ಗ್ರಾಹಕರ ನಿರೀಕ್ಷೆ ಹೆಚ್ಚಿಸಿರುವ Amazon Great Indian Festival Sale 2026 ಸೇಲ್ ಇದೇ ಅಕ್ಟೋಬರ್ 8 ರಂದು ಶುರುವಾಗಲಿದೆ. ಈ ಮಾರಾಟ ಪ್ರಾರಂಭಕ್ಕೂ ಮುನ್ನವೇ ಅಮೆಜಾನ್ ತಾಣವು ಮೊಬೈಲ್‌ಗಳು ಮತ್ತು ಇತರೆ ಎಲೆಕ್ಟ್ರಾನಿಕ್ ಉತ್ಪನ್ನಗಳ ಮೇಲಿನ ಆಫರ್‌ಗಳನ್ನು ಬಹಿರಂಗಪಡಿಸಲು ಪ್ರಾರಂಭಿಸಿದೆ. ಇದರಿಂದಾಗಿ ಗ್ರಾಹಕರು ಮುಖ್ಯ ಸೇಲ್ ಪ್ರಾರಂಭವಾಗುವ ಮೊದಲೇ ಕೆಲವು ಡಿವೈಸ್‌ಗಳನ್ನು ಖರೀದಿಸುವ ಅವಕಾಶವನ್ನು ಲಭ್ಯವಾಗಿದೆ. ಈ ಮಾರಾಟದಲ್ಲಿ iQOO 15R ಮೊಬೈಲ್ ಆಕರ್ಷಕ ಕೊಡುಗೆ ಪಡೆದಿದೆ. ಇದರೊಂದಿಗೆ ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವ ಮೂಲಕ ಖರೀದಿದಾರರು ಹೆಚ್ಚುವರಿ ರಿಯಾಯಿತಿಯನ್ನೂ ಪಡೆಯಬಹುದು. ಹಾಗಾದರೆ ಅಮೆಜಾನ್‌ನಲ್ಲಿ ಐಕ್ಯೂ 15R ಮೊಬೈಲ್‌ಗೆ ಲಭ್ಯವಿರುವ ಕೊಡುಗೆಯ ಬಗ್ಗೆ ಮುಂದೆ ತಿಳಿಯೋಣ.
Also Read : 12GB RAM ಇರುವ Samsung Galaxy S25 5G ಬೆಲೆಯಲ್ಲಿ ಬೊಂಬಾಟ್ ಇಳಿಕೆ; ಈ ಆಫರ್ ಬಿಡಬೇಡಿ
ಐಕ್ಯೂ ಮೊಬೈಲ್ ಕಂಪನಿಯ ಐಕ್ಯೂ 15R ಸ್ಮಾರ್ಟ್‌ಫೋನ್ ಸದ್ಯದಲ್ಲೇ ಪ್ರಾರಂಭವಾಗಲಿರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2026 ಸೇಲ್‌ನಲ್ಲಿ ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಲಭ್ಯವಾಗಲಿದೆ. ಅಮೆಜಾನ್‌ನಲ್ಲಿ ದೈತ್ಯ ಐಕ್ಯೂ 15R ಮೊಬೈಲ್‌ನ 8GB RAM + 256GB ವೇರಿಯಂಟ್ ಬೆಲೆ 69,999 ರೂ.ಗಳ ಬೆಲೆಯನ್ನು ಹೊಂದಿದೆ. ಆದರೆ ಪ್ರಸ್ತುತ ಇದರ ಬೆಲೆ 53,999 ರೂ.ಗಳು ಎಂದು ಲಿಸ್ಟ್ ಮಾಡಲಾಗಿದೆ.
ಐಕ್ಯೂ 15R ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.59 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಅಲ್ಲದೇ ಈ ಮೊಬೈಲ್ ಸ್ಕ್ರೀನ್ 5,000 ನಿಟ್ಸ್ ಬ್ರೈಟ್ನೆಸ್ ಸಪೋರ್ಟ್ ಜೊತೆಗೆ 2750 x 1260 ಪಿಕ್ಸಲ್ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ ಈ ನೂತನ ಫೋನ್ ಕ್ವಾಲ್ಕಾಮ್ Snapdragon 8 Gen 5 ಚಿಪ್‌ಸೆಟ್ ಪ್ರೊಸೆಸರ್‌ಸಾಮರ್ಥ್ಯ ಪಡೆದಿದ್ದು ಇದಕ್ಕೆ ಪೂರಕವಾಗಿ Origin OS 6.0 ಸಾಫ್ಟ್‌ವೇರ್ ಒಳಗೊಂಡಿದೆ. ಹಾಗೆಯೇ 256 GB ಹಾಗೂ 512 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಇನ್ನು ಐಕ್ಯೂ 15R ಮೊಬೈಲ್ 45W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲಿತ ಜೊತೆಗೆ 7,600mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದೆ. ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ ಹಾಗೂ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅದೇ ರೀತಿ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ನೀಡಲಾಗಿದೆ. ಇದರ ಜೊತೆಗೆ ಈ ಮೊಬೈಲ್ IP68 + IP69 ಧೂಳು ಮತ್ತು ನೀರಿನ ನಿರೋಧಕ ರೇಟಿಂಗ್ ಪಡೆದುಕೊಂಡಿದೆ.