯೂ 15R ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿದೆ

256GB ಸ್ಟೋರೇಜ್ ಇರುವ iQOO 15R ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಜನಪ್ರಿಯ ಐಕ್ಯೂ ಮೊಬೈಲ್‌ ಸಂಸ್ಥೆಯ ಇತ್ತೀಚಿನ iQOO 15R ಸ್ಮಾರ್ಟ್‌ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ ಕ್ವಾಲ್ಕಾಮ್ Snapdragon 8 Gen 5 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 7,600mAh ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ ಡಾರ್ಕ್ ನೈಟ್ ಮತ್ತು ಟ್ರಯಂಫ್ ಸಿಲ್ವರ್ ಕಲರ್‌ ಆಯ್ಕೆಯನ್ನು ಪಡೆದುಕೊಂಡಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಐಕ್ಯೂ 15R ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ನಾಳೆ ಮಾರುಕಟ್ಟೆಗೆ ಬರಲಿದೆ 8,000mAh ಬ್ಯಾಟರಿ ಒಳಗೊಂಡ Realme P4R 5G ಫೋನ್‌!

iQOO 15R ಈಗ ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ

ಮೀಡ್‌ರೇಂಜ್‌ ಬೆಲೆಯಲ್ಲಿ ಜೊತೆಗೆ ಕೆಲವು ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ಐಕ್ಯೂ 15R ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 53,990 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 46,998 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ ಡಾರ್ಕ್ ನೈಟ್ ಮತ್ತು ಟ್ರಯಂಫ್ ಸಿಲ್ವರ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

iQOO 15R ಮೊಬೈಲ್‌ ಫೀಚರ್ಸ್‌ ಹೀಗಿವೆ

ಹೊಸ ಐಕ್ಯೂ 15R ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.59 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಅಲ್ಲದೇ ಈ ಮೊಬೈಲ್‌ ಸ್ಕ್ರೀನ್‌ 5,000 ನಿಟ್ಸ್ ಬ್ರೈಟ್ನೆಸ್‌ ಸಪೋರ್ಟ್‌ ಜೊತೆಗೆ 2750 x 1260 ಪಿಕ್ಸಲ್‌ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ ಈ ನೂತನ ಫೋನ್‌ ಕ್ವಾಲ್ಕಾಮ್ Snapdragon 8 Gen 5 ಚಿಪ್‌ಸೆಟ್‌ ಪ್ರೊಸೆಸರ್‌ಸಾಮರ್ಥ್ಯ ಪಡೆದಿದ್ದು ಇದಕ್ಕೆ ಪೂರಕವಾಗಿ Origin OS 6.0 ಸಾಫ್ಟ್‌ವೇರ್ ಒಳಗೊಂಡಿದೆ. ಹಾಗೆಯೇ 256 GB ಹಾಗೂ 512 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಇನ್ನು ಐಕ್ಯೂ 15R ಮೊಬೈಲ್‌ 45W ವೈರ್ಡ್ ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ ಜೊತೆಗೆ 7600mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದೆ. ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ ಹಾಗೂ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಅದೇ ರೀತಿ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ನೀಡಲಾಗಿದೆ. ಇದರ ಜೊತೆಗೆ ಈ ಮೊಬೈಲ್‌ IP68 + IP69 ಧೂಳು ಮತ್ತು ನೀರಿನ ನಿರೋಧಕ ರೇಟಿಂಗ್ ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :