ಇಂದು iQOO 15R ಬಿಡುಗಡೆ! ನಿರೀಕ್ಷಿತ ಫೀಚರ್ಸ್‌ ಹಾಗೂ ಬೆಲೆ ಮಾಹಿತಿ ಇಲ್ಲಿದೆ

Updated on 24-Feb-2026
HIGHLIGHTS

iQOO 15R ಫೋನ್‌ ಇಂದು (ಫೆ 24) ಭಾರತದಲ್ಲಿ ಲಾಂಚ್‌ ಆಗಲಿದೆ

ಈ ಮೊಬೈಲ್‌ Android v16 ಓಎಸ್‌ ಸೌಲಭ್ಯ ಒಳಗೊಂಡಿರಲಿದೆ

iQOO 15R ಮೊಬೈಲ್‌ 32MP ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದಿರಲಿದೆ

ಐಕ್ಯೂ ಮೊಬೈಲ್‌ ಕಂಪನಿಯ ಬಹುನಿರೀಕ್ಷಿತ iQOO 15R ಸ್ಮಾರ್ಟ್‌ಫೋನ್‌ ಇಂದು (ಫೆಬ್ರವರಿ 24 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್‌ ಆಗಲಿದೆ. ಮಾರುಕಟ್ಟೆಗೆ ಲಗ್ಗೆ ಇಡಲಿರುವ ಈ ಸ್ಮಾರ್ಟ್‌ಫೋನ್‌ ಬರೋಬ್ಬರಿ 7600 mAh ಬ್ಯಾಟರಿ ಸಾಮರ್ಥ್ಯ ಒಳಗೊಂಡಿರುವ ಸಾಧ್ಯತೆಗಳು ಇವೆ. ಅಲ್ಲದೇ ಇದು ಕ್ವಾಲ್ಕಮ್‌ Snapdragon 8 Gen 5 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಈ ಮೊಬೈಲ್‌ ಮೀಡ್‌ರೇಂಜ್‌ ಪ್ರಿಮಿಯಂ ವಿಭಾಗದಲ್ಲಿ ಮಾರುಕಟ್ಟೆ ಪ್ರವೇಶಿಸುವ ನಿರೀಕ್ಷೆಗಳು ಇವೆ. ಇನ್ನುಳಿದಂತೆ iQOO 15R ಮೊಬೈಲ್‌ನ ನಿರೀಕ್ಷಿತ ಫೀಚರ್ಸ್‌ ಹಾಗೂ ಬೆಲೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಶೀಘ್ರದಲ್ಲೇ ಕೈಗೆಟುವ ಬೆಲೆಯಲ್ಲಿ iPhone 17e ಲಾಂಚ್‌! ಫೀಚರ್ಸ್‌ ಮತ್ತು ಬೆಲೆ ಮಾಹಿತಿ ಇಲ್ಲಿದೆ

iQOO 15R ಮೊಬೈಲ್‌ ಲಾಂಚ್‌ ಮಾಹಿತಿ

ಐಕ್ಯೂ ಮೊಬೈಲ್‌ ಕಂಪನಿಯ iQOO 15R ಫೋನ್‌ ಇಂದು (ಫೆಬ್ರವರಿ 24 ರಂದು) ಮಧ್ಯಾಹ್ನ 12 ಗಂಟೆಗೆ ಅಮೆಜಾನ್‌ ಇ ಕಾಮರ್ಸ್‌ ತಾಣದ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಅಂದಹಾಗೆ ಅಮೆಜಾನ್‌ ಇ ಕಾಮರ್ಸ್ ತಾಣದಲ್ಲಿ iQOO 15R ಫೋನ್‌ ಲಾಂಚ್ ಕುರಿತಾಗಿ ಮೈಕ್ರೋ ಪೇಜ್‌ ಸಹ ತೆರೆಯಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸುಮಾರು 45,000 ರೂ.ಗಳಿಂದ 55,000 ರೂ.ಗಳ ಪ್ರೈಸ್‌ಟ್ಯಾಗ್‌ನಲ್ಲಿ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಡುವ ಸಾಧ್ಯತೆಗಳು ಇವೆ. ಈ ಮೊಬೈಲ್‌ನ ಅಧಿಕೃತ ಬೆಲೆಯ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.

iQOO 15R ನಿರೀಕ್ಷಿತ ಫೀಚರ್ಸ್‌ ಹೀಗಿವೆ

iQOO 15R ಮೊಬೈಲ್‌ 144Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.59 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿರಲಿದೆ. ಅಲ್ಲದೇ ಈ ಫೋನ್‌ ಸ್ಕ್ರೀನ್‌ 1260×2750 ಪಿಕ್ಸಲ್‌ ರೆಸಲ್ಯೂಶನನ್ನು ಸಪೋರ್ಟ್‌ ಮಾಡಲಿದೆ. ಹಾಗೆಯೇ ಈ ನೂತನ ಮೊಬೈಲ್‌ ಕ್ವಾಲ್ಕಾಮ್ Snapdragon 8 Gen 5 ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಪಡೆದಿರುವ ಜೊತೆಗೆ Funtouch OS 16 ನೊಂದಿಗೆ Android v16 ಓಎಸ್‌ ಇರುವ ಸಾಧ್ಯತೆಗಳು ಅಧಿಕವಾಗಿವೆ. ಇದಕ್ಕೆ ಪೂರಕವಾಗಿ 12GB RAM ಜೊತೆಗೆ 256GB ಹಾಗೂ 512GB ಸ್ಟೋರೇಜ್‌ ಆಯ್ಕೆಗಳು ನೀಡಬಹುದು ಎಂದು ನಿರೀಕ್ಷಿಸಲಾಗಿದೆ.

ಮಾರುಕಟ್ಟೆಗೆ ಎಂಟ್ರಿ ಕೊಡಲಿರುವ iQOO 15R ಫೋನ್‌ 100W ಸೂಪರ್‌ ಫ್ಲ್ಯಾಶ್ ಫಾಸ್ಟ್‌ ಚಾರ್ಜಿಂಗ್ ಬೆಂಬಲದ ಜೊತೆಗೆ 7600mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯದಲ್ಲಿ ಮಾರುಕಟ್ಟೆ ಪ್ರವೇಶಿಸಬಹುದು. ಅಲ್ಲದೇ ಹಿಂಭಾಗದಲ್ಲಿ ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟ್‌ಅಪ್‌ ಪಡೆದಿರಲಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 200MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಕಾಣಿಸಿಕೊಳ್ಳಬಹುದು. ಅದೇ ರೀತಿ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 32MP ಸೆನ್ಸಾರ್‌ನ ಕ್ಯಾಮೆರಾವನ್ನು ಹೊಂದಿರಬಹುದು. ಇದರೊಂದಿಗೆ ಈ ಫೋನ್‌ ಅತ್ಯುತ್ತಮ ವೀಡಿಯೊಗಾಗಿ ಎರಡು ಕ್ಯಾಮೆರಾಗಳಲ್ಲಿಲೂ 2160 fps ನಲ್ಲಿ 4K ರೆಕಾರ್ಡಿಂಗ್ ಅನ್ನು ಬೆಂಬಲ ಮಾಡುತ್ತದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :